ಶಹಾಪುರ: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿರುವ ಸಂಗತಿ ನಿಜಕ್ಕೂ ನಮ್ಮ ಸಮಾಜಕ್ಕೆ ಹೆಮ್ಮೆ ತರುವಂತಹ ಸಂಗತಿಯಾಗಿದೆ ಎಂದು ಸಗರದ ವೀರಭದ್ರಯ್ಯಸ್ವಾಮಿ ಹರ್ಷ ವ್ಯಕ್ತಪಡಿಸಿದರು.
ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪನವರಿಗೆ ಈ ಸಂದರ್ಭದಲ್ಲಿ ತುಂಬು ಹೃದಯದ ಅಭಿನಂದನೆಗಳು ಸಲ್ಲಿಸಬೇಕಾಗುತ್ತದೆ.
ಹಲವಾರು ವರ್ಷಗಳ ಕನಸು ಇಂದು ನನಸಾಗಿದೆ ನಮ್ಮ ಸಮಾಜದ ಮಕ್ಕಳ ಹಾಗೂ ಇತರಿಗಾಗಿ ಶೈಕ್ಷಣಿಕವಾಗಿ ಸಾಮಾಜಿಕವಾಗಿ ಧಾರ್ಮಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಈ ಸಂದರ್ಭದಲ್ಲಿ ನುಡಿದರು.