ಕಲಬುರಗಿ: ಹಿರಿಯ ನಾಯಕ ಹಾಗೂ ರಾಜ್ಯ ಸಭಾ ಸದಸ್ಯರಾದ ಶ್ರೀ ಅಹಮದ್ ಪಟೇಲ್ ಅವರ ನಿಧನಕ್ಕೆ ಮತ್ತೊಬ್ಬ ಹಿರಿಯ ನಾಯಕರಾದ ಹಾಗೂ ರಾಜ್ಯಸಭಾ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಸೇರಿದಂತೆ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ
ತಮ್ಮ ಶೋಕ ಸಂದೇಶದಲ್ಲಿ ಶ್ರೀಯುತ ಅಹಮದ್ ಪಟೇಲ್ ಅವರ ಪಕ್ಷ ನಿಷ್ಠೆ ಕೊಂಡಾಡಿರುವ ಮಲ್ಲಿಕಾರ್ಜುನ ಖರ್ಗೆ ಅವರು ಸಂಕಷ್ಟದ ಸಮಯದಲ್ಲಿ ಗಟ್ಟಿಯಾಗಿ ನಿಂತು ಪಕ್ಷವನ್ನು ಮುನ್ನಡೆಸುತ್ತಿದ್ದ ಒಬ್ಬ ಸಮರ್ಥ ನಾಯಕನನ್ನು ಪಕ್ಷ ಹಾಗೂ ಅಸಂಖ್ಯಾತ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕಳೆದುಕೊಂಡಿದ್ದಾರೆ ಎಂದಿದ್ದಾರೆ.
ಅಹಮದ್ ಪಟೇಲ್ ಅವರೊಂದಿಗಿನ ಸುಮಾರು ನಾಲ್ಕು ದಶಕಗಳ ತಮ್ಮ ಒಡನಾಟವನ್ನು ನೆನೆಪಿಸಿಕೊಂಡು ಅಗಲಿದ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಿರುವ ಶ್ರೀಯುತ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಆಧಾರ ಸ್ಥಂಬಗಳಲ್ಲಿ ಒಬ್ಬರಾಗಿದ್ದ ಪಟೇಲ್ ಅವರ ಅಕಾಲಿಕ ನಿಧನ ಪಕ್ಷಕ್ಕೆ ಭರಿಸಲಾಗದ ನಷ್ಠವಾಗಿದೆ ಎಂದಿದ್ದಾರೆ.
ಪಕ್ಷದ ಕಾರ್ಯಕರ್ತರ ಸಲುವಾಗಿ ದಿನದ ಬಹುತೇಕ ಸಮಯ ಮೀಸಲಿಡುತ್ತಿದ್ದ ಅವರು ಪಕ್ಷದ ತತ್ವ ಹಾಗೂ ಸಿದ್ದಾಂತದ ಪರಿಪಾಲಕರಾಗಿದ್ದರು. ಅವರ ನಿಧನದ ದುಃಖ ಭರಿಸುವ ಶಕ್ತಿ ಅವರ ಕುಟುಂಬ ವರ್ಗದವರಿಗೆ ಆ ಭಗವಂತ ಕರುಣಿಸಲಿ ಎಂದು ತಮ್ಮ ಶೋಕ ಸಂದೇಶದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…