ಸುರಪುರ: ಮರಾಠ ಅಭಿವೃಧ್ಧಿ ನಿಗಮ ರಚನೆಯನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ರಾಜ್ಯ ಬಂದ್ ಅಂಗವಾಗಿ ಸುರಪುರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಹೋರಾಟಗಾರರು ಸರಕಾರದ ನಡೆಯನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು,ನಂತರ ತಹಸೀಲ್ ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಿ ಸರಕಾರ ಮತ್ತು ಕನ್ನಡ ಹೋರಾಟಗಾರರ ಬಗ್ಗೆ ಹಗುರವಾಗಿ ಮಾತನಾಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆಯನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ವೇದಿಕೆ ತಾಲ್ಲೂಕು ಅಧ್ಯಕ್ಷ ವೆಂಕಟೇಶ ನಾಯಕ ಬೈರಿಮಡ್ಡಿ ಮಾತನಾಡಿ,ಸರಕಾರ ಮರಾಠಿ ಹೆಸರಿನಲ್ಲಿ ಅಭಿವೃಧ್ಧಿ ನಿಗಮ ಮಾಡುವ ಮೂಲಕ ಕನ್ನಡಿಗರಿಗೆ ಅವಮಾನಿಸುವ ಕೆಲಸ ಮಾಡುತ್ತಿದೆ.ನಮ್ಮ ಹೋರಾಟ ಎಮ್.ಇ.ಎಸ್ ನಾಡದ್ರೋಹಿ ಗೂಂಡಾಗಳ ವಿರುಧ್ಧವಾಗಿದೆ,ನಾಡಿನಲ್ಲಿ ಸಾವಿರಾರು ಜನ ಮರಾಠ ಸಮುದಾಯದ ಹೋರಾಟಗಾರರು ನಮ್ಮ ಸಂಘಟನೆಗಳಲ್ಲಿದ್ದಾರೆ,ಅವರೆಲ್ಲರು ಕನ್ನಡಿಗರಾಗಿದ್ದಾರೆ,ಆದರೆ ಕನ್ನಡವನ್ನು ವಿರೋಧಿಸುವ ಎಮ್‌ಇಎಸ್ ದ್ರೋಹಿಗಳಿಗೆ ಸರಕಾರ ತನ್ನ ಸ್ವಾರ್ಥ ಓಟಿಗಾಗಿ ಇಂತಹ ಕೆಲಸಕ್ಕೆ ಮುಂದಾಗಿರುವುದು ಖಂಡನಿಯ ಎಂದರು.
ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಒಬ್ಬ ಕನ್ನಡ ದ್ರೋಹಿಯಾಗಿ ಕನ್ನಡ ಹೋರಾಟಗಾರರ ಬಗ್ಗೆ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಬೇಕು ಅಲ್ಲದೆ ಮುಖ್ಯಮಂತ್ರಿಗಳು ಇಂತಹ ಅವಿವೇಕಿ ಶಾಸಕನ ಮೇಲೆ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ನಾವೇ ಬುದ್ಧಿ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ತಹಸೀಲ್ದಾರ ಸುಬ್ಬಣ್ಣ ಜಮಖಂಡಿ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಭೀಮು ನಾಯಕ ಮಲ್ಲಿಬಾವಿ ಕರವೇ ಪ್ರವೀಣ ಶೆಟ್ಟಿ ಬಣದ ತಾಲೂಕು ಅಧ್ಯಕ್ಷ ನಾಗರಾಜ ಕಲಬುರ್ಗಿ ರಾಘವೇಂದ್ರ ಕುಲಕರ್ಣಿ ತಾಲೂಕು ಉಪಾಧ್ಯಕ್ಷ ಶಿವಮೋನಯ್ಯ ಎಲ್.ಡಿ.ನಾಯಕ,ಪ್ರಧಾನ ಕಾರ್ಯದರ್ಶಿ ಅಂಬ್ಲಯ್ಯ ಬೇಟೆಗಾರ ಶ್ರೀನಿವಾಸ ನಾಯಕ ಆನಂದ ಮಾಚಗುಂಡಾಳ ಶ್ರೀನಿವಾಸ ನಾಯಕ ಲಕ್ಷ್ಮೀಪುರ ಅನಿಲ್ ಬಿರಾದಾರ ನಿಂಗಪ್ಪ ನಾಯಕ ವಿರೇಶ ರುಮಾಲ ಭೀಮರಾಯ ಬಾದ್ಯಾಪುರ ಮಲ್ಲಿಕಾರ್ಜುನ ಬೈರಿಮಡ್ಡಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…