ಬೆಂಗಳೂರು: ಮಹಾನ್ ಮಾನವತವಾದಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಪ್ರತಿಪಾದಿಸಿರುವ ತತ್ವ-ಆದರ್ಶಗಳನ್ನು ಅರ್ಥ ಮಾಡಿಕೊಂಡು ಅವರು ಹಾಕಿಕೊಟ್ಟ ಹಾದಿಯಲ್ಲಿ ನಡೆಯುವಂತ ಸಂಕಲ್ಪ ಇಂದು ಮಾಡಬೇಕಾಗಿದೆ. ಸಮಾ ಸಮಾಜದ ನಿರ್ಮಾಣ ನಮ್ಮ ಸರ್ಕಾರದ ಗುರಿಯಾಗಿದ್ದು, ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರದ ಸೌಲಭ್ಯಗಳು ತಲುಪಬೇಕು, ಈ ನಿಟ್ಟಿನಲ್ಲಿ ನಾವು ಅಗತ್ಯವಿರುವ ಯೋಜನೆಗಳನ್ನು ರೂಪಿಸಿ ಜಾರಿಗೆ ತರುತ್ತಿದ್ದೇವೆ. ಡಾ.ಬಿ.ಆರ್.ಅಂಬೇಡ್ಕರ್ ಪುಣ್ಯ ಸ್ಮರಣಿಯ ದಿನದಂದು ನಾವು ಮಾನವೀಯತೆಯನ್ನು ಜಾಗೃತಗೊಳಿಸಬೇಕು, ನಾಡಿನಲ್ಲಿ ಶೋಷಣೆಮುಕ್ತ ಸಮಾಜವನ್ನು ಕಟ್ಟಲು ನಾವೆಲ್ಲರು ಶ್ರಮಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರೆ ನೀಡಿದರು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಇಂದು ಸಮಾಜ ಕಲ್ಯಾಣ ಇಲಾಖೆವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ವಿಧಾನಸೌಧದ ಮುಂಬಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು ಅಸ್ಪುಶೃತೆಯಂತ ಸಾಮಾಜಿಕ ಪಿಡುಗಿನ ವಿರುದ್ಧ ಹೋರಾಡಿ, ಸಮ ಸಮಾಜಕ್ಕಾಗಿ ಶ್ರಮಿಸಿದ ಬಾಬ ಸಾಹೇಬ್ ಅಂಬೇಡ್ಕರ್ ನಮಗೆಲ್ಲರಿಗೂ ಸಹ ಆದರ್ಶ ಪ್ರಾಯಾರಾಗಿದ್ದಾರೆ. ಡಾ ಅಂಬೇಡ್ಕರ್ ಅವರದ್ದು ಬಹುಮುಖಿ ವ್ಯಕ್ತಿತ್ವ ದೇಶದ ಅಭಿವೃದ್ಧಿಗೆ ಬಾಬಾ ಸಾಹೇಬರ ಕೊಡುಗೆ ಅನನ್ಯವಾದದ್ದು, ಪ್ರಪಂಚ ಕಂಡಂತಹ ಅತ್ಯಂತ ಪ್ರಭಾವಶಾಲಿ ಪ್ರತಿಭಾವಂತ ಅರ್ಥಶಾಸ್ತ್ರಜ್ಞರು ಅವರಾಗಿದ್ದರು ಎಂದರು.
ಮಹಿಳೆಯರಿಗೆ ಸಮಾನ ಹಕ್ಕು. ಕಾರ್ಮಿಕರ ಕಲ್ಯಾಣ, ಶಿಕ್ಷಣ ಹಾಗೂ ಸ್ವಾತಂತ್ರದ ಹಕ್ಕಿಗಾಗಿ ಹೋರಾಡಿದ್ದಾರೆ. ದೇಶಕ್ಕೆ ಸಶಕ್ತ ಸಂವಿಧಾನ ನೀಡುವ ಮೂಲಕ ಪ್ರಜಾಪ್ರಭುತ್ವದ ವ್ಯವಸ್ಥೆಗೆ ಒಂದು ಮೂರ್ತ ರೂಪ ನೀಡಿದರು. ವಿಶ್ವದಲ್ಲಿಯೇ ಮಾದರಿ ಅನಿಸಿಕೊಂಡ ಭಾರತದ ಸಂವಿದಾನ ಸಮಾನತೆ ಭಾತೃತ್ವ ಸೌಹಾರ್ದತೆಯನ್ನು ಸಾರುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಸೇರಿದಂತೆ ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…