ರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋವಿಡ್-19 ಸರಣಿ ಯಶಸ್ವಿ

0
52

ಕೋಲಾರ : ತಾಲೂಕಿನ ಖಾಜಿ ಕಲ್ಲಹಳ್ಳಿ ಗ್ರಾಮದಲ್ಲಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕೋವಿಡ್-19 ಸರಣಿ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.

ಈ ತಪಾಸಣಾ ಶಿಬಿರದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಡಾಕ್ಟರ್ ಇಂಚರ ನಾರಾಯಣಸ್ವಾಮಿ ರವರು ಮಾತನಾಡಿ ಗ್ರಾಮದ ಐವತ್ತು ವರ್ಷಕ್ಕೂ ಮೇಲ್ಪಟ್ಟು ಹಾಗೂ ಕೋವಿಡ್-19ಕ್ಕೆ ಸಂಬಂಧಿಸಿದ ಲಕ್ಷಣಗಳು ಇರುವವರನ್ನು ಗುರುತಿಸಿ ತಪಾಸಣೆಗೆ ಒಳಪಡಿಸಲಾಯಿತು ಎಂದರು ಹಾಗೂ ತಾಲೂಕಿನ ಖಾಜಿ ಕಲ್ಲಹಳ್ಳಿ ಗ್ರಾಮ ಮತ್ತು ಸುತ್ತ ಮುತ್ತಲಿನ ಗ್ರಾಮದ ಗ್ರಾಮಸ್ಥರಿಗೆ ನರಸಾಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕೋವಿಡ್19 ಪರೀಕ್ಷೆ ನಡೆಸಿ ಸಾರ್ವಜನಿಕರಿಗೆ ಮತ್ತು ಕಾರ್ಮಿಕರಿಗೆ ಆಗಾಗ್ಗೆ ಸೋಪು ಮತ್ತು ನೀರಿನಿಂದ ಕೈಗಳನ್ನು ತೊಳೆಯುವುದನ್ನು ಅಭ್ಯಾಸ ಮಾಡಿ ಅಥವಾ ಆಲ್ಕೋಹಾಲ್ ಆಧಾರಿತ ಹ್ಯಾಂಡ್ ರಬ್ ಗಳನ್ನು ಬಳಸಿ ಕೈಗಳು ಸ್ವಚ್ಛವಾಗಿದ್ದರೂ ಸೋಪು ಮತ್ತು ನೀರಿನಿಂದ ತೊಳೆಯುವುದು ಮರೆಯದಿರಬಾರದು.

Contact Your\'s Advertisement; 9902492681

ರೋಗ ಲಕ್ಷಣಗಳು ಕಂಡು ಬಂದಲ್ಲಿ (ಜ್ವರ. ಉಸಿರಾಟದ ತೊಂದರೆ ನೆಗಡಿ. ಕೆಮ್ಮು) ಬಂದಲ್ಲಿ ತಕ್ಷಣ ವೈದ್ಯರನ್ನು ಭೇಟಿ ಮಾಡಿ. ವೈದ್ಯರನ್ನು ಭೇಟಿ ಮಾಡುವಾಗ ನಿಮ್ಮ ಬಾಯಿ ಮತ್ತು ಮೂಗನ್ನು ಮುಚ್ಚಿಕೊಳ್ಳಲು ಮಾಸ್ಕ್ ಧರಿಸಬೇಕು ಅಥವಾ ಕರವಸ್ತ್ರ ದಿಂದ ಮುಚ್ಚಿಕೊಳ್ಳಬೇಕು. ಹೆಚ್ಚು ಜನಸಂಖ್ಯೆ ಇರುವ ಸಮಾರಂಭಗಳಲ್ಲಿ ಭಾಗವಹಿಸುವುದು ನಿಲ್ಲಿಸಬೇಕು. ಕೆಮ್ಮುವಾಗ ಮತ್ತು ಸೀನುವಾಗ ಮಾಸ್ಕ್ ಅಥವಾ ಕರವಸ್ತ್ರ ಉಪಯೋಗಿಸಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಗಳಬಾರದು ಎಂದು ಮಾರ್ಗದರ್ಶನ ನೀಡಿದರು.

ಈ ಶಿಬಿರದಲ್ಲಿ ನರಸಾಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಕಾರ್ಯಕರ್ತೆ ರೇಣುಕಾ ದೇವಿ. ಶಾಲೆಯ ಮುಖ್ಯ ಶಿಕ್ಷಕರಾದ ಡಾಕ್ಟರ್ ಇಂಚರ ನಾರಾಯಣಸ್ವಾಮಿ. ಖಾಜಿ ಕಲ್ಲಹಳ್ಳಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ತಿಮ್ಮಕ್ಕ. ನರಸಾಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು. ಹಾಗೂ ಊರಿನ ಗ್ರಾಮಸ್ಥರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here