ಬಿಸಿ ಬಿಸಿ ಸುದ್ದಿ

ಸಾರ್ವತ್ರಿಕ ಮುಷ್ಕರ: ಎಐಯುಟಿಯುಸಿ ಪ್ರತಿಭಟನೆ

ವಾಡಿ: ದೇಶದಲ್ಲಿ ಹಿಂದೆಂದೂ ಕಾಣದಂತಹ ಅತ್ಯಂತ ಕೆಟ್ಟ ಕರಾಳ ದಿನಗಳನ್ನು ಕಾಣುತ್ತಿದ್ದೇವೆ. ಕೇಂದ್ರ ಬಿಜೆಪಿ ಸರಕಾರ ರೈತ-ಕಾರ್ಮಿಕರ ಮರಣ ಶಾಸನ ಬರೆದು ದುಡಿಯುವ ಜನಗಳ ಸಮಾದಿ ಕಟ್ಟುತ್ತಿದೆ ಎಂದು ರೈತ ಕೃಷಿ ಕಾರ್ಮಿಕ ಸಂಘಟನೆಯ ಜಿಲ್ಲಾ ಸಮಿತಿ ಸದಸ್ಯ ಗುಂಡಣ್ಣ ಎಂ.ಕೆ ಆರೋಪಿಸಿದರು.

ವಿವಿಧ ರೈತ-ಕಾರ್ಮಿಕ ಸಂಘಟನೆಗಳು ಕರೆ ನೀಡಿದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಬೆಂಬಲಿಸಿ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ನೇತೃತ್ವದಲ್ಲಿ ಗುರುವಾರ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆ ಉದ್ದೇಶಿಸಿ ಅವರು ಮಾತನಾಡಿದರು. ಸರಕಾರ ರೂಪಿಸಿದ ಜನವಿರೋಧಿ ಶಾಸನಗಳು ಸಂವಿಧಾನಿಕವಾಗಿ ಸಂಸತ್‌ನಲ್ಲಿ ಹಾಗೂ ಸಾರ್ವಜನಿಕವಾಗಿ ಚರ್ಚೆಯಿಲ್ಲದೆ ಅಂಗೀಕಾರಗೊಳ್ಳುತ್ತಿವೆ. ಕರಾಳ ಮಸೂಧೆಗಳು ಶ್ರಮಿಕರ ಕೊರಳು ಸುತ್ತುತ್ತಿವೆ. ಬದಲಾದ ಶಿಕ್ಷಣ ವ್ಯವಸ್ಥೆಯಿಂದ ವಿದ್ಯಾರ್ಥಿ-ಯುವಜನರ ಭವಿಷ್ಯ ಸಂಕಷ್ಟಕ್ಕೆ ನೂಕಲ್ಪಟ್ಟಿದೆ. ಎಲ್ಲವೂ ಖಾಸಗೀಕರಣಗೊಳಿಸಿ ಉದ್ಯಮಿಪತಿಗಳ ಮಾದಕ್ಕೆ ಅರ್ಪಿಸಲು ಮೋದಿ ಸರಕಾರ ತುದಿಗಾಲ ಮೇಲೆ ನಿಂತಿದೆ. ಅನ್ಯಾಯಗಳ ವಿರುದ್ಧ ದನಿ ಎತ್ತುವ ಹೋರಾಟಗಾರರನ್ನು ಬರಹಗಾರರನ್ನು ಬಂಧಿಸಲಾಗುತ್ತಿದೆ. ಸರಕಾರದ ವಿರುದ್ಧ ಮಾತನಾಡುವವರನ್ನು ದೇಶದ್ರೋಹದ ಪಟ್ಟ ಕಟ್ಟಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ರೈತ ನಾಯಕ ಗುಂಡಣ್ಣ, ಸಂಘಟಿತ ಹೋರಾಟಗಳು ಭುಗಿಲೇಳದಿದ್ದರೆ ಸರಕಾರ ನಮ್ಮನ್ನು ತುಳಿದು ಹಾಕುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಎಐಯುಟಿಯುಸಿ ಜಿಲ್ಲಾ ಜಂಟಿ ಕಾರ್ಯದರ್ಶಿ ಶರಣು ಹೇರೂರ ಮಾತನಾಡಿ, ಇದೂವರೆಗೂ ಜಾರಿಗೊಂಡ ಹೊಸ ಮಸೂಧೆಗಳಲ್ಲಿ ಕಾರ್ಮಿಕರ ಹಲವು ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ. ಬಂಡವಾಳಶಾಹಿಗಳ ಪರ ಕಾನೂನುಗಳು ರೂಪಿತಗೊಂಡಿವೆ. ಕಾರ್ಖಾನೆಗಳು ಜನರಿಗೆ ಕೆಲಸ ನೀಡುವ ಬದಲು ಇದ್ದ ಕೆಲಸವನ್ನು ಕಸಿದು ಮನೆಗೆ ಕಳುಹಿಸುತ್ತಿವೆ. ಎಸಿಸಿ ಸಿಮೆಂಟ್ ಕಂಪನಿಯಲ್ಲಿ ದುಡಿಯುವ ಗುತ್ತಿಗೆ ಕಾರ್ಮಿಕರಿಗೆ ತಿಂಗಳಿಗೆ ನಾಲ್ಕೋ ಅಥವ ಐದು ಹಾಜರಿ ನೀಡಲಾಗುತ್ತಿದೆ. ಕಡ್ಡಾಯವಾಗಿ ೨೬ ಹಾಜರಿ ನೀಡಬೇಕು ಎಂದು ಆಗ್ರಹಿಸಿದರು.

