ಬಿಸಿ ಬಿಸಿ ಸುದ್ದಿ

ಒಂದೇ ಮನೆಯ ಅಕ್ಕ ತಂಗಿ ನೇಣು ಬಿಗಿದಕೊಂಡು ಆತ್ಮಹತ್ಯೆ

ಕಲಬುರಗಿ: ಚಿಂಚೋಳಿ ತಾಲೂಕಿನ ಐನಾಪುರ ಗ್ರಾಮದಲ್ಲಿ ಒಂದೇ ಮನೆಯ ಅಕ್ಕ ತಂಗಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಗ್ರಾಮದ ಐಶ್ವರ್ಯ ಸುತಾರ (20) ಹಾಗೂ ಸಾರಿಕಾ ಸುತಾರ (17) ಆತ್ಮಹತ್ಯೆಗೆ ಶರಣಾದ ಸಹೋದರಿಯರು. ಸದ್ಯ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆಗೆ ಶರಣಾದ ಯುವತಿಯರ ತಂದೆ ಐನಾಪುರ ಗ್ರಾಮದಲ್ಲಿ ಪೆಟ್ಟಿ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದು, ಐವರು ಮಕ್ಕಳಲ್ಲಿ, ಮೂವರ ಮದುವೆಯಾಗಿದೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ಶರಣಾದ ಸಾರಿಕಾಗೆ ತಿಂಗಳ ಹಿಂದಷ್ಟೆ ಮದುವೆ ನಿಶ್ಚಯವಾಗಿತ್ತು. ನಾಲ್ಕನೆಯವಳಾದ ಐಶ್ವರ್ಯಗೆ ಗಂಡು ಹುಡುಕಲಾಗುತಿತ್ತು ಎಂಬ ವಿಷಯ ಬೆಳಕಿಗೆ ಬಂದಿದೆ.

ಸಂಜೆ ತಾಯಿ ಹೊಲದಿಂದ ಮನೆಗೆ ಬಂದಾಗ ಇಬ್ಬರು ಯುವತಿಯರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಪಿಎಸ್ಐ ರಾಜಶೇಖರ ರಾಠೋಡ ಭೇಟಿ‌ ನೀಡಿ ಪರಿಶೀಲನೆ ‌ನಡೆಸಿದ್ದಾರೆ. ಈ ಸಂಬಂಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

1 hour ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

1 hour ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

1 hour ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago