ಶಹಾಪುರ : ಗ್ರಾಮ ಪಂಚಾಯ್ತಿ ಚುನಾವಣೆ ದಿನಾಂಕ ನಿಗದಿಯಾಗಿದ್ದು ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಪಕ್ಷದ ಒಗ್ಗಟ್ಟು ಪ್ರದರ್ಶಿಸುವಂತೆ ಶಾಸಕ ಶರಣಬಸ್ಸಪ್ಪಗೌಡ ದರ್ಶನಾಪುರ ಕರೆ ನೀಡಿದರು.
ಸಗರ ಗ್ರಾಮದ ಒಕ್ಕಲಗೇರ ಹಿರೇಮಠದ ಕರಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿರುವ ಗ್ರಾಮಪಂಚಾಯತಿ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ಪಕ್ಷದ ಎಲ್ಲಾ ಕಾರ್ಯಕರ್ತರು ಭೇದಭಾವ ಮರೆತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಹಗಲಿರುಳು ಶ್ರಮಿಸುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡರು.
ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮರಿಗೌಡ ಹುಲ್ಕಲ್ ಮಾತನಾಡಿ ಪ್ರತಿ ಗ್ರಾಮಗಳಲ್ಲಿ ಆಯಾ ವಾರ್ಡಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ಪಾರದರ್ಶಕತೆಯಿಂದ ಆಯ್ಕೆ ಮಾಡಿ ಚುನಾವಣಾ ಕಣಕ್ಕಿಳಿಸಿ ಗೆಲ್ಲಿಸುವಂತೆ ರಣತಂತ್ರ ರೂಪಿಸಬೇಕು ಎಂದು ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು.
ಈಗಾಗಲೇ ತಾಲ್ಲೂಕಿನ ಬಹುತೇಕ ಎಲ್ಲ ಗ್ರಾಮಗಳಲ್ಲಿ ಪೂರ್ವಭಾವಿ ಸಭೆ ನಡೆಸುವ ಮೂಲಕ ಈ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಪಡೆಯಲು ಕಾರ್ಯಕರ್ತರನ್ನು ಹುರಿದುಂಬಿಸಲಾಗುತ್ತಿದೆ ಕಳೆದ 5 ವರ್ಷಗಳಿಂದ ಗದ್ದಲವಿಲ್ಲದೆ ಸುಮ್ಮನಿದ್ದ ಎಲ್ಲಾ ಗ್ರಾಮಗಳು ಚುನಾವಣೆಯ ಹಣಾಹಣಿ ಯಲ್ಲಿ ರಂಗೇರತೊಡಗಿದೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಬಸನಗೌಡ ಮಾಲಿಪಾಟೀಲ, ಶರಣಪ್ಪ ಸಲದಾಪುರ, ಬಸವರಾಜ ಹೇರುಂಡಿ, ಇಬ್ರಾಹಿಂ ಶಿರವಾಳ,ರಾಯಪ್ಪ ಸಾಲಿಮನಿ,ಮಲ್ಲಣ್ಣ ವಮ್ಮಾ, ಗುರಣ್ಣ ಚಡಗೊಂಡ,ಗಣಪತಿ ಚಡಗೊಂಡ,ಮಲ್ಲಪ್ಪ ಕೂಡ್ಲೂರು,ಸೋಪಣ್ಣ ನಾಯಕ್, ಪಕ್ಷದ ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…