ಬಿಸಿ ಬಿಸಿ ಸುದ್ದಿ

ಅಖಿಲ ಭಾರತ ಮುಷ್ಕರಕ್ಕೆ ಎಡ ವಿದ್ಯಾರ್ಥಿ ಸಂಘಟನೆಗಳ ಬೆಂಬಲ

ರಾಯಚೂರು : ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಾರಿಗೊಳಿಸಲು ಹೊರಟಿರುವ ರೈತ, ಕಾರ್ಮಿಕ ಮತ್ತು ಜನ ವಿರೋಧಿ ಮಸೂದೆಗಳನ್ನು ವಿರೋಧಿಸಿ ಕಾರ್ಮಿಕ, ರೈತ ಸಂಘಟನೆಗಳು ಕರೆ ಕೊಟ್ಟಿರುವ ಅಖಿಲ ಭಾರತ ಮುಷ್ಕರ ವನ್ನು ಬೆಂಬಲಿಸಿ ರಾಯಚೂರಿನಲ್ಲಿ ಇಂದು ವಿದ್ಯಾರ್ಥಿ ಸಂಘಟನೆಗಳಾದ SFI, AIDSO ಮತ್ತು KVS ಸಂಘಟನೆ ಗಳು ಜಂಟಿಯಾಗಿ ಪ್ರತಿಭಟನೆ ನಡೆಸಿದರು.

ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿ ಪ್ರತಿಭಟನೆ ಮಾಡಿ ನಂತರ ಮುಷ್ಕರದಲ್ಲಿ ಪಾಲ್ಗೊಂಡರು. ಮುಷ್ಕರ ವನ್ನು ಉದ್ದೇಶಿಸಿ SFI ರಾಜ್ಯ ಉಪಾಧ್ಯಕ್ಷರಾದ ಶಿವಕುಮಾರ ಮ್ಯಾಗಳಮನಿ, AIDSO ಜಿಲ್ಲಾ ಅಧ್ಯಕ್ಷ ಮಹೇಶ್ ಚೀಕಲಪರ್ವಿ, SFI ಜಿಲ್ಲಾ ಕಾರ್ಯದರ್ಶಿ ಲಿಂಗರಾಜ ಕಂದಗಲ್ ಮಾತನಾಡಿದರು.

