ರಾಜ್ಯ

ಭಾರತದ ಮುಂದಿನ ಭರವಸೆ ಆಮ್ ಆದ್ಮಿ ಪಕ್ಷ: ರೋಮಿ ಭಾಟಿ

ಬೆಂಗಳೂರು: ಮಹಾತ್ಮ ಗಾಂಧೀಜಿ ಅವರ ಸ್ವರಾಜ್ಯ ಕಲ್ಪನೆಯ ಮೇಲೆ ಸ್ಥಾಪಿತವಾದ ಆಮ್ ಆದ್ಮಿ ಪಕ್ಷ ಇಂದು ದೇಶದಲ್ಲೇ ವೇಗವಾಗಿ ಬೆಳೆಯುತ್ತಿರುವ ರಾಜಕೀಯ ಪಕ್ಷವಾಗಿದ್ದು ಭಾರತದ ಮುಂದಿನ ಭರವಸೆಯಾಗಿದೆ ಎಂದು ಪಕ್ಷದ ಕರ್ನಾಟಕ ಉಸ್ತುವಾರಿ ರೋಮಿ ಭಾಟಿ ನುಡಿದರು.

ಹಲಸೂರು ಕೆರೆ ಬಳಿಯ ಆರ್ಬಿಎನ್ಎಂಎಸ್ ಸಭಾಂಗಣದಲ್ಲಿ ನಡೆದ ಆಮ್ ಆದ್ಮಿ ಪಕ್ಷದ 8ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿ, ವರ್ಷ ಎಂಟು ಸಾಧನೆ ನೂರೆಂಟು ಎನ್ನುವ ಘೋಷ ವಾಕ್ಯದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಇಡೀ ಭಾರತದ ರಾಜಕೀಯ ಇತಿಹಾಸದಲ್ಲಿ ಇಷ್ಟು ವೇಗವಾಗಿ ಬೆಳೆದ ರಾಜಕೀಯ ಪಕ್ಷ ಇನ್ನೊಂದಿಲ್ಲ. ಕೇವಲ ಎಂಟು ವರ್ಷದಲ್ಲಿ ನೂರೆಂಟು ಸಾಧನೆ ಮಾಡಿದ ಆಮ್ ಆದ್ಮಿ ಪಕ್ಷ ಭಾರತದ 130 ಕೋಟಿ ಜನರಲ್ಲಿ ಬದಲಾವಣೆಯ ಭರವಸೆ ಮೂಡಿಸಿದೆ ಎಂದರು.

ರಾಷ್ಟ್ರೀಯ ನಾಯಕರಾದ ಅರವಿಂದ ಕೇಜ್ರಿವಾಲ್ ಅವರ ನೇತೃತ್ವದಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯ ಗದ್ದುಗೆಯನ್ನು 3 ಬಾರಿ ಏರಿದ್ದು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ದೆಹಲಿಯ ಜನರ ಜೀವನ ಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಮಾಡಿದ ಕ್ರಾಂತಿಕಾರಕ ಬದಲಾವಣೆಗಳಿಂದ ಅರವಿಂದ ಕೇಜ್ರಿವಾಲ್ ಅವರ ನೇತೃತ್ವದ ಸರ್ಕಾರ ವಿಶ್ವದರ್ಜೆಯ ಸೌಲಭ್ಯಗಳನ್ನು ತನ್ನ ಜನರಿಗೆ ಪರಿಚಯಿಸಿದೆ ಎಂದರು.

9 ನೇ ಸಂಸ್ಥಾಪನಾ ದಿನವನ್ನು ಬಿಬಿಎಂಪಿ ಅಧಿಕಾರ ಹಿಡಿಯುವುದರ ಮೂಲಕ ಆಚರಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಇದೇ ವೇಳೆ ತಮ್ಮ ಪ್ರಾಣದ ಹಂಗನ್ನು ತೊರೆದು ಲಾಕ್ಡೌನ್ ವೇಳೆ ದುಡಿದ ಕರುನಾಡಿನ ಹೆಮ್ಮೆಯ ಕೊರೋನಾ ಯೋದರನ್ನು ಸನ್ಮಾನಿಸಲಾಯಿತು.

ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ, ರಾಜ್ಯ ಕಾರ್ಯದರ್ಶಿ ಸಂಚಿತ್ ಸಹಾನಿ, ಸಹ ಸಂಚಾಲಕ ವಿಜಯ್ ಶರ್ಮ, ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ, ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ, ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಲಕ್ಷ್ಮಿಕಾಂತ್ ರಾವ್, ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ, ಮುಖ್ಯ ವಕ್ತಾರ ಶರತ್ ಖಾದ್ರಿ ಇದ್ದರು.

ಇದೇ ವೇಳೆ ಅರವಿಂದ ಕೇಜ್ರಿವಾಲ್ ಅವರ ರಾಜಕೀಯ ಜೀವನ ಆಧಾರಿತ “ಇನ್ಸಿಗ್ನಿಫಿಕೆಂಟ್ ಮ್ಯಾನ್” ಚಲನಚಿತ್ರ ಪ್ರದರ್ಶನ ಹಾಗೂ ಏಷ್ಯಾದ ಬಲಶಾಲಿ ವ್ಯಕ್ತಿ ಮನೋಜ್ ಚೋಪ್ರಾ ಅವರಿಂದ ಶಕ್ತಿ ಪ್ರದರ್ಶನ ಕಾರ್ಯಕ್ರಮ ನಡೆಸಲಾಯಿತು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

1 hour ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

2 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

2 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

2 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

3 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

4 hours ago