ಶಹಾಬಾದ:ಸಕಾಲ ಯೋಜನೆ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಕಾಲ ಸಪ್ತಾಹ ಆಚರಿಸಲಾಗುತ್ತಿದೆ ಎಂದು ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಹೇಳಿದರು.
ಅವರು ಸೋಮವಾರ ನಗರಸಭೆಯಲ್ಲಿ ಆಯೋಜಿಸಲಾದ ಸಕಾಲ ಸಪ್ತಾಹ ಆಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ಸಕಾಲ ಸಪ್ತಾಹ ನವೆಂಬರ್ 30 ರಿಂದ ಡಿಸೆಂಬರ್ 5 ರವರೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ನಾಗರಿಕರಿಗೆ ನಿಗದಿತ ಕಾಲಮಿತಿಯಲ್ಲಿ ಸೇವೆಗಳನ್ನು ಒದಗಿಸುವ ಉದ್ದೇಶದ ಸಕಾಲ ಯೋಜನೆ ಕುರಿತು ಹೆಚ್ಚಿನ ಅರಿವು ಮೂಡಿಸಲಾಗುತ್ತದೆ.ಅಲ್ಲದೇ ಸಕಾಲದಡಿ ಸ್ವೀಕರಿಸಿದ ಬಾಕಿ ಉಳಿದ ಅರ್ಜಿಗಳನ್ನು ವಿಲೇವಾರಿ ಮಾಡಲು ಅನುಕೂಲವಾಗುತ್ತದೆ.ಆದ್ದರಿಂದ ಈ ಬಗ್ಗೆ ಜನರು ತಿಳಿಸಿದುಕೊಂಡು ಸಕಾಲ ಯೋಜನೆಯ ಅನುಕೂಲ ಪಡೆದುಕೊಳ್ಳಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ನಗರಸಭೆಯ ಅಧ್ಯಕ್ಷ ಗಿರೀಶ ಕಂಬಾನೂರ,ನಗರಸಭೆಯ ಸದಸ್ಯರಾದ ಸಾಬೇರಾಬೇಗಂ,ಮಹ್ಮದ್ ಅಮ್ಜದ್, ಫಜಲ್ ಪಟೇಲ್, ಕಛೇರಿ ವ್ಯವಸ್ಥಾಪಕ ಶಂಕರ, ಜೆಇ ಬಸವರಾಜ ,ಶಾಂತರೆಡ್ಡಿ ದಂಡಗುಲಕರ್, ಕಂದಾಯ ಅಧಿಕಾರಿ ಸುನೀಲಕುಮಾರ, ಆರೋಗ್ಯ ನಿರೀಕ್ಷಕರಾದ ಶಿವರಾಜಕುಮಾರ, ಶರಣು, ಸಾಬಣ್ಣ ಸುಂಗಲಕರ್ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…