ಕಲಬುರಗಿ: ಲಂಚದ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಸಿಕ್ಕು ಬಿದ್ದಿದ್ದ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಡಿವೈಎಸ್ಪಿಯೊಬ್ಬರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ಪ್ರಥಾನ ಹಾಗೂ ವಿಶೇಷ ಸತ್ರ ನ್ಯಾಯಾಲಯದ ನ್ಯಾಯಾಧೀಶ ಸತೀಶಸಿಂಗ್ ಮಹತ್ವದ ತೀರ್ಪು ನೀಡಿ ಆದೇಶ ಹೊರಡಿಸಿದ್ದಾರೆ.
ಸದ್ಯ ಅವರು ಕಲಬುರಗಿಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಸಿಆರ್ಜ ಸೆಲ್)ದಲ್ಲಿ ಡಿವೈಎಸ್ಪಿಯಾಗಿರುವ ವಿಜಯಲಕ್ಷ್ಮೀ ಶಿಕ್ಷೆಗೆ ಗುರಿಯಾದವರು. ಶಹಾಬಾದ್ ಠಾಣೆ ಇನ್ಸ್ಪೆಕ್ಟರ್ ಆಗಿದ್ದ ವೇಳೆ ಲಂಚ ಪಡೆದ ಆರೋಪ ಸಬೀತಾಗಿರುವ ಹಿನ್ನೆಯಲ್ಲಿ
ಪ್ರಕರಣದ ಹಿನ್ನೆಲೆ: 2015ರ ಡಿಸೆಂಬರ್ನಲ್ಲಿ ಶಹಾಬಾದ್ ಠಾಣೆ ಇನ್ಸ್ಪೆಕ್ಟರ್ ಆಗಿದ್ದ ವೇಳೆ ದೇವನ ತೆಗನೂರಿನ ಬಂಕ್ಶಲ್ಲಿ ವಾಹನಕ್ಕೆ ಡೀಸೆಲ್ ಹಾಕಿಸಲು ತೆರಳಿದಾಗ ಸಿಬ್ಬಂದಿ ಜತೆ ಜಗಳವಾಡಿದ್ದ ಪ್ರಕರಣ ದಾಖಲಾಗಿತ್ತು.
ರಾಜುನನ್ನು ಬಂಧಿಸಿ ಟಾಟಾ ಸುಮೋ ಜಪ್ತಿ ಮಾಡಿ, ನ್ಯಾಯಾಲಯದಿಂದ ಜಾಮೀನು ತಂದ ಬಳಿಕ ವಾಹನ ಬಿಡಿಸಿಕೊಳ್ಳಲು ವಿಜಯಲಕ್ಷ್ಮೀ 25 ಸಾವಿರ ರೂ. ಬೇಡಿಕೆಯಿಟ್ಟಿದ್ದರು. ಈ ವೇಳೆ ಲೋಕಾಯುಕ್ತರು ದಾಳಿ ನಡೆಸಿದಾಗ ಹಣದ ಸಮೇತ ಸಿಕ್ಕುಬಿದ್ದಿದ್ದರು.
ಕಲಬುರಗಿ ಲೋಕಾಯುಕ್ತ ಕಚೇರಿಯಲ್ಲಿ ಪ್ರಕರಣದ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು. ಲೋಕಾಯುಕ್ತರ ಪರ ಸರರ್ಕಾರಿ ಅಭಿಯೋಜಕ ಅಶೋಕ ಚಾಂದಕವಟೆ ವಾದ ಮಂಡಿಸಿದ್ದರು. ನ್ಯಾಯಾಧೀಶರು ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಡಿವೈಎಸ್ಪಿ ವಿಜಯಲಕ್ಷ್ಮೀ ಅವರನ್ನು ವಶಕ್ಕೆ ತೆಗೆದುಕೊಂಡು ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ಕೇಂದ್ರ ಕಾರಾಗೃಹಕ್ಕೆ ಕಳುಸಿಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…