ಶಹಾಪುರ: ಯಾದಗಿರಿ ಜಿಲ್ಲೆಯ ಸುರಪುರ ಮತ್ತು ಶಹಾಪುರ ಕೃಷ್ಣಾ ನದಿಯಿಂದ ಅಕ್ರಮ ಮರಳು ಸಾಗಾಟ ರಾಜಾರೋಷದಿಂದ ನಡೆದಿದ್ದು ಇದನ್ನು ತಡೆಗಟ್ಟುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ರೈತ ಸಂಘದ ಮುಖಂಡರಾದ ಮಲ್ಲಿಕಾರ್ಜುನ ಸತ್ಯಂಪೇಟೆ ಆಕ್ರೋಶ ವ್ಯಕ್ತಪಡಿಸಿದರು.
ಹತ್ತಿಗೂಡುರ ಗ್ರಾಮದ ಅಂಬೇಡ್ಕರ್ ಸರ್ಕಲ್ ನಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ, ಮರಳು ಸಾಗಿಸುವ ಟಿಪ್ಪರ್ ರಸ್ತೆ ಮೇಲೆ ಅಡ್ಡಾದಿಡ್ಡಿ ಓಡಾಡುವುದರಿಂದ ಹಲವಾರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ ನಿನ್ನೆ ಕೂಡ ಅತ್ತಿಗೋಡು ಗ್ರಾಮದ ಬಸ್ ನಿಲ್ದಾಣದ ಎದುರುಗಡೆ ಮರಳು ಸಾಗಿಸುವ ಟಿಪ್ಪರ್ ಚಕ್ರದಡಿ ಮೃತಪಟ್ಟಿರುವ ವ್ಯಕ್ತಿ ಕೂಡ ಬಡ ಕೃಷಿ ಕೂಲಿ ಕಾರ್ಮಿಕನಾಗಿದ್ದು ಕೂಡಲೇ ಆತನ ಕುಟುಂಬಕ್ಕೆ ಸರ್ಕಾರದಿಂದ ೨೫ ಲಕ್ಷ ಹಾಗೂ ಗಾಯಾಳುಗೆ 5 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ತಹಸೀಲ್ದಾರರ ಮೂಲಕ ಸರಕಾರಕ್ಕೆ ಮನವಿ ಮಾಡಿಕೊಂಡರು.
ನಿನ್ನೆ ಅಪಘಾತ ನಡೆದ ಸ್ಥಳದಲ್ಲಿ ಸಾಮಾಜಿಕ ಕಾರ್ಯಕರ್ತ ಶರಣರೆಡ್ಡಿ ಹತ್ತಿಗೂಡುರು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತರಾಟೆ ತೆಗೆದುಕೊಂಡು ಅಕ್ರಮ ಮರಳು ಸಾಗಿಸುವಲ್ಲಿ ಪೊಲೀಸರು ಕೂಡ ವಿಫಲರಾಗಿದ್ದಾರೆ ಎಂದಾಗ ಈತನ ವಿರುದ್ಧ ಪೊಲೀಸರು ಸಿಟ್ಟಿಗೆದ್ದು ಬೇಜವಾಬ್ದಾರಿತನದಿಂದ ವರ್ತಿಸಿದ್ದಾರೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಮೃತನ ಕುಟುಂಬಸ್ಥರು ಸಾಮಾಜಿಕ ಕಾರ್ಯಕರ್ತರು ರೈತಪರ ಸಂಘಟನೆಗಳ ಮುಖಂಡರು ಹಾಗೂ ಗ್ರಾಮದ ನಾಗರಿಕರು ಹಾಜರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…