ಬಿಸಿ ಬಿಸಿ ಸುದ್ದಿ

ಬಿಜೆಪಿಯಿಂದ ಭಾರತ ಸಂವಿಧಾಕ್ಕೆ ಸಂಕಷ್ಟ: ಮೊಸಲಗಿ

ವಾಡಿ: ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸಂವಿಧಾನ ಬದಲಿಸಬೇಕು ಎಂಬ ಕೂಗು ಕೇಳಿಬಂದಿದೆ. ಹಾಡುಹಗಲೇ ಸಂವಿಧಾನದ ಪ್ರತಿಗಳನ್ನು ಸುಟ್ಟು ಸಂಭ್ರಮಿಸಿದ ಘಟನೆ ನಡೆದಿದೆ. ಬಿಜೆಪಿ ಆಡಳಿತದಲ್ಲಿ ಭಾರತ ಸಂವಿಧಾನ ಸಂಕಷ್ಟದಲ್ಲಿದೆ ಎಂದು ವಕೀಲ ಶ್ರವಣಕುಮಾರ ಮೊಸಲಗಿ ಆತಂಕ ವ್ಯಕ್ತಪಡಿಸಿದರು.

ಪಟ್ಟಣದ ಪುರಸಭೆಯಲ್ಲಿ ಏರ್ಪಡಿಸಲಾಗಿದ್ದ ಸಂವಿಧಾನ ಸಮರ್ಪಣಾ ದಿನದ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಅವರು ಮಾತನಾಡಿದರು. ಸಮಾನತೆಯನ್ನು ಧಿಕ್ಕರಿಸಿದ ಭಗವದ್ಗೀತೆ ನಮ್ಮ ರಾಷ್ಟ್ರಗ್ರಂಥ ಎಂದು ಬಿಂಬಿಸಲು ಬಿಜೆಪಿ ಹೊರಟಿದೆ. ಇಡೀ ವಿಶ್ವವವೇ ಮೆಚ್ಚಿಕೊಂಡಿರುವ ಬಾಬಾಸಾಹೇಬರು ಬರೆದ ಸಂವಿಧಾನ ಸಂಪೂರ್ನ ಬದಲಿಸುವ ಹುನ್ನಾರ ಬಿಜೆಪಿ ನಡೆಸುತ್ತಿದೆ. ಅಂಬೇಡ್ಕರರು ಸಂವಿಧಾನದಲ್ಲಿ ಕೇವಲ ದಲಿತರಿಗೆ ಮಾತ್ರ ಹಕ್ಕುಗಳನ್ನು ಕೊಟ್ಟಿಲ್ಲ. ಎಲ್ಲಾ ತಳಸಮುದಾಯಗಳಿಗೆ ಮೀಸಲಾತಿಯ ಹಕ್ಕನ್ನು ಕಲ್ಪಿಸಿದ್ದಾರೆ. ಭಾರತದ ನಾಗರಿಕರನ್ನು ಸಮಾನವಾಗಿ ಕಂಡಿದ್ದಾರೆ. ಆದರೆ ಸಂವಿಧಾನಕ್ಕೆ ತಲೆಬಾಗುತ್ತಲೇ ಸಂವೀಧಾನಕ್ಕೆ ಬೆಂಕಿಯಿಡುವ ಪ್ರಜಾಪ್ರಭುತ್ವ ವಿರೋಧಿ ದೇಶ ದ್ರೋಹಿಗಳು ಆಡಳಿತ ನಡೆಸುತ್ತಿದ್ದಾರೆ ಎಂದು ದೂರಿದರು.

ಬಿಜೆಪಿ ಸದಸ್ಯರ ವಿರುದ್ಧ ಆಕ್ರೋಶ: ಮುಖ್ಯ ಅತಿಥಿಯಾಗಿ ಮಾತನಾಡಿದ ಬೌದ್ಧ ಸಮಾಜದ ಅಧ್ಯಕ್ಷ ಟೋಪಣ್ಣ ಕೋಮಟೆ, ಸಂವಿಧಾನ ಸಮರ್ಪಣಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದ ಚುನಾಯಿತ ಬಿಜೆಪಿ ಸದಸ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ನಡೆಯಿತು. ಪುರಸಭೆಗೆ ಆಯ್ಕೆಯಾದ ಒಬ್ಬ ಬಿಜೆಪಿ ಸದಸ್ಯನೂ ಸಂವಿಧಾನ ಕಾರ್ಯಕ್ರಮಕ್ಕೆ ಬಂದಿಲ್ಲ ಎಂದರೆ ಇವರಿಗೆ ಸಂವಿಧಾನದ ಮೇಲೆ ನಂಬಿಕೆಯಿಲ್ಲ ಎಂಬುದು ಸ್ಪಷ್ಟವಾಗಿದೆ. ಇವರಿಗೆ ನೋಟಿಸ್ ಜಾರಿ ಮಾಡಿ ಕ್ರಮಕೈಗೊಳ್ಳಬೇಕು ಎಂದು ಮುಖ್ಯಾಧಿಕಾರಿಯನ್ನು ಒತ್ತಾಯಿಸಿದರು.

ಮುಖ್ಯಾಧಿಕಾರಿ ವಿಠ್ಠಲ ಹಾದಿಮನಿ, ಅಧಿಕಾರಿಗಳಾದ ಕಾಶೀನಾಥ ದನ್ನಿ, ಎಂ.ಪಂಕಜಾ, ಪುರಸಭೆ ಅಧ್ಯಕ್ಷೆ ಝರೀನಾಬೇಗಂ, ಉಪಾಧ್ಯಕ್ಷ ತಿಮ್ಮಯ್ಯ ಪವಾರ, ಬೌದ್ಧ ಸಮಾಜದ ಖಜಾಂಚಿ ಚಂದ್ರಸೇನ ಮೇನಗಾರ, ಕೋಲಿ ಸಮಾಜದ ಅಧ್ಯಕ್ಷ ನಾಗೇಂದ್ರ ಜೈಗಂಗಾ, ಪುರಸಭೆ ಸದಸ್ಯರಾದ ಶರಣು ನಾಟೀಕಾರ, ಮಲ್ಲಯ್ಯ ಗುತ್ತೇದಾರ, ಮುಖಂಡರಾದ ಇಂದ್ರಜೀತ ಸಿಂಘೆ, ಬಸವರಾಜ ಕಾಟಮಳ್ಳಿ, ರಾಜಾ ಪಟೇಲ, ವಿಜಯಕುಮಾರ ಸಿಂಗೆ ಮತ್ತಿತರರು ಪಾಲ್ಗೊಂಡಿದ್ದರು.

emedialine

Recent Posts

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

45 mins ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

6 hours ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

19 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

19 hours ago