ಬಿಸಿ ಬಿಸಿ ಸುದ್ದಿ

ವಕೀಲರ ದಿನಾಚರಣೆ ಕಾರ್ಯಕ್ರಮ ವಕೀಲ ವೃತ್ತಿ ಪವಿತ್ರವಾಗಿದೆ: ನ್ಯಾ.ಭಾಮಿನಿ

ಶಹಾಪುರ: ಹಿರಿಯ ವಕೀಲರ ಆದರ್ಶ ಮೌಲ್ಯಗಳನ್ನು ಯುವ ವಕೀಲರು ಗೌರವಿಸುವುದರ ಜೊತೆಗೆ ಸೂಕ್ತ ಮಾರ್ಗದರ್ಶನದಲ್ಲಿ ನಡೆಯಬೇಕು. ವಕೀಲ ವೃತ್ತಿಯು ಪವಿತ್ರವಾಗಿದೆ ಎಂದು ಹಿರಿಯ ಶ್ರೇಣಿಯ ನ್ಯಾಯಾಲಯದ ನ್ಯಾಯಾಧೀಶರಾದ ಭಾಮಿನಿ ಅವರು ತಿಳಿಸಿದರು.

ಇಲ್ಲಿನ ವಕೀಲರ ಸಂಘದಲ್ಲಿ ಶುಕ್ರವಾರ ವಕೀಲರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 50 ವರ್ಷ ವಕೀಲ ವೃತ್ತಿ ಸೇವೆಯನ್ನು ಪೂರೈಯಿಸಿದ ಹಿರಿಯ ನ್ಯಾಯವಾದಿಗಳಾದ ಭಾಸ್ಕರರಾವ್ ಮುಡಬೂಳ ಹಾಗೂ ಶ್ರೀನಿವಾಸರಾವ ಕುಲಕರ್ಣಿ ಅವರನ್ನು ಸನ್ಮಾನಿಸಿ ಮಾತನಾಡಿದರು.

ಹಿರಿಯ ವಕೀಲರಾದ ನಿಂಗಣ್ಣ ಚಿಂಚೋಡಿ ಮಾತನಾಡಿ, ಸಾರ್ಥಕ ಸೇವೆ ಸಲ್ಲಿಸಿದ ವ್ಯಕ್ತಿಗಳನ್ನು ಗೌರವಿಸುವುದು ಮಾನವಂತರ ಸಮಾಜವಾಗಿದೆ. ವಕೀಲರು ದೇಶ ಕಟ್ಟುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ವಕೀಲ ವೃತ್ತಿಗೆ ನಿವೃತ್ತಿ ಇಲ್ಲ. ಅದೊಂದು ಸೇವೆಯಾಗಿದೆ.ಹಿರಿಯ ವಕೀಲರ ಪಾಂಡಿತ್ಯವನ್ನು ನೆರಳಿನ ಆಸರೆಯಂತೆ ಪಡೆದುಕೊಳ್ಳಬೇಕು ಎಂದರು.

ಗೌರವ ಸನ್ಮಾನ ಸ್ವೀಕರಿಸಿದ ಹಿರಿಯ ವಕೀಲರಾದ ಭಾಸ್ಕರರಾವ ಹಾಗೂ ಶ್ರೀನಿವಾಸರಾವ ಕುಲಕರ್ಣಿ ಮಾತನಾಡಿ, ವಕೀಲರು ಎಂದಿಗೂ ನಿರಾಶೆಸರ್ಕಾರರದು. ವೈಯಕ್ತಿಯ ಜೀವನವನ್ನು ಬದಿಗಿಟ್ಟು ಇದೊಂದು ವೃತ್ತದಂತೆ ಕೆಲಸ ನಿರ್ವಹಿಸಬೇಕು. ನಿರಂತರ ಅಧ್ಯಯನ ಮಾಡುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಯಾವತ್ತು ವಕೀಲರು ನ್ಯಾಯಾಲಯದ ಕೋರ್ಟ್ ಕಲಾಪದಲ್ಲಿ ಸುಳ್ಳು ಹೇಳಬಾರದು. ನಿಜಾಂಶವನ್ನು ತಿಳಿಸಿ. ವೃತ್ತಿ ಘನತೆಯನ್ನು ಕಾಪಾಡಿಕೊಂಡು  ಹೋಗಬೇಕು. ವಯಸ್ಸು ಹೆಚ್ಚಾದಂತೆ ಮನಸ್ಸು ಮಾಗಬೇಕು. ಒತ್ತಡದ ನಡುವೆ ಉತ್ತಮ ಆರೋಗ್ಯವನ್ನು ಕಾಪಾಡಿಕೊಂಡು ಹೋಗಬೇಕು ಎಂದರು.

ಪ್ರಧಾನ ಸಿವಿಲ್ ನ್ಯಾಯಾಧೀಶ ಕಾಡಪ್ಪ ಹುಕ್ಕೇರಿ, ವಕೀಲರ ಸಂಘದ ಅಧ್ಯಕ್ಷ ಎಂ.ಎಸ್.ರಾಂಪುರೆ ಕಾರ್ಯದರ್ಶಿ ಸಂದೀಪ ದೇಸಾಯಿ,ಯಾದಗಿರಿ ವಕೀಲರ ಸಂಘದ ಅಧ್ಯಕ್ಷ ಎಸ್.ಪಿ.ನಾಡಕರ್ ಇದ್ದರು.

emedialine

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

3 mins ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

4 mins ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

9 mins ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

13 mins ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

15 mins ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

36 mins ago