ಬಿಸಿ ಬಿಸಿ ಸುದ್ದಿ

ಈ ಭಾರಿ ಬಿಬಿಎಂಪಿಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಬಹುಮತ: ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ

ಬೆಂಗಳೂರು: ಆಮ್‌ ಆದ್ಮಿ ಪಕ್ಷದಿಂದ ಬಿಬಿಎಂಪಿ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಮನೆ, ಮನೆಗೆ ತಲುಪಿಸುವ ಗೊರಕೆ ಸಾಕು ಪೊರಕೆ ಬೇಕು ಬೃಹತ್‌ ಅಭಿಯಾನಕ್ಕೆ ಭಾನುವಾರ ಚಾಲನೆ ನೀಡಲಾಯಿತು.

ಮಂಜುನಾಥ ನಗರದ ನಿವಾಸಿಗಳಿಗೆ ಪಕ್ಷದ ಬಾವುಟ ನೀಡುವುದರ ಮೂಲಕ ಚಾಲನೆ ನೀಡಿ ಮಾತನಾಡಿದ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪೃಥ್ವಿ ರೆಡ್ಡಿ, ಬೆಂಗಳೂರಿನ ಜನತೆ ಮೂರು ಪಕ್ಷಗಳ ಕೆಟ್ಟ ಆಡಳಿತದಿಂದ ಬೇಸತ್ತು ಹೋಗಿದ್ದಾರೆ. ಆದ ಕಾರಣ ಬಿಬಿಎಂಪಿಯ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಮನೆ, ಮನೆಗೆ ತಲುಪಿಸುವ ಅಭಿಯಾನವನ್ನು ಪ್ರತಿ ವಾರ ಮಾಡಲಿದ್ದೇವೆ. ಈ ಬಾರಿ ಬಿಬಿಎಂಪಿಯ ಚುನಾವಣೆಯಲ್ಲಿ ನಾವು ಬಹುಮತಗಳಿಸಲಿದ್ದೇವೆ ಎಂದು ಹೇಳಿದರು.

ವರನಟ ರಾಜ್‌ಕುಮಾರ್ ಅವರ ಪ್ರತಿಮೆ ಮಾಲಾರ್ಪಣೆ ಮಾಡುವ ಮೂಲಕ “ಮನೆ, ಮನೆ ಆಮ್ ಆದ್ಮಿ” ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ, ಖಾಸಗಿ ಸಂಸ್ಥೆ ನಡೆಸಿದ ಸಮೀಕ್ಷೆ ಪ್ರಕಾರ ಶೇ 70 ರಷ್ಟು ಬೆಂಗಳೂರಿನ ಜನತೆ ಬೆಂಗಳೂರಿನಲ್ಲೂ ದೆಹಲಿ ಮಾದರಿ ಆಮ್ ಆದ್ಮಿ ಪಕ್ಷದ ಸರ್ಕಾರ ಇರಬೇಕು ಎಂದು ತಿಳಿಸಿದ್ದಾರೆ. ಈ ನಂಬಿಕೆಯನ್ನು ನಾವು ಅಧಿಕಾರಕ್ಕೆ ಬಂದರೆ ಉಳಿಸಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು. ಈ ಅಭಿಯಾನದ ಮೂಲಕ ಬೆಂಗಳೂರಿನ ಪ್ರತಿ ನಾಗರಿಕರ ಮನೆಗೆ ಭೇಟಿ ನೀಡಿ ಸರ್ಕಾರದ ಹಾಗೂ ಬಿಬಿಎಂಪಿಯ ವೈಫಲ್ಯ ಗಳನ್ನು ತಿಳಿಸಲಾಗುವುದು. ಮೂರ ಪಕ್ಷಗಳಿಗಿಂತ ಆಮ್ ಆದ್ಮಿ ಪಕ್ಷ ಹೇಗೆ ಭಿನ್ನ ಎಂದು ಮನವರಿಕೆ ಮಾಡಿಕೊಡಲಾಗುವುದು ಎಂದರು.

ಅಭಿಯಾನದಲ್ಲಿ ರಾಜ್ಯ ಸಹ ಸಂಚಾಲಕ ವಿಜಯ್ ಶರ್ಮ, ಸಹ ಸಂಚಾಲಕಿ ಶಾಂತಲಾ ದಾಮ್ಲೆ, ಉಪಾಧ್ಯಕ್ಷ ಸುರೇಶ್‌ ರಾಥೋಡ್‌, ಕಾರ್ಯದರ್ಶಿ ಸಂಚಿತ್ ಸಹಾನಿ, ಜಂಟಿ ಕಾರ್ಯದರ್ಶಿ ದರ್ಶನ್ ಜೈನ್, ರಾಜಾಜಿ ನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಗುರುಮೂರ್ತಿ, ಮಂಜುನಾಥ್ ನಗರ ವಾರ್ಡ್ ಅಧ್ಯಕ್ಷ ಬಾಲಕೃಷ್ಣೇಗೌಡ, ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಲಕ್ಷ್ಮಿಕಾಂತ್ ರಾವ್, ಫಣಿರಾಜ್.ಎಸ್.ವಿ. ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

emedialine

Recent Posts

ಡಾ.ಶರಣಬಸಪ್ಪ ಕ್ಯಾತನಾಳಗೆ ಮುಖ್ಯಮಂತ್ರಿಗಳಿಂದ ಶ್ರೇಷ್ಠ ವೈದ್ಯ ಶ್ರೀ ಪ್ರಶಸ್ತಿ ಪ್ರದಾನ

ಕಲಬುರಗಿ: ಕರ್ನಾಟಕ ಸರ್ಕಾರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷ ಜುಲೈ…

20 mins ago

ಮುಸ್ಲಿಮರಿಗೆ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸ್ಥಾನ ನೀಡಿ: ಅಬ್ದುಲ್ ರಹೀಮಾನ್ ಪಟೇಲ್

ಕಲಬುರಗಿ: ‘ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕು. ಮುಂಬರುವ ದಿನಗಳಲ್ಲಿ ಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ…

54 mins ago

ಡಾ. ಫ.ಗು. ಹಳಕಟ್ಟಿ ಯವರ ಜಯಂತಿ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…

2 hours ago

ಮೊಬೈಲ್ ರೀಚಾರ್ಜ್‍ಗಳ ಬೆಲೆ ಹೆಚ್ಚಳ ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಪ್ರತಿಭಟನೆ

ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್‍ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್‍ಓ ವತಿಯಿಂದ…

2 hours ago

ಸಾರ್ವಜನಿಕರು ಮಕ್ಕಳನ್ನು ಸರಕಾರಿ ಶಾಲೆಗೆ ದಾಖಲಿಸಿ

ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…

2 hours ago

ಪಠ್ಯಕ್ರಮ ರಚನೆ ಗುಣಾತ್ಮಕ ಅಂಶಗಳಿಂದ ಕೂಡಿರಲಿ

ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…

4 hours ago