ಬಿಸಿ ಬಿಸಿ ಸುದ್ದಿ

ಜಯ ಕರ್ನಾಟಕ ರತ್ನ ಪ್ರಶಸ್ತಿಗೆ ನರಸಿಂಹ ನಾಯಕ ಆಯ್ಕೆ

ಶಹಾಪುರ: ತಾಲ್ಲೂಕಿನ ಖಾನಾಪುರ ಗ್ರಾಮದ ಎಸ್. ಬಿ.ಐ.ಬ್ಯಾಂಕಿನ ಉದ್ಯೋಗಿ ಹಾಗೂ ಸಮಾಜ ಸೇವಕರಾದ ನರಸಿಂಹ ನಾಯಕ್ ಅವರಿಗೆ ಜೇವರ್ಗಿ ತಾಲ್ಲೂಕಿನ ಜಯಕರ್ನಾಟಕ ಸಂಘಟನೆ ವತಿಯಿಂದ ಕೊಡಮಾಡುವ 2020 ನೇ ಸಾಲಿನ ಜಯಕರ್ನಾಟಕ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಸಂಘಟನೆಯ ತಾಲ್ಲೂಕು ಅಧ್ಯಕ್ಷರಾದ ಸುಧೀಂದ್ರಕುಮಾರ್ ಇಜೇರಿ ತಿಳಿಸಿದ್ದಾರೆ.

ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮುತ್ತಪ್ಪ ರೈ ಸ್ಮರಣಾರ್ಥವಾಗಿ ಹಮ್ಮಿಕೊಂಡಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ತಾಲ್ಲೂಕು ಘಟಕದ ಅಧ್ಯಕ್ಷರಾದ ಸುಧೀಂದ್ರ ಕುಮಾರ್ ರವರ ಹುಟ್ಟು ಹಬ್ಬದ ಪ್ರಯುಕ್ತವಾಗಿ ಡಿಸೆಂಬರ್ 3 ರಂದು ಜೇವರ್ಗಿ ತಾಲೂಕಿನ ಸೊನ್ನ ಗ್ರಾಮದ ಶ್ರೀ ಶಿವಾನಂದ ಶಿವಯೋಗಿ ಕಲ್ಯಾಣ ಸಂಸ್ಥೆಯ ಆವರಣದಲ್ಲಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ

ಆರ್ಥಿಕವಾಗಿ,ಸಾಮಾಜಿಕವಾಗಿ, ಶೈಕ್ಷಣಿಕವಾಗಿ,ಸೇವೆ ಸಲ್ಲಿಸುತ್ತಾ ಬಂದಿರುವ ನರಸಿಂಹ ನಾಯಕ ಅವರು ಮೂಲತಃ ರಾಯಚೂರು ಜಿಲ್ಲೆಯವರಾಗಿದ್ದು ಅವರಿಗೆ ಈ ಬಾರಿ ಜಯಕರ್ನಾಟಕ ರತ್ನ  ಪ್ರಶಸ್ತಿ ಲಭಿಸಿರುವುದರಿಂದ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಸವರಾಜ ಸಿನ್ನೂರ,ವೀರಭದ್ರಯ್ಯ ಅಯ್ಯಾಳ,ಸೂಗುರೇಶ ಗಣಾಚಾರಿಮಠ,ಶಿವಕುಮಾರ ಜಾಯಿ,ಚಂದ್ರಶೇಖರ್ ಬಾನಾಳ ಮಲ್ಕಪ್ಪ ಹೇರುಂಡಿ ಹರ್ಷ ವ್ಯಕ್ತಪಡಿಸಿದ್ದಾರೆ.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

4 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

4 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

6 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

6 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

7 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

7 hours ago