ಭಾರತ ಸಂವಿಧಾನ ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠ ಸಂವಿಧಾನ: ಕಾರ್ಮಿಕ ಅಧಿಕಾರಿ ಶ್ರೀಹರಿ ದೇಶಪಾಂಡೆ

0
17

ಕಲಬುರಗಿ: ಭಾರತ ಸಂವಿಧಾನವು ಜಗತ್ತಿನ ಅತ್ಯಂತ ಶ್ರೇಷ್ಠ ಸಂವಿಧಾನವಾಗಿದೆ ಎಂದು ಕಲಬುರಗಿ ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಹರಿ ದೇಶಪಾಂಡೆ ಅವರು ಹೇಳಿದರು.

ಕಲಬುರಗಿ ಜಿಲ್ಲಾ ಕಾರ್ಮಿಕ ಇಲಾಖೆ ಜನ ಶಿಕ್ಷಣ ಸಂಸ್ಥಾನ ಗುಲಬರ್ಗಾ ಇವುಗಳ ಸಂಯುಕ್ತಾಶ್ರಯದಲ್ಲಿ ಕಲಬುರಗಿ ನಗರದ ಸಿ.ಐ.ಬಿ ಕಾಲೋನಿಯ ಡಾ. ಬಿ. ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದ್ದ ಸಂವಿಧಾನ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಭಾರತದ ಸಂವಿಧಾನವು ಜನರ ಸಾಮಾಜಿಕ, ಆರ್ಥಿಕ ಹಾಗೂ ಧಾರ್ಮಿಕ ಸಹಬಾಳ್ವೆಗೆ ಹೆಸರುವಾಸಿಯಾಗಿದೆ ಎಂದರು.

Contact Your\'s Advertisement; 9902492681

ನ್ಯಾಯವಾದಿ ಹಾಗೂ ಪ್ರಧಾನ ಕಾರ್ಯದರ್ಶಿ ಝಳಕಿ ಅವರು ಭಾರತ ಸಂವಿಧಾನದ ಅಡಿಯಲ್ಲಿ ಭಾರತೀಯರಿಗೆ ನೀಡಿರುವ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಗುಲಬರ್ಗಾದ ಜನ ಶಿಕ್ಷಣ ಸಂಸ್ಥಾನ ನಿರ್ದೇಶಕ ಲಕ್ಷ್ಮೀಕಾಂತ ಪಾಟೀಲ ಮಾತನಾಡಿ ಭಾರತ ಸಂವಿಧಾನವನ್ನು ಬೇರೆ ಬೇರೆ ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿ ರಚಿಸಲಾಗಿದೆ. ಭಾರತದ ಸಂವಿಧಾನವನ್ನು 1949ರ ನವೆಂಬರ್ 26 ರಂದು ಸಂಸತ್ತಿನಲ್ಲಿ ಅಂಗೀಕರಿಸಿದ ದಿನವನ್ನು ವಿಶೇಷವಾಗಿ ಇಂದು ಸಂವಿಧಾನ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.

ಕಲಬುರಗಿಯ ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನಾ ಸಂಘ ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ ಸಂವಿಧಾನದ ಎಲ್ಲರಿಗೂ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಕಲಿಕಾರ್ಥಿಗಳಿಗೆ ಮಾಸ್ಕ್ ಮತ್ತು ಸ್ಯಾನಿಟೈಜರ್ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಬಸವರಾಜ ಧಾಬಾ, ಕಾಶಿರಾಯ ಜೋಗದಾನಕರ ಉಪಸ್ಥಿತರಿದ್ದರು ಪಾರ್ವತಿ ಹಿರೇಮಠ ಕಾರ್ಯಕ್ರಮ ನಿರೂಪಿಸಿ ಕೊನೆಯಲ್ಲಿ ವಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here