ನಾಯ್ಕಲ್ : ಪರಿಸರ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಜವಾಬಾರಿಯಾಗಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಖಾಜಾ ಮೈನೋದ್ಧೀನ್ ಜೇಮಶೇರಿ ಹೇಳಿದರು.
ಅವರು ಮಂಗಳವಾರ ಬೆಳಗ್ಗೆ ಗ್ರಾಮದ ಗ್ರಾಮ ಪಂಚಾಯಿತಿ ಆವರಣದಲ್ಲಿ ಜಿಲ್ಲಾ ಪಂಚಾಯತ್ ಯಾದಗಿರ, ತಾಲೂಕು ಪಂಚಾಯತ್ ಶಹಾಪುರ ಹಾಗೂ ಗ್ರಾಮ ಪಂಚಾಯಿತಿ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛ ಮೇವ ಜಯಂತಿ ಹಾಗೂ ವಿಶ್ವ ಪರಿಸರ ದಿನ ಅಂಗವಾಗಿ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪರಿಸರದಿಂದ ಉತ್ತಮ ಪರಿಶಿದ್ಧವಾದ ವಾತಾವರಣ ಅಲ್ಲದೆ ಸಕಾಲಕ್ಕೆ ಮಳೆಯು ಆಗುತ್ತೆದೆ. ಗಿಡಗಳನ್ನು ನಾಶ ಮಾಡದಂತೆ, ಅವುಗಳನ್ನು ಪೋಷಿಸಿ ಪಾಲನೆ ಪೋಷಣೆ ಮಾಡಿದರೆ ಮುಂದೆ ಹೆಮ್ಮರಗಳಾಗಿ ನೆರಳು ಕೋಡಬಹುದು ಎಂದರು.
ಪ್ರತಿಯೊಬ್ಬರು ಗಿಡಮರಗಳನ್ನು ಬೆಳೆಸುವ ಪಣ ತೋಡಬೇಕು ಎಂದರು. ಜಿಪಂ ಸದಸ್ಯೆ ದೇವೆಕಮ್ಮ ಮುನಮುಟಿಗಿ ಕಾರ್ಯಕ್ರಮ ಉದ್ಘಾಟಿಸಿದರು. ಸರ್ಕಾರಿ ಪ್ರೌಢ ಶಾಲೆ ಮುಖ್ಯ ಶಿಕ್ಷಕ ವೆಂಕೋಬಾ, ತಾಪಂ ಸದಸ್ಯೆ ಖಾಲೀದಾ ಬೇಗ್ಂ ಕುರುಕುಂದಾ, ಗ್ರಾಪಂ ಉಪಾಧ್ಯಕ್ಷೆ ಮಂಜುಳಾ ಶಿವರಾಯ, ಗ್ರಾಪಂ ಸದಸ್ಯರು, ಪಿಡಿಒ ಲಕ್ಷ್ಮೀ ಪಾಟೀಲ್, ಕಾರ್ಯದರ್ಶಿ ರೇವಣಸಿದ್ದಪ್ಪ, ಅರಣ್ಯ ಇಲಾಖೆ ಸಿಬ್ಬಂದಿ, ಗ್ರಾಪಂ ಸಿಬ್ಬಂದಿ ಮತ್ತು ಶಾಲೆಯ ಶಿಕ್ಷಕ ವರ್ಗ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…