ಕಲಬುರಗಿ: ಸಮೃದ್ಧಿಯ ಸವಿನೆನಪಿನಲ್ಲಿ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿಯು ನಗರದಲ್ಲಿ ನಡೆಸಲುದ್ದೇಶಿಸಲಾಗಿರುವ ‘ವಚನದೋಲಗ’ ಎನ್ನುವ ಸಾಮಾಜಿಕತೆಯ ಸದ್ವಿಚಾರಗಳ ವೈಚಾರಿಕ ಚಿಂತನಾ ಸಮಾವೇಶದ ಪೂರಕವಾಗಿ ರಚಿಸಿದ ಸ್ವಾಗತ ಸಮಿತಿಗೆ ಅಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಹೆಚ್.ಕೆ.ಇ. ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ-ಖ್ಯಾತ ವೈದ್ಯ ಡಾ.ಎಸ್.ಬಿ.ಕಾಮರೆಡ್ಡಿ ಹಾಗೂ ಶಿಕ್ಷಕ ಸಂಘಟಕ ಪ್ರಭುಲಿಂಗ ಮೂಲಗೆ ಅವರಿಗೆ ಅಧಿಕೃತ ಆಹ್ವಾನ ನೀಡಿ ಗೌರವಿಸಲಾಯಿತು.
ನಂತರ ಮಾತನಾಡಿದ ಡಾ.ಎಸ್.ಬಿ.ಕಾಮರೆಡ್ಡಿ, ಹನ್ನೆರಡನೆಯ ಶತಮಾನದ ಬಸವಾದಿ ಶರಣರು ತಮ್ಮ ಶ್ರೇಷ್ಠ ವಚನಗಳ ಮೂಲಕ ಜನರಲ್ಲಿ ಮಾನವೀಯ ಮೌಲ್ಯಗಳನ್ನು ಬಿತ್ತುವ ಮೂಲಕ ಸರ್ವ ಸಮಾನತೆಗಾಗಿ ಹೋರಾಡಿದ ವಿಶ್ವಮಾನವರಾಗಿದ್ದಾರೆ. ವಚನಗಳನ್ನು ನಾವು ಚಲನಶೀಲತೆಯನ್ನಾಗಿ ಬಳಸಿಕೊಳ್ಳುತ್ತಾ ಸೃಜನಶೀಲತೆಯನ್ನಾಗಿ ಬೆಳೆಸಿಕೊಳ್ಳಬೇಕೆಂದ ಅವರು, ಈ ನಿಟ್ಟಿನಲ್ಲಿ ಸಂಘಟಕ ವಿಜಯಕುಮಾರ ತೇಗಲತಿಪ್ಪಿ ಮಾಡುವ ಪ್ರತಿಯೊಂದು ಕಾರ್ಯ ಜನೋಪಯೋಗಿಯಾಗಿರುತ್ತವೆ. ಅದಕ್ಕಾಗಿ ಪ್ರತಿಯೊಬ್ಬರೂ ಅವರನ್ನು ಸಹಕರಿಸುವ ಮೂಲಕ ಸಾಂಸ್ಕೃತಿಕ ಲೋಕದ ಉನ್ನತ ಸ್ಥಾನಕ್ಕೊಯ್ಯಬೇಕು ಎಂದು ಸಲಹೆ ನೀಡಿದರು.
ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಮಾತನಾಡಿ, ತಾತ್ವಿಕ ತಳಹದಿಯ ಮೇಲೆ ಸಾತ್ವಿಕ ಸಮಾಜ ನಿರ್ಮಿಸಿದ ಬಸವಾದಿ ಶರಣರ ಜೀವನಾದರ್ಶವನ್ನು ನಾವೆಲ್ಲರೂ ಪಾಲಿಸಿಕೊಂಡು ಬಂದರೆ ಮಾತ್ರ ನಾಡೆಲ್ಲ ಉತ್ತಮ ವಾತಾವರಣ ನಿರ್ಮಾಣವಾಗುತ್ತದೆ. ಅದಕ್ಕೆ ಪೂರಕವಾಗಿ ಹಮ್ಮಿಕೊಂಡಿದ್ದೇ ಈ ವಚನದೋಲಗ ಕಾರ್ಯಕ್ರಮ ಎಂದರು.
ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಪ್ರಭುಲಿಂಗ ಮೂಲಗೆ ಮಾತನಾಡಿ, ಶರಣರ ವಚನಗಳಿಗೆ ಬಹಿರಂಗ ಶುದ್ಧಿಗಿಂತ ಅಂತರಂಗ ಶುದ್ಧಿ ಬಹುಮುಖ್ಯ. ವಚನಗಳ ಪಾಲನೆಯಿಂದ ಬದುಕು ಸುಂದರವಾಗಿ ಕಟ್ಟಿಕೊಳ್ಳಬಹುದು. ಕಾರ್ಯಕ್ರಮದ ಯಶಸ್ವಿಗೆ ಸರ್ವರೂ ಸಹಕರಿಸೋಣ ಎಂದರು.
ಅಕಾಡೆಮಿಯ ಶಿವರಾಜ ಅಂಡಗಿ, ಪರಮೇಶ್ವರ ಶಟಕಾರ, ವಿನೋದ ಜೇನವೇರಿ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಚಂದ್ರಕಾಂತ ಬಿರಾದಾರ, ದಿನಕರ ಮೂಲಗೆ, ಭುವನೇಶ್ವರಿ ಹಳ್ಳಿಖೇಡ, ಶಿಕ್ಷಕರ ಸಂಘಟನೆಯ ಪ್ರಮುಖರಾದ ಭಾನುಕುಮಾರ ಗಿರೇಗೋಳ, ಚಂದ್ರಶೇಖರ ಪಾಟೀಲ ಯಳಸಂಗಿ, ಸೋಮು ಕುಂಬಾರ, ಪಿಡಿಎ ಇಂಜಿನೀಯರಿಂಗ ಕಾಲೇಜಿನ ಪ್ರಾಧ್ಯಾಪಕ ಡಾ.ಬಾಬುರಾವ ಶೇರಿಕಾರ, ಹಿರಿಯ ಕವಿ ಭೀಮರಾಯ ಹೇಮನೂರ, ಶಂಕರಲಿಂಗ, ಮನೋಹರ ಪೊದ್ದಾರ, ಮಾಲಾ ಕಣ್ಣಿ, ಮಾಲಾ ದಣ್ಣೂರ, ಶ್ರೀಕಾಂತ ಪಾಟೀಲ ತಿಳಗೂಳ, ಪ್ರಭವ ಪಟ್ಟಣಕರ್, ಸಂದೀಪ ಕಲಬುರಗಿ, ಸುರೇಶ ವಗ್ಗೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…