ರೈತ ಹಾಗೂ ಕೃಷಿ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ವತಿಯಿಂದ ಪ್ರತಿಭಟನೆ

0
62

ಶಹಾಬಾದ:ನಗರದ ತಹಸೀಲ್ ಕಾರ್ಯಾಲಯದ  ಮುಂದೆ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ವತಿಯಿಂದ ಮಂಗಳವಾರ ರೈತರ, ಕೃಷಿ ಕೂಲಿಕಾರರ ಹಾಗೂ ಕಾರ್ಮಿಕರ ಬೇಡಿಕೆಗಳನ್ನು ಇತ್ಯರ್ಥ ಪಡಿಸಬೇಕೆಂದಯ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಅಶೋಕ ಮ್ಯಾಗೇರಿ ಮಾತನಾಡಿ, ಕಳೆದ 30 ವರ್ಷಗಳಲ್ಲಿ ಜಾಗತೀಕರಣ, ಉದಾರೀಕರಣ, ಖಾಸಗೀಕರಣ ನೀತಿಗಳ ಫಲವಾಗಿ ದೇಶದ ಕೃಷಿ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡು ಸುಮಾರು ನಾಲ್ಕು ಲಕ್ಷ ರೈತರು ಆತ್ಮಹತ್ಯೆಗೆ ಗುರಿಯಾಗಿದ್ದಾರೆ. ಕೊರೊನಾದಿಂದ ನಮ್ಮ ದೇಶದಲ್ಲಿ ಎಲ್ಲಾ ಬಿಕ್ಕಟ್ಟುಗಳನ್ನು ಮತ್ತಷ್ಟು ಉಲ್ಭಣಗೊಳಿಸಿವೆ. ವಿಶೇಷವಾಗಿ ಗ್ರಾಮೀಣ ಪ್ರದೇಶದ ಜನರು ಸಾಕಷ್ಟು ಕಷ್ಟ ನಷ್ಟ ಅನುಭವಿಸಿದ್ದಾರೆ. ರೈತ ಹಾಗೂ ಕೃಷಿ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಉಪ ತಹಸೀಲ್ದಾರ  ಮಲ್ಲಿಕಾರ್ಜುನ ರೆಡ್ಡಿ ಮುಖಾಂತರ ಪ್ರಧಾನಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

Contact Your\'s Advertisement; 9902492681

ಸಿಐಟಿಯು ತಾಲೂಕಾಧ್ಯಕ್ಷೆ ಶೇಖಮ್ಮ ಕುರಿ ಮಾತನಾಡಿ, ಅಲ್ಲದೇ ವಿವಿಧ ಬೇಡಿಕೆಗಳಾದ ರೈತರ ಮೇಲಿನ ದೌರ್ಜನ್ಯಕ್ಕೆ ನೈತಿಕ ಹೊಣೆ ಹೊತ್ತು ಪ್ರಧಾನಿ ದೇಶದ ರೈತರಿಗೆ ಕ್ಷಮೆಯಾಚಿಸಬೇಕು. ಕೃಷಿಗೆ ಸಂಬಂಧಿಸಿದ ಮೂರು ಕಾಯ್ದೆ ಹಾಗೂ ವಿದ್ಯುತ್ ಕಾಯ್ದೆ ತಿದ್ದುಪಡಿ 2020ನ್ನು ಕೂಡಲೇ ರದ್ದುಪಡಿಸಬೇಕು.ಡಾ.ಎಮ್.ಎಸ್ ಸ್ವಾಮಿನಾಥನ  ವರದಿಯನ್ನು ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಮಾಡುವ ಕಾನೂನು ಹಾಗೂ ರೈತ ಕೃಷಿ ಕೂಲಿಕಾರರ ಗ್ರಾಮೀಣ ಬಡವರಿಗೆ ಕಡಿಮೆ ಬಡ್ಡಿಯಲ್ಲಿ ಬ್ಯಾಂಕ್ ಸಾಲಗಳು ನೀಡಬೇಕು.ಈ ಸಂದರ್ಭದಲ್ಲಿ ಋಣಮುಕ್ತ ಕಾಯ್ದೆಯನ್ನು ಕೇಂದ್ರ ಸರಕಾರ ಜಾರಿಗೆ ಮಾಡಬೇಕೆಂದು ಆಗ್ರಹಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕಾ ಸಂಚಾಲಕ ರಾಯಪ್ಪ ಹುರಮುಂಜಿ, ಕಟ್ಟಡ ಕಾರ್ಮಿಕ ಸಂಘಟನೆಯ ತಾಲೂಕಾಧ್ಯಕ್ಷ ನಾಗಪ್ಪ ರಾಯಚೂರಕರ್,ನಿಲೇಶ, ಕಲ್ಯಾಣಿ ಅಲ್ಲೂರ,ಶಿವಶರಣಪ್ಪ, ಹಾಜಪ್ಪ, ಲಾಲು, ವಾಸುದೇವ, ಕಲ್ಲಪ್ಪ ಸೇರಿದಂತೆ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here