ಭಾರತ್‌ ಬಂದ್‌: ಆಮ್‌ ಆದ್ಮಿ ಪಕ್ಷ ಬೆಂಬಲ: ನಾಳೆ ಧರಣಿ ಸತ್ಯಾಗ್ರಹ

0
49

ಬೆಂಗಳೂರು: ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ರೈತರು ನಾಳೆ (ಡಿಸೆಂಬರ್‌ 8) ನೀಡಿರುವ ಭಾರತ್‌ ಬಂದ್‌ ಗೆ ರಾಜ್ಯ ಆಮ್‌ ಆದ್ಮಿ ಪಕ್ಷ ಬೆಂಬಲ ನೀಡಿದ್ದು, ಪಕ್ಷದ ವತಿಯಿಂದ ಮೌರ್ಯ ವೃತ್ತದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು

ಆಮ್‌ ಆದ್ಮಿ ಪಕ್ಷದ ಬೆಂಗಳೂರು ಘಟಕಡ ಅಧ್ಯಕ್ಷ ಮೋಹನ್‌ ದಾಸರಿ ಹೇಳಿದ್ದಾರೆ.

Contact Your\'s Advertisement; 9902492681

ಈ ದೇಶದ ಬೆನ್ನೆಲುಬಾದ ರೈತ ಕಳೆದ 20 ದಿನಗಳಿಂದ ಕೊರೆವ ಚಳಿಯನ್ನೂ ಲೆಕ್ಕಿಸದೆ ದೆಹಲಿ/ ಪಂಜಾಬ್ ಗಡಿಯಲ್ಲಿ‌ ಪ್ರತಿಭಟನೆ ನಡೆಸುತ್ತಿದ್ದು ಕೇಂದ್ರ ಸರ್ಕಾರ ಸರಿಯಾಗಿ ಸ್ಪಂದಿಸದೆ ಅನ್ನದಾತನನ್ನು ಅವಮಾನ ಮಾಡಿದೆ. ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಸೇರಿದಂತೆ ಮಾಡಿದರು.ಯ್ದೆಗಳನ್ನು ಹಾಳು ಮಾಡಿರುವ ನರೇಂದ್ರ ಮೋದಿ ಅವರ ನೇತೃತ್ವದ ರಾಜ್ಯ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ. ಯಡಿಯೂರಪ್ಪನವರ ನೇತೃತ್ವದ ರಾಜ್ಯ ಸರ್ಕಾರವೂ ಸಹ ಕೇಂದ್ರದ ತಾಳಕ್ಕೆ ಕುಣಿಯುತ್ತಿದ್ದು, ರೈತರ ಪರವಾಗಿ ನಿಂತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೆಹಲಿಯ ಆಮ್ ಆದ್ಮಿ ಸರ್ಕಾರ ರೈತರನ್ನು ಕೂಡಿಹಾಕಲು ಮೈದಾನಗಳನ್ನು ಕೊಡದೆ ರೈತರ ಬೆನ್ನಿಗೆ ನಿಂತಿದೆ ಹಾಗೂ ನೀರು, ಊಟ, ಹೊದಿಕೆಯ ವ್ಯವಸ್ಥೆ ಮಾಡಿದೆ. ಆದರೆ ಕೇಂದ್ರ ಸರ್ಕಾರ ನೀಚ ಬುದ್ದಿ ತೋರಿಸಿ ಅನ್ನದಾತನ ವಿರುದ್ದ ನಿಂತಿದೆ ಎಂದು ಕಿಡಿಕಾರಿದರು.

ಈ ದೇಶದ ಸಂಸ್ಕೃತಿಗೆ ಕೊಡಲಿ ಪೆಟ್ಟು ಹಾಕಲು ಹೊರಟಿರುವ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕು, ರೈತರ ಜೊತೆ ಇಡೀ ದೇಶದ ಜನರಿದ್ದಾರೆ ಎನ್ನುವುದು ಸರ್ಕಾರದ ಅರಿವಿಗೆ ಬರುವಂತೆ ಮಾಡಬೇಕು, ಆದ ಕಾರಣ ಪಕ್ಷಾತೀತವಾಗಿ ಎಲ್ಲ ನಾಗರಿಕರೂ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಬೇಕು ಎಂದು ಮನವಿ ಮಾಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here