ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಭಾರತದ ಸಂವಿಧಾನ ಸರ್ವರಿಗೂ ಸಮಬಾಳು-ಸಮಪಾಲು ನೀಡಿದೆ: ಇಂಚರ ನಾರಾಯಣಸ್ವಾಮಿ

0
85

ಕೋಲಾರ : ತಾಲೂಕಿನ ಖಾಜಿ ಕಲ್ಲಹಳ್ಳಿ ಗ್ರಾಮದಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸಂವಿಧಾನ ಸಮರ್ಪಣಾ ದಿನವನ್ನು ಸಂವಿಧಾನದ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಇಂಚರ ನಾರಾಯಣಸ್ವಾಮಿ ರವರು ಮಾತನಾಡಿ ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾದ ಸಂವಿಧಾನವು ಸರ್ವರಿಗೂ ಸಮಬಾಳು-ಸಮಪಾಲು ನೀಡಿದೆ ಎಂದರು.

Contact Your\'s Advertisement; 9902492681

ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲೂ ಸಹೋದರತೆ ಮೂಡಿಸುವುದಕ್ಕೆ ರಾಷ್ಟ್ರಕ್ಕೆ ಸಂವಿಧಾನ ಅರ್ಪಣೆಗೊಂಡಿರುತ್ತದೆ. ಇದರಿಂದ ದೇಶದ ಎಲ್ಲಾ ಪ್ರಜೆಗಳಿಗೆ ಸಾಮಾಜಿಕ. ಆರ್ಥಿಕ. ರಾಜಕೀಯ. ನ್ಯಾಯ. ವಿಚಾರ. ಅಭಿವ್ಯಕ್ತಿ. ನಂಬಿಕೆ. ಧರ್ಮ. ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ಸ್ಥಾನ ಮಾನ ಮತ್ತು ಅವಕಾಶಗಳ ಸಮಾನತೆಯ ಅವಕಾಶ ಲಭಿಸಿದೆ. ಭಾರತೀಯರಾದ ಎಲ್ಲರೂ ವಿಶೇಷವಾಗಿ ವಿದ್ಯಾರ್ಥಿ ಯುವ ಸಮುದಾಯ ಭಾರತದ ಮೂಲ ಪೀಠಿಕೆಯನ್ನು ಓದಿ ಅರ್ಥ ಮಾಡಿಕೊಂಡು ದೇಶದಲ್ಲಿ ಎಲ್ಲರೂ ಗೌರವ. ಘನತೆ. ಸ್ವಾಭಿಮಾನದಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಎಂ ಪಿ ನಾರಾಯಣಸ್ವಾಮಿ. ಮುಖ್ಯ ಶಿಕ್ಷಕರಾದ ಇಂಚರ ನಾರಾಯಣಸ್ವಾಮಿ. ಶಾಲಾ ಸಿಬ್ಬಂದಿ ಎಂ ವಿ ಸುಜಾತ. ನರಸಾಪುರ ಗ್ರಾಮದ ಆರೋಗ್ಯ ಕೇಂದ್ರದ ಜೂನಿಯರ್ ಹೆಲ್ತ್ ಕೇರ್ ಅಸಿಸ್ಟೆಂಟ್ ರೇಣುಕಾ. ಅಂಗನವಾಡಿ ಕಾರ್ಯಕರ್ತೆ ತಿಮ್ಮಕ್ಕ. ಹಾಗೂ ಆಶಾ ಕಾರ್ಯಕರ್ತೆ ಶೋಭ ರವರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here