ವೀರಶೈವ ನಿಗಮಕ್ಕೆ ನಿರ್ದೇಶಕರ ನೇಮಕ: ಮೋದಿ ಅಸಮಧಾನ

0
99

ಕಲಬುರಗಿ: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷ ನಿರ್ದೇಶಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ನಿಗಮ ನಿರ್ದೇಶಕರ ನೇಮಕದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಒಬ್ಬರಿಗೂ ನೇಮಕ ಮಾಡದೆ ಮಲತಾಯಿ ಧೋರಣೆ ಆಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕ ಅಧ್ಯಕ್ಷರಾದ ಶರಣಕುಮಾರ ಮೋದಿ ಅಸಮಧಾನ ವ್ಯಕ್ತಪಡಿಸಿದ್ದಾರೆ.

Contact Your\'s Advertisement; 9902492681

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಮೋದಿ, ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಹತ್ತು ಜನರನ್ನು ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದ್ದು, ಇದರಲ್ಲಿ ಒಬ್ಬರೂ ಸಹ ಕಲ್ಯಾಣ ಕರ್ನಾಟಕದವರಿಲ್ಲ. ಇದು ಸರ್ಕಾರದ ಮಲತಾಯಿ ಧೋರಣೆಯನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ.

ವೀರಶೈವ ಲಿಂಗಾಯತರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.ಚುನಾಯಿತ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಮುಖ್ಯಮಂತ್ರಿಗಳು ಕೂಡಲೇ ಈ ಭಾಗದ ಕನಿಷ್ಠ ಆರು ಜನರನ್ನು ನಿರ್ದೇಶಕರನ್ನಾಗಿ ನೇಮಕ ಮಾಡುವ ಮೂಲಕ ಆಗಿರುವ ಅನ್ಯಾಯವನ್ನು ಸರಿಪಡಿಸ ಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here