ಚಿಂಚೋಳಿ: ಖ್ಯಾತ ನಾಟಕಕಾರ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ ಕಾರ್ನಾಡ್ ವಿಧಿವಶರಾಗಿದ್ದರಿಂದ ನಾಳೆ ದಿನಾಂಕ 11 ರಂದು ಚಿಂಚೋಳಿಯಲ್ಲಿ ಬಿಜೆಪಿ ಹಮ್ಮಿಕೊಂಡ ನೂತನ ಶಾಸಕ ಮತ್ತು ಸಂಸದರ ಅಭಿನಂದನಾ ಸಮಾರಂಭ ಮುಂದೂಡಲಾಗಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಬೀಮಶೆಟ್ಟಿ ಮುರುಡಾ ಅವರು ತಿಳಿಸಿದ್ದಾರೆ.
ಗಿರೀಶ ಕಾರ್ನಾಡ ಈ ನೆಲದ ಅಸ್ಮಿತೆಯ ಪ್ರತೀಕವಾಗಿದ್ದರು. ದೇಶ ವಿದೇಶಗಲ್ಲಿ ತಮ್ಮ ವಿದ್ವತ್ತು ಮೆರೆದು ನಾಡಿನ ಕೀರ್ತಿ ಹೆಚ್ಚಿಸಿದ್ದರು. ಅವರಿಗೆ ಗೌರವ ಕೊಡುವುದು ಕನ್ನಡಿಗರಾದ ನಮ್ಮ ಆದ್ಯ ಕರ್ತವ್ಯವಾಗಿದೆ, ಅಂತೆಯೇ ರಾಜ್ಯ ಸರಕಾರವೂ ರಾಜ್ಯದಲ್ಲಿ 3 ದಿನಗಳ ಶೋಕಾಚರಣೆ ಘೋಷಿಸಿದ್ದರಿಂದ ಅಭಿನಂದನಾ ಸಮಾರಂಭ ಮುಂದೂಡಲಾಗಿದೆ ಎಂದು ಅವರು ತಿಳಿಸಿದರು.
ಸಾಹಿತಿ. ನಾಟಕಕಾರ. ನಟ ಕಲಾವಿದ ಗಿರೀಶ ಕಾರ್ನಾಡ್ ನಿಧನಕ್ಕೆ ಚಿಂಚೋಳಿ ಶಾಸಕ ಡಾ.ಅವಿನಾಶ ಜಾಧವ ಕಂಬನಿ ಮಿಡಿದಿದ್ದಾರೆ. ಮೃತರ ಆತ್ಮಕ್ಕೆ ಭಗವಂತ ಶಾಂತಿ ಕರುಣಿಸಿ ಅವರ ಅಗಲಿಕೆಯ ದು:ಖ ಸಹಿಸುವ ಶಕ್ತಿ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…