ಬಿಸಿ ಬಿಸಿ ಸುದ್ದಿ

ಎಲ್ಲಾ ಮಕ್ಕಳಿಗು ಉತ್ತಮ ಶಿಕ್ಷಣ ದೊರೆಯಲು ಶ್ರಮಿಸೋಣ: ಅನ್ವರ್ ಜಮಾದಾರ್

ಸುರಪುರ: ಜಿಲ್ಲಾ ಪಂಚಾಯಿತಿ ಯಾದಗಿರಿ, ತಾಲೂಕ ಪಂಚಾಯಿತಿ ಸುರಪುರ ಮತ್ತು ಗ್ರಾಮ ಪಂಚಾಯಿತಿ ಆಲ್ದಾಳ ಹಾಗೂ ಅಜೀಮ್ ಪ್ರೇಮಜಿ ಫೌಂಡೇಷನ ಸಹಯೋಗದಲ್ಲಿ ಮಕ್ಕಳ ಹಕ್ಕುಗಳ ಗ್ರಾಮಸಭೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಅಜೀಮ್ ಪ್ರೇಮಜೀ ಫೌಂಡೇಷನ್ ಸಂಪನ್ಮೂಲ ವ್ಯಕ್ತಿ ಅನ್ವರ ಜಮಾದಾರ ಮಾತನಾಡುತ್ತಾ, ಹುಟ್ಟಿದ ಪ್ರತಿಯೊಂದು ಮಗು ಬದುಕುವ, ವಿಕಾಸಹೊಂದುವ, ರಕ್ಷಣೆಯ, ಅಭಿವೃದ್ಧಿ ಹೊಂದುವ ಹಕ್ಕನ್ನು ಹೊಂದಿದ್ದಾರೆ. ಇಂದು ಸಹ ಅನೇಕ ಕಾರಣಗಳಿಂದಾಗಿ ಕೆಲವು ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ, ಬಾಲಕಾರ್ಮಿಕರಾಗಿ ತಮ್ಮ ಬಾಲ್ಯವನ್ನು ಕಳೆದುಕೊಳ್ಳುತ್ತಿದ್ದಾರೆ, ಶಿಕ್ಷಣ ಇಲಾಖೆ ಜೊತೆ ಗ್ರಾಮ ಪಂಚಾಯಿತಿಯವರು, ಚುನಾಯಿತ ಪ್ರತಿನಿಧಿಗಳು ಶ್ರಮವಹಿಸಿ ಎಲ್ಲಾ ಮಕ್ಕಳಿಗೆ ಉತ್ತಮ ಶಿಕ್ಷಣ ಲಭಿಸಲು ಶ್ರಮಿಸಬೇಕೆಂದರು.

ಶಾಲೆಯ ಮುಖ್ಯಗುರು ಶಶಿಕುಮಾರ ಮಾತನಾಡುತ್ತ, ಮಕ್ಕಳ ಹಕ್ಕುಗಳ ಕಾರ್ಯಕ್ರಮ ಸಾಂಕೇತಿಕವಾಗಿ ಚಾಲನೆ ನೀಡಲಾಗಿದ್ದು ಮುಂದಿನ ದಿನಗಳಲ್ಲಿ ಪ್ರತಿಯೊಂದು ಮಗುವಿಗೆ ಈ ಕುರಿತು ಜಾಗೃತಿ ಮೂಡಿಸಲಾಗುವುದೆಂದರೆ. ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಕ್ಕಳು ತಮ್ಮ ಶಾಲೆಗಳಿಗೆ ಕೆಲವು ಬೇಡಿಕೆಗಳಾದ, ಕಾಂಪೌಂಡ, ಗುಣಮಟ್ಟದ ಶೌಚಾಲಯ, ನೀರಿನ ವ್ಯವಸ್ಥೇ, ವಿದ್ಯುತ ಹಾಗೂ ಗ್ರಾಮದ ಸ್ವಚ್ಚತೆ ಹೀಗೆ ವಿವಿಧ ಬೇಡಿಕೆಗಳನ್ನು ಕುರಿತು ಮೌಖಿಕವಾಗಿ ವಿವರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ರಾಜಕುಮಾರರವರು ಮಕ್ಕಳು ಈ ಬೇಡಿಕೆಗಳನ್ನು ಹಂತ ಹಂತವಾಗಿ ನೆರವೇರಿಸುವುದಾಗಿ ಭರವಸೆ ನೀಡಿದರು.

ಗ್ರಾಮ ಪಂಚಾಯಿತಿ, ಕಾರ್ಯದರ್ಶಿ ರಾಚಣ್ಣಗೌಡ ಮಲ್ಲಣ್ಣ, ಸುಮಿತ್ತಾ, ಕಾರ್ಯಕ್ರಮದಲ್ಲಿ ಪ್ರೌಢ ಶಾಲೆ ಶಿಕ್ಷಕರಾದ, ಸಿದ್ಧಪ್ಪ ದೇಸಾಯಿ ರಾಜು, ಅನಿಲ, ಲಖನ, ಶ್ವೇತಾ, ಅಶೋಕ, ಯಂಕಣ್ಣ ವಂದನಾರ್ಪಣೆ ಶಿವುಕುಮಾರ, ಕಾರ್ಯಕ್ರಮ ನಿರೂಪಣೆ ಮೌನೇಶ ಪತ್ತಾರ, ಅಂಗನವಾಡಿ ಶಿಕ್ಷಕಿ ಸೋಪನ ಬಿ. ಹಣಮಂತಿ, ಪ್ರೌಢ ಮತ್ತು ಪ್ರಾಥಮಿಕ ಶಾಲೆ ಮಕ್ಕಳು ಭಾಗವಹಿಸಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

9 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

9 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

11 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

11 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

11 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

12 hours ago