ಕಲಬುರಗಿ: ನೀಮ್ ಪ್ರೊಜೆಕ್ಟ್ ಅಡಿಯಲ್ಲಿ ಪುಣೆಯ ಜಬಿಲ್ ಸರ್ಕಿಟ್ ಇಂಡಿಯಾ ಪ್ರೈ.ಲಿ. ಕಂಪನಿಯಲ್ಲಿ ನೀಮ್ ಟ್ರೇನಿ ಹುದ್ದೆಗೆ ಇದೇ ಜೂನ್ 14 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ಮತ್ತು ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಈ ಕಂಪನಿಯಲ್ಲಿ ೪೦೦ಕ್ಕೂ ಹೆಚ್ಚು ಟ್ರೇನಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತಿದೆ. ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ. ಹಾಗೂ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 25 ವರ್ಷದೊಳಗಿರಬೇಕು. ಅರ್ಹ ಅಭ್ಯರ್ಥಿಗಳು ರೆಸ್ಯೂಮ್ ಪ್ರತಿ, ವಿದ್ಯಾರ್ಹತೆ ಪ್ರಮಾಣಪತ್ರ, ಆಧಾರ ಕಾರ್ಡ್, ಪ್ಯಾನ್ ಕಾರ್ಡ, ಎರಡು ಭಾವಚಿತ್ರ ಹಾಗೂ ಬ್ಯಾಂಕ್ ಪಾಸ್‌ಬುಕ್ ಜಿರಾಕ್ಸ್ ಪ್ರತಿಗಳ ದಾಖಲಾತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಎಂ.ಎಸ್.ಕೆ. ಮಿಲ್ ರಸ್ತೆಯಲ್ಲಿರುವ ಸರ್ಕಾರಿ ಕೈಗಾರಿಕಾ ಕೇಂದ್ರದ ಹಿಂದುಗಡೆಯಿರುವ ಜಿಲ್ಲಾ ಉದೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08742-274846ಗೆ ಸಂಪರ್ಕಿಸಲು ಕೋರಲಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…