ಸುರಪುರ: ಗ್ರಾಮೀಣಾಭೀವೃಧ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ,ಜಿಲ್ಲಾ ಪಂಚಾಯತಿ ಹಾಗು ತಾಲ್ಲೂಕು ಪಂಚಾಯತಿ ಸುರಪುರ ವತಿಯಿಂದ ಜಿಲ್ಲಾ ಮಟ್ಟದ ಸ್ವಚ್ಛಮೇವ ಜಯತೇ ಹಾಗು ಜಲಾಮೃತ ಕಾರ್ಯಕ್ರಮವನ್ನು ತಾಲ್ಲೂಕಿನ ತಿಂಥಣಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಜಿಲ್ಲಾ ಪಂಚಾಯತಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ ಉದ್ಘಾಟಿಸಿದರು.ಅಲ್ಲದೆ ಸ್ವಚ್ಛಮೇವ ಜಯತೇ ಹಾಗು ಜಲಾಮೃತ ಆಂದೋಲನ ಕುರಿತಾದ ಜನ ಜಾಗೃತಿ ಜಾಥಾದ ವಾಹನಕ್ಕೆ ಶಾಸಕ ನರಸಿಂಹನಾಯಕ(ರಾಜುಗೌಡ) ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ ಎಲ್ಲರಿಗು ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಜೊತೆಗೆ ಪರಿಸರ ಸ್ವಚ್ಛತೆಯನ್ನು ಕಾಪಾಡುವ ಕುರಿತು ಪ್ರಮಾಣ ವಚನ ಭೋದಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕವಿತಾ ಮನ್ನಿಕೇರಿ,ತಾಲ್ಲೂಕು ಪಂಚಾಯತಿ ಅಧ್ಯಕ್ಷ ಅನಸೂಬಾಯಿ ತಿರುಪತಿ ಚವ್ಹಾಣ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಹೆಚ್.ಸಿ.ಪಾಟೀಲ, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಜಗದೇವಪ್ಪ,ಬಿಇಒ ನಾಗರತ್ನ ಓಲೆಕಾರ,ಉಪ ವಲಯ ಅರಣ್ಯಾಧಿಕಾರಿ ಪುಷ್ಪಲತಾ ಸೇರಿದಂತೆ ಸ್ಥಳಿಯ ಗ್ರಾಮ ಪಂಚಾಯತಿ ಅಧ್ಯಕ್ಷರು,ಎಲ್ಲಾ ಸದಸ್ಯರು ಹಾಗು ಇತರೆ ಅಧಿಕಾರಿಗಳಿದ್ದರು.