ಕೇಂದ್ರ ಸರ್ಕಾರವು ಜಾರಿ ಮಾಡಲು ಹೊರಟಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಹಿಂದಿ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಇದ್ದು, ಭಾರತದ ಇನ್ನುಳಿದ ರಾಷ್ಟ್ರೀಯ ಪ್ರಾದೇಶಿಕ ಭಾಷೆಗಳಲ್ಲಿ ಇಲ್ಲ ಮತ್ತು ಸಾರ್ವಜನಿಕವಾಗಿ ಹಾಗೂ ಕೇಂದ್ರ ಹಾಗೂ ರಾಜ್ಯಗಳ ಶಾಸನ ಸಭೆಯಲ್ಲಿ ಚರ್ಚೆಯಾಗದೆ, ಅದರ ಸಾಧಕ-ಬಾಧಕಗಳನ್ನು ಅರಿಯದೆ ಜಾರಿ ಮಾಡಲು ಹೊರಟಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತದೆ. ಮೇಲುನೋಟಕ್ಕೆ ಹೊಸ ಶಿಕ್ಷಣ ನೀತಿ ಎಲ್ಲರೂ ಒಪ್ಪಿಕೊಳ್ಳುವಂತಿದ್ದರೂ, ಅದರ ಅಂತರ್ಯದಲ್ಲಿ ಶಿಕ್ಷಣದ ಖಾಸಗೀಕರಣ ಕೇಸರಿಕರಣ ಇತಿಹಾಸ ತಿರುಚುವಿಕೆ ಅಂತ ಹತ್ತು ಹಲವು ಅಂಶಗಳು ಅಡಕವಾಗಿರುವುದು ಕಾಣುತ್ತದೆ. ನಮ್ಮ ರಾಜ್ಯದಲ್ಲಿ ಸಹ ಕೇಂದ್ರದ ಒತ್ತಡದ ಮೇರೆಗೆ ಯಾವುದೇ ರೀತಿಯ ಜನಾಭಿಪ್ರಾಯ ಸಂಗ್ರಹಿಸದೆ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ಮಾಡುವುದನ್ನು ಕರ್ನಾಟಕ ರಾಜ್ಯದ ಎಡ ವಿದ್ಯಾರ್ಥಿ ಸಂಘಟನೆಗಳು ಎಸ್ಎಫ್ಐ, ಎಐಡಿಎಸ್ಓ, ಕೆವಿಎಸ್ ಸೇರಿ ಇತರ ಎಡ ಮತ್ತು ಪ್ರಗತಿಪರ ವಿದ್ಯಾರ್ಥಿ ಸಂಘಟನೆಗಳು ಜಂಟಿಯಾಗಿ ಖಂಡಿಸುತ್ತವೆ. ರಾಜ್ಯ ಸರ್ಕಾರ ಹೊಸ‌ ರಾಷ್ಟ್ರೀಯ ಶಿಕ್ಷಣ ನೀತಿ-೨೦೨೦ ಜಾರಿಯನ್ನು ಚರ್ಚೆಗೆ ಬಿಡಬೇಕು ಅದರಲ್ಲಿನ ಶಿಕ್ಷಣದ ಕೇಸರೀಕರಣ ಕೇಂದ್ರೀಕರಣ ಕೋಮುವಾದೀಕರಣ ಹೇರುವ ಅಂಶಗಳನ್ನು ಕೈಬಿಡಬೇಕು ಹಾಗೂ ಈ ಶಿಕ್ಷಣ ನೀತಿಯ ಸಾಧಕ-ಬಾಧಕಗಳನ್ನು ಅರಿತು ನಂತರ ಲೋಪ ದೋಷಗಳನ್ನು ಸರಿಪಡಿಸಬೇಕು ಆಗ್ರಹಿಸಿದರು.

ಶಿಕ್ಷಣ ಕ್ಷೇತ್ರ ಸಂವಿಧಾನದ ಶೆಡ್ಯೂಲ್ -07 ರಂತೆ ಸಮವರ್ತಿ ಪಟ್ಟಿಯಲ್ಲಿ ಬರುತ್ತದೆ. ಆದರೆ ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ರಾಜ್ಯ ಸರ್ಕಾರಗಳಿಗೆ ಇರುವ ಶಿಕ್ಷಣ ಕ್ಷೇತ್ರ ಅಧಿಕಾರ, ಹಕ್ಕುಗಳನ್ನು ಮೊಟಕುಗೊಳಿಸಿ ಶಿಕ್ಷಣವನ್ನು ನೀತಿ ನಿರೂಪಣೆಯ ಅಧಿಕಾರಿಗಳನ್ನು ಕೇಂದ್ರೀಕರಣಗೊಳಿಸುವ ಅಂಶಗಳನ್ನು ನಮ್ಮ ರಾಜ್ಯ ಸರ್ಕಾರ ವಿರೋಧಿಸಬೇಕುು ಎಂದು ಒತ್ತಾಯಿಸಿದರು.

ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯದ ಸರ್ಕಾರಕ್ಕಿರುವ ಅಧಿಕಾರ, ಹಕ್ಕುಗಳನ್ನು ಕಾಯ್ದಿರಿಸಲು ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಒಕ್ಕೂಟ ವ್ಯವಸ್ಥೆಯ ಆಶಯಗಳ ಉಳಿಸಲು ಮುಂದಾಗಬೇಕು. ಸರ್ಕಾರವೇ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ 2020 ಯನ್ನು ಸಂವಿಧಾನದ ಮಾನ್ಯತೆ ಪಡೆದ ಎಲ್ಲ ಭಾಷೆಗಳಿಗೆ ಅನುವಾದಿಸಿ ಅಧ್ಯಯನಕ್ಕೆ ಅವಕಾಶ ನೀಡಿ. ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆಗಳು, ಅಂಗನವಾಡಿ, ಬಿಸಿಯೂಟ, ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲರೂ ಚರ್ಚಿಸಿ ತಿದ್ದುಪಡಿ ಸಲಹೆಗಳನ್ನು ನೀಡಲು ಅಗತ್ಯವಾದ ಕಾಲಾವಕಾಶ ನೀಡಬೇಕೆಂದು ಆಗ್ರಹಿಸಿದರು.

ಕೇಂದ್ರ ಸರ್ಕಾರದ ಸಚಿವ ಸಂಪುಟ ಅನುಮೋದಿತ ಹೊಸ ರಾಷ್ಟೀಯ ಶಿಕ್ಷಣ ನೀತಿಯ ಕುರಿತು ರಾಜ್ಯ ವಿಧಾನಸಭೆ, ವಿಧಾನ ಪರಿಷತ್ತಿನ ಉಭಯ ಸದನಗಳಲ್ಲಿ ಸಮಗ್ರ ಚರ್ಚೆ ನಡೆಸಬೇಕು.ಜೊತೆಗೆ ಕೊವೀಡ್ -19 ಕಾಲಾವಧಿಯಲ್ಲಿ ದೇಶದ ಭವಿಷ್ಯವನ್ನು ರೂಪಿಸುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ 2020 ಜಾರಿಯ ಕುರಿತು ರಾಜ್ಯ ಸರ್ಕಾರದ ಮಂತ್ರಿಗಳು ನಡೆಸುತ್ತಿರುವ ಏಕಮುಖವಾದ, ಅಪ್ರಜಾಸತ್ತಾತ್ಮಕವಾಗಿ ಅನುಷ್ಠಾನದ ತಯಾರಿಗಳನ್ನು ಕೈ ಬಿಡಲು ಒತ್ತಾಯಿಸಿವೆ ಮತ್ತು ದೇಶ ಮತ್ತು ರಾಜ್ಯದಲ್ಲಿ ಜಾರಿ ಮಾಡಲು ಮುಂದಾಗಿರುವ ರೈತ, ಕಾರ್ಮಿಕ ಮತ್ತು ಜನ ವಿರೋಧಿ ಮಸೂದೆಯನ್ನು ವಾಪಸು ಪಡೆದು ದೇಶದ ಜನರ ಹಿತ ಕಾಪಾಡುವ ನಿಟ್ಟಿನಲ್ಲಿ ಗಮನ ಹರಿಸಬೇಕೆಂದು ಒತ್ತಾಯಿಸಲಾಯಿತು.

ಈ ಸಂಧರ್ಭದಲ್ಲಿ SFI ರಾಜ್ಯ ಉಪಾಧ್ಯಕ್ಷರಾದ ಶಿವಕುಮಾರ ಮ್ಯಾಗಳಮನಿ, ಜಿಲ್ಲಾ ಕಾರ್ಯದರ್ಶಿ ಲಿಂಗರಾಜ ಕಂದಗಲ್, AIDSO ಜಿಲ್ಲಾಧ್ಯಕ್ಷ ಮಹೇಶ್ ಚೀಕಲಪರ್ವಿ, KVS ಸಂಚಲಕರಾದ ಲಕ್ಷ್ಮಣ್ ಮಂಡಲಗೇರಾ, ಮುಖಂಡರಾದ ಚಿದಾನಂದ ಕರಿಗೂಳಿ, ಬಸವರಾಜ ದೀನಸಮುದ್ರ, ಅರುಣ್ ಕುಮಾರ್, ಪೀರ್ ಸಾಬ್, ಚಿನ್ನಪ್ಪ ಸೇರಿ ಇತರರಿದ್ದರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

3 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

3 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

5 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

5 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

5 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

5 hours ago