ಸುರಪುರ: ಇಂದು ಯಾವುದೇ ವಿದ್ಯೂತ್ ಸರಬರಾಜು ಅಥವಾ ಬೇರಾವುದೆ ವಿದ್ಯೂತ್ ವಿತರಣೆಗೆ ಸಂಬಂಧಿಸಿದ ಕೆಲಸಗಳಿದ್ದರೆ ಯಾದಗಿರಿಗೆ ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಸುರಪುರ ತಾಲೂಕು ಜಿಲ್ಲೆಯಲ್ಲಿಯೇ ದೊಡ್ಡ ತಾಲೂಕಾಗಿದ್ದು ಇಲ್ಲಿ ನೂರೈವತ್ತಕ್ಕು ಹೆಚ್ಚು ಹಳ್ಳಿಗಳಿವೆ ಅಲ್ಲದೆ ನಾರಾಯಣಪುರ ಭಾಗದ ಜನರು ಯಾದಗಿರಿಗೆ ಹೋಗಬೇಕಾದರೆ ಸುಮಾರು ೧೫೦ ಕಿಲೋ ಮೀಟರ್ಗಿಂತ ದೂರಾಗಲಿದೆ ಇದರಿಂದ ಜನರು ಯಾದಗಿರಿಗೆ ಹೋಗಿ ಬರಲು ತೊಂದರೆಯಾಗಲಿದೆ,ಆದ್ದರಿಂದ ಸುರಪುರ ನಗರದಲ್ಲಿಯೇ ವಿದ್ಯೂತ್ ವಿಭಾಗೀಯ ಕಚೇರಿಯನ್ನು ಆರಂಭಿಸುವಂತೆ ಲೋಕ ಜನಶಕ್ತಿ ಪಕ್ಷದ ಜಿಲ್ಲಾಧ್ಯಕ್ಷ ರಾಜಾ ಅಪ್ಪಾರಾವ್ ನಾಯಕ ಸರಕಾರಕ್ಕೆ ಒತ್ತಾಯಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು ಸುರಪುರ ನಗರದಲ್ಲಿ ವಿದ್ಯೂತ್ ವಿಭಾಗೀಯ ಕಚೇರಿ ಆರಂಭಿಸುವುದರಿಂದ ರೈತರಿಗೆ ಮತ್ತು ಸಾರ್ವಜನಿಕರಿಗು ತುಂಬಾ ಅನುಕೂಲವಾಗಲಿದೆ.ಆದ್ದರಿಂದ ಈ ನಮ್ಮ ಬೇಡಿಕೆಗೆ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಸಿರಸ್ತೆದಾರ ಸೋಮನಾಥ ನಾಯಕ ಅವರ ಮೂಲಕ ಸಲ್ಲಿಸಿದ್ದಾರೆ.ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ದುರ್ಗಪ್ಪ ಬಡಿಗೇರ ನಾಗರಾಳ ಇದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…