ಸುರಪುರ: ಮಾದಿಗ ಮೀಸಲಾತಿ ಹೋರಾಟ ಸಮಿತಿ ಮತ್ತು ಮಾದಿಗ ದಂಡೋರ ಸಂಘಟನೆಗೆ ಹುಣಸಗಿ ತಾಲೂಕು ಘಟಕ ರಚನೆಗಾಗಿ ಸಭೆಯನ್ನು ನಡೆಸಲಾಯಿತು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ರಾಜಣ್ಣ ದಾಸನಕೇರಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಪದಾಧಿಕಾರಿಗಳನ್ನು ನೇಮಿಸಲಾಯಿತು.
ಸಭೆಯಲ್ಲಿ ಭಾಗವಹಿಸಿದ್ದ ಸುರಪುರ ತಾಲೂಕು ಮಾದಿಗ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ದುರ್ಗಪ್ಪ ಬಡಿಗೇರ ನಾಗರಾಳ ಮಾತನಾಡಿ,ಸದಾಶಿವ ಆಯೋಗದ ವರದಿ ಜಾರಿಗಾಗಿ ಅಣೇಕ ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ,ಆದರೆ ನಮ್ಮಲ್ಲಿಯ ರಾಜಕೀಯ ಇಚ್ಛಾಶಕ್ತಿಯ ಕಾರಣದಿಂದ ಅದು ಕೈಗೂಡುತ್ತಿಲ್ಲ,ಆದ್ದರಿಂದ ಈಗ ನಾವೆಲ್ಲರು ಸಂಘಟಿತರಾಗಿ ಹೋರಾಟಕ್ಕೆ ಮುಂದಾಗುವ ಅನಿವಾರ್ಯತೆ ಇದೆ ಆದ್ದರಿಂದ ತಾವೆಲ್ಲರು ಸಂಘಟನೆಯನ್ನು ಬೆಳೆಸುವ ಮೂಲಕ ಹೋರಾಟಕ್ಕೆ ಮುಂದಾಗುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಹುಣಸಗಿ ತಾಲೂಕು ಅಧ್ಯಕ್ಷರನ್ನಾಗಿ ಭೀಮಣ್ಣ ಮೂಲಿಮನಿ ಗೆದ್ದಲಮರಿ ಅವರನ್ನು ನೇಮಕಗೊಳಿಸಲಾಯಿತು.ಈ ಸಂದರ್ಭದಲ್ಲಿ ಸುರೇಶ ಕಟ್ಟಿಮನಿ ಪೇಠ ಅಮ್ಮಾಪುರ ಪರಶುರಾಮ ಕಟ್ಟಿಮನಿ ದಿವಳಗುಡ್ಡ ಚಿದಾನಂದ ಗೆದ್ದಲಮರಿ ಹನುಮಂತ ಮೂಲಿಮನಿ ದೇವಪ್ಪ ಮಾನಪ್ಪ ಕಟ್ಟಿಮನಿ ಆನಂದ ಇತರರಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…