ಬಿಸಿ ಬಿಸಿ ಸುದ್ದಿ

ಸಂವಿಧಾನ ಎಲ್ಲಾ ಕಾನೂನುಗಳ ತಾಯಿ: ಹಿರಿಯ ವಕೀಲರಾದ ಭಾಸ್ಕರರಾವ ಮುಡಬೂಳ

ಶಹಾಪುರ: ನಮ್ಮ ಸಂವಿಧಾನ ಎಲ್ಲಾ ಕಾನೂನುಗಳ ತಾಯಿಯಂತೆ ಇದೆ. ನಮ್ಮ ಸಂರಕ್ಷಣೆಗೆ ಸಂವಿಧಾನ ಇರುವಾಗ ನಾವೆಲ್ಲರೂ ಅಧ್ಯಯನ ಮಾಡಬೇಕು. ಸಂವಿಧಾನದಲ್ಲಿ ಜನ ಸೇವೆ ಮಾಡಲು ನೀಡಿದ ಅಧಿಕಾರವಾಗಿ ಎಂಬುವುದು ಜನಪ್ರತಿನಿಧಿಗಳು ಮರೆಯಬಾರದು ಎಂದು ಹಿರಿಯ ವಕೀಲರಾದ ಭಾಸ್ಕರರಾವ ಮುಡಬೂಳ ತಿಳಿಸಿದರು.

ನ್ಯಾಯಾಲಯದ ಆವರಣದಲ್ಲಿ ಗುರುವಾರ ತಾಲ್ಲೂಕು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಂವಿಧಾನ ರಕ್ಷಣೆಯಲ್ಲಿ ವಕೀಲರ ಪಾತ್ರ ಮುಖ್ಯವಾಗಿದೆ.ಪ್ರತಿಯೊಬ್ಬ ವ್ಯಕ್ತಿಗೆ ಹಕ್ಕು ಮತ್ತು ಕರ್ತವ್ಯಗಳನ್ನು ತಿಳಿಸಬೇಕು. ದುರಂತವೆಂದರೆ ಹಕ್ಕುಗಳ ಬಗ್ಗೆ ಪ್ರತಿಪಾದನೆ ಮಾಡುತ್ತಿದ್ದೇವೆ ವಿನಃ ಕರ್ತವ್ಯದಿಂದ ನಾವು ವಿಮುಖರಾಗುತ್ತಿರುವುದು ಸರಿಯಲ್ಲವೆಂದು ಅವರು ಬೇಸರ ವ್ಯಕ್ತಪಡಿಸಿದರು.

ಪ್ರಧಾನ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಕಾಡಪ್ಪ ಹುಕ್ಕೇರಿ ಮಾತನಾಡಿ, 1950ರಲ್ಲಿ ನಮ್ಮ ಸಂವಿಧಾನ ಜಾರಿಗೆ ಬಂದಿತು. ಅದರಂತೆ 2015ರಿಂದ ದೇಶದ ತುಂಬೆಲ್ಲ ಸಂವಿಧಾನದ ದಿನಾರಚಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.  ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ  ನಿರ್ದೇಶನದಂತೆ ನ.19ರಿಂದ25ವರೆಗೆ ವಿವಿಧ ವಿಷಯಗಳ ಬಗ್ಗೆ ಜಾಗೃತಿ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂವಿಧಾನದ ಆಶಯದಂತೆ ನಾವೆಲ್ಲರೂ ನಡೆದುಕೊಳ್ಳಬೇಕು ಎಂದರು.

ತಾಲ್ಲೂಕು ಕಾನೂನು ಸೇವೆಗಳ ಅಧ್ಯಕ್ಷರು ಹಾಗೂ ಹಿರಿಯ ಶ್ರೇಣಿ ನ್ಯಾಯಾಲಯದ ನ್ಯಾಯಾಧೀಶರಾದ ಭಾಮಿನಿ, ಹಿರಿಯ ವಕೀಲರಾದ ಶ್ರೀನಿವಾಸರಾವ್ ಕುಲಕರ್ಣಿ, ಎಪಿಪಿಗಳಾದ ವಿನಾಯಕ ಕೋಡ್ಲಾ, ದಿವ್ಯಾರಾಣಿ, ವಕೀಲರ ಸಂಘದ ಅಧ್ಯಕ್ಷ  ಎಂ.ಎಸ್.ರಾಂಪುರೆ, ಕಾರ್ಯರ್ಶಿ ಸಂದೀಪ ದೇಸಾಯಿ, ಸಯ್ಯದ ಇಬ್ರಾಹಿಂ ಜಮದಾರ, ಯೂಸೂಫ್ ಸಿದ್ದಕಿ, ಮಲ್ಕಣ್ಣ ಪಾಟೀಲ್, ರಮೇಶ ಸೇಡಂಕರ್, ಮಲ್ಲಿಕಾರ್ಜುನ ಸೇರಿದಂತೆ ಮುಂತಾದವರು ಇದ್ದರು.

emedialine

Recent Posts

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

3 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

4 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

17 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

18 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

19 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

19 hours ago