ಎಐಡಿಎಸ್‌ಒ ಕಾರ್ಯದರ್ಶಿ ವೆಂಕಟೇಶ ದೇವದುರ್ಗಾ ಮಾತನಾಡಿದರು. ಕಟ್ಟಡ ಕಾರ್ಮಿಕ ಸಂಘದ ಮುಖಂಡ ವಿಠ್ಠಲ ರಾಠೋಡ, ಮಲ್ಲಣ್ಣ ದಂಡಬಾ, ಮಲ್ಲಿಕಾರ್ಜುನ ಗಂದಿ, ಶಿವುಕುಮಾರ ಆಂದೋಲಾ, ಮಲ್ಲಿನಾಥ ಹುಂಡೇಕಲ್, ದತ್ತು ಹುಡೇಕರ, ಅವಿನಾಶ ಒಡೆಯರ, ವಿದ್ಯಾ ಬಡಿಗೇರ, ಏಸಪ್ಪಾ ಕೇದಾರ, ಗೋವಿಂದ ಯಳವಾರ, ಈಸಮ್ಮಾ ಜಾಲಗಾರ, ಜಯಶ್ರೀ ಸಮಗಾರ, ಯಲ್ಲಮ್ಮ ತಳಗೇರೆ ಸೇರಿದಂತೆ ಕಟ್ಟಡ ಕಾರ್ಮಿಕರು, ಹಾಸ್ಟಲ್ ಕಾರ್ಮಿಕರು, ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ನಾಲವಾರ ಉಪತಹಶೀಲ್ದಾರ ವೆಂಕನಗೌಡ ಪಾಟೀಲ ಸ್ಥಳಕ್ಕಾಗಮಿಸಿ ಮನವಿಪತ್ರ ಸ್ವೀಕರಿಸಿದರು.

emedialine

Recent Posts

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮ

ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…

4 hours ago

ಶೋಷಿತ ಜನಜಾಗೃತಿ ವೇದಿಕೆ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ

ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…

4 hours ago

ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರು: ಡಾ. ಎಸ್.ಎಸ್. ಗುಬ್ಬಿ ಬೇಸರ

ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…

4 hours ago

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…

4 hours ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

4 hours ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

4 hours ago