ಸುರಪುರ: ಪ್ರತಿಯೊಂದು ಮಗುವು ಶಾಲೆಗೆ ಹೋಗಿ ಅಕ್ಷರ ಕಲಿಯುವ ಮುನ್ನ ಮಕ್ಕಳಲ್ಲಿ ಕಲಿಕಾ ಆಸಕ್ತಿಯನ್ನು ಬೆಳೆಸುವುದು ತುಂಬಾ ಅಗತ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣಂ ಇಲಾಖೆಯ ಯೋಜನಾಧಿಕಾರಿ ಲಾಲಸಾಬ್ ಪೀರಾಪುರ ಮಾತನಾಡಿದರು.
ನಗರದಲ್ಲಿ ಹಮ್ಮಿಕೊಂಡಿದ್ದ ಸುರಪುರ ವಲಯ ಮಟ್ಟದ ಶಾಲಾ ಪೂರ್ವ ಶಿಕ್ಷಣ ಬಲವರ್ಧನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಅಂಗನವಾಡಿ ಕೇಂದ್ರಗಳಿಗೆ ಬರುವ ಮಕ್ಕಳಲ್ಲಿ ಓದಿನ ಕುರಿತು ಆಸಕ್ತಿ ಮೂಡಿಸುವುದು ಹಾಗು ಮಕ್ಕಳಿಗೆ ಆಟದ ಜೊತೆಯಲ್ಲಿ ಅಕ್ಷರ ಜ್ಞಾನ ಮೂಡಿಸುವುದು ಮತ್ತು ಮಕ್ಕಳ ಲಾಲನೆ ಪಾಲನೆಯೊಂದಿಗೆ ಅವುಗಳು ಮಾನಸಿಕ ಬೌದ್ಧಿಕ ಮತ್ತು ಶಾರೀರಿಕ ಬೆಳವಣಿಗೆ ಕುರಿತು ಅ ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತವೆ,ಇದರಿಂದ ಮಗುವು ಉತ್ತಮವಾದ ಹವ್ಯಾಸಗಳನ್ನು ಬೆಳೆಸಿಕೊಳ್ಳುವ ಜೊತೆಗೆ ಒಳ್ಳೆಯ ಬೆಳವಣಿಗೆಯನ್ನು ಕೂಡ ಹೊಂದಲಿದೆ.ಆದ್ದರಿಂದ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಶಾಲಾ ಪೂರ್ವ ಶಿಕ್ಷಣ ಬಲವರ್ಧನೆಯತ್ತ ಗಮನ ಹರಿಸುವಂತೆ ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಸುನೀತಾ ಪಾಟೀಲ್ ಮತ್ತು ಪದ್ಮಾವತಿ ನಾಯಕ ಮಾತನಾಡಿ ಮಕ್ಕಳ ಕಲಿಸುವ ವಿಧಾನವನ್ನು ತಿಳಿಸಿಕೊಟ್ಟರು.ಶರಣಮ್ಮ ದೇಸಾಯಿ ಕಾರ್ಯಕ್ರಮವನ್ನು ನಿರೂಪಿಸಿದರು,ಸುರಪುರ ವಲಯ ಮಟ್ಟದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಸಭೆಯಲ್ಲಿ ಭಾಗವಹಿಸಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…