ಅಸಂವಿಧಾನಿಕ ನೀತಿಗಳ ವಿರುದ್ಧ ವಿದ್ಯಾರ್ಥಿ ಸಂಘಟನೆಗಳಿಂದ ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆ

0
64

ಕಲಬುರಗಿ: ಕೇಂದ್ರ ಸರ್ಕಾರವು ಜಾರಿ ಮಾಡಲು ಹೊರಟಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಹಿಂದಿ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಇದ್ದು, ಭಾರತದ ಇನ್ನುಳಿದ ರಾಷ್ಟ್ರೀಯ ಪ್ರಾದೇಶಿಕ ಭಾಷೆಗಳಲ್ಲಿ ಇಲ್ಲ ಮತ್ತು ಸಾರ್ವಜನಿಕವಾಗಿ ಹಾಗೂ ಕೇಂದ್ರ ಹಾಗೂ ರಾಜ್ಯಗಳ ಶಾಸನ ಸಭೆಯಲ್ಲಿ ಚರ್ಚೆಯಾಗದೆ, ಅದರ ಸಾಧಕ-ಬಾಧಕಗಳನ್ನು ಅರಿಯದೆ ಜಾರಿ ಮಾಡಲು ಹೊರಟಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತದೆ ಎಂದು KVS ಜಿಲ್ಲಾ ಸಂಚಾಲಕರಾದ ರಾಜೇಂದ್ರ ರಾಜವಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಅಖಿಲ ಭಾರತ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿ ನಗರದಲ್ಲಿ ನಡೆದ ಪ್ರತಿಭಟನೆಯ ವಿದ್ಯಾರ್ಥಿ ಸಂಘಟನೆ ನೇತೃತ್ವ ವಹಿಸಿ ಮಾತನಾಡಿದ ಅವರು, ಮೇಲುನೋಟಕ್ಕೆ ಹೊಸ ಶಿಕ್ಷಣ ನೀತಿ ಎಲ್ಲರೂ ಒಪ್ಪಿಕೊಳ್ಳುವಂತಿದ್ದರೂ, ಅದರ ಅಂತರ್ಯದಲ್ಲಿ ಶಿಕ್ಷಣದ ಖಾಸಗೀಕರಣ ಕೇಸರಿಕರಣ ಇತಿಹಾಸ ತಿರುಚುವಿಕೆ ಅಂತ ಹತ್ತು ಹಲವು ಅಂಶಗಳು ಅಡಕವಾಗಿರುವುದು ಕಾಣುತ್ತದೆ. ನಮ್ಮ ರಾಜ್ಯದಲ್ಲಿ ಸಹ ಕೇಂದ್ರದ ಒತ್ತಡದ ಮೇರೆಗೆ ಯಾವುದೇ ರೀತಿಯ ಜನಾಭಿಪ್ರಾಯ ಸಂಗ್ರಹಿಸದೆ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ಮಾಡುವುದನ್ನು ಕರ್ನಾಟಕ ರಾಜ್ಯದ ಎಡ ವಿದ್ಯಾರ್ಥಿ ಸಂಘಟನೆಗಳು  ಎಸ್ಎಫ್ಐ, ಎಐಡಿಎಸ್ಓ,  ಕೆವಿಎಸ್  ವಿದ್ಯಾರ್ಥಿ ಸಂಘಟನೆಗಳು ಜಂಟಿಯಾಗಿ ಖಂಡಿಸುತ್ತವೆ ಎಂದು ತಿಳಿಸಿದರು.

Contact Your\'s Advertisement; 9902492681

ರಾಜ್ಯ ಸರ್ಕಾರ  ಹೊಸ‌ ರಾಷ್ಟ್ರೀಯ ಶಿಕ್ಷಣ ನೀತಿ-೨೦೨೦ ಜಾರಿಯನ್ನು  ಚರ್ಚೆಗೆ ಬಿಡಬೇಕು ಅದರಲ್ಲಿನ ಶಿಕ್ಷಣದ ಕೇಸರೀಕರಣ ಕೇಂದ್ರೀಕರಣ ಕೋಮುವಾದೀಕರಣ ಹೇರುವ ಅಂಶಗಳನ್ನು ಕೈಬಿಡಬೇಕು ಹಾಗೂ ಈ ಶಿಕ್ಷಣ ನೀತಿಯ ಸಾಧಕ-ಬಾಧಕಗಳನ್ನು ಅರಿತು ನಂತರ ಲೋಪ ದೋಷಗಳನ್ನು ಸರಿಪಡಿಸಬೇಕು ಎಂದು SFI ಜಿಲ್ಲಾ ಕಾರ್ಯದರ್ಶಿ ಸಿದ್ದಲಿಂಗ ಪಾಳ ಆಗ್ರಹಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here