ಬಿಸಿ ಬಿಸಿ ಸುದ್ದಿ

ಎಸ್​ಟಿ ಪ್ರಮಾಣ ಪತ್ರಕ್ಕಾಗಿ ಡಿಸಿ ಕಚೇರಿ ಎದುರು ಆತ್ಮಹತ್ಯೆಗೆ ಯತ್ನ

ಕಲಬುರಗಿ: ​ಎಸ್​ಟಿ ಪ್ರಮಾಣ ಪತ್ರ ನೀಡೋದಾಗಿ ಡಿಸಿ ಭರವಸೆ ನೀಡುವಂತೆ ಪಟ್ಟು ಹಿಡಿದು ಪ್ರತಿಭಟನಾ ನಿರತ ವ್ಯಕ್ತಿಯೊಬ್ಬ ಮರಕ್ಕೆ ಹಗ್ಗ ಹಾಕಿ ನೇಣು ಬೀಗಿದುಕೊಳ್ಳಲು ಯತ್ನಿಸಿರುವ ಘಟನೆ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಗಡೆ ಇಂದು ನಡೆದಿದೆ.

ವಿಕಲಚೇತನ ನಾಗಪ್ಪ ತಳವಾರ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ, ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ತಳವಾರ ಸಮುದಾಯಕ್ಕೆ ಎಸ್​ಟಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ನೂರಾರು ಪ್ರತಿಭಟನಾಕಾರರು ಪ್ರತಿಭಟನೆ ನಡೆಸುತ್ತಿದರು. ಕೇಂದ್ರ ಸರಕಾರ ತಳವಾರ ಪರಿವಾರಕ್ಕೆ ಎಸ್.ಟಿ ಪ್ರಮಾಣ ಪತ್ರ ನೀಡಬೇಕೆಂದು ಆದೇಶಿದ್ದು, ರಾಜ್ಯ ಸರಕಾರ ಸಮುದಾಯವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯಸುತ್ತಿದೆ ಎಂದು ಆರೋಪಿಸಿದರು.

ಈ ವೇಳೆಯಲ್ಲಿ ತಾಳಮೇ ಕಳೆದುಕೊಂಡ ನಾಗಪ್ಪ ತಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಇರುವ ಮರಕ್ಕೆ ಹಗ್ಗ ಹಾಕಿ ಆತ್ಮಹತ್ಯೆಗೆ ಯತ್ನಿಸಿದರು. ತಕ್ಷಣ ಸ್ಥಳದಲ್ಲಿದ್ದ ಪೊಲೀಸರು ಹಗ್ಗ ಕಸಿದುಕೊಂಡು ನಂತರ ನಾಗಪ್ಪನನ್ನು ಮರದಿಂದ ಕೆಳಗಿಳಿಸಿ ರಕ್ಷಣೆ ಮಾಡಿದ್ದಾರೆ. ಎಸ್​ಟಿ ಪ್ರಮಾಣ ಪತ್ರ ನೀಡಲು ಏಕೆ ವಿಳಂಬ ಮಾಡಲಾಗುತ್ತಿದೆ ಎಂದು ನಾಗಪ್ಪ ಆಕ್ರೋಶ ವ್ಯಕ್ತ ಪಡಿಸಿದರು. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಬಾರದ ಕಾರಣ ಆಕ್ರೋಶಗೊಂಡ ಪ್ರತಿಭಟನಾಕಾರು ಡಿಸಿ ಕಚೇರಿ ಎದುರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಈ ವೇಳೆಯಲ್ಲಿ ಹೋರಾಟಗಾರರು ಜಿಲ್ಲಾಡಳಿತ ಹಾಗೂ ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

8 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

8 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

10 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

10 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

11 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

11 hours ago