ಕಲಬುರಗಿ: ಭಾರತದ ನೈಜ ಅಭಿವೃದ್ಧಿಯೆಂದರೆ ಗ್ರಾಮಗಳ ಅಭಿವೃದ್ಧಿಯು ಗ್ರಾಮ ಪಂಚಾಯಿತಿಗಳ ಮೂಲಕ ನಡೆಯುತ್ತದೆ. ಗ್ರಾಮೀಣ ಮತದಾರರು ಗ್ರಾಮ ಪಂಚಾಯತಿ ಚುನಾವಣೆ ನಡೆಯಲಿದ್ದು, ಸದಸ್ಯರನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೆ ಬಹಳ ಎಚ್ಚರಿಕೆಯಿಂದ ಮತದಾನ ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ( ಕನ್ನಡಿಗರ ಬಣ) ದ ಜಿಲ್ಲಾಧ್ಯಕ್ಷರಾದ ಆನಂದ ತೆಗನೂರ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ ಅವರು ನಿಷ್ಠಾವಂತ , ಜವಾಬ್ದಾರಿಯುತ, ನಿಸ್ವಾರ್ಥದಿಂದ ತಮ್ಮ ಗ್ರಾಮದ ಅಭಿವೃದ್ಧಿಗೆ ಹಾಗೂ ಸಮಸ್ಯೆಗಳಿಗೆ ಸ್ಪಂದಿಸುವಂಥ, ವಿದ್ಯಾವಂತ, ಬುದ್ಧಿವಂತ, ಯೋಗ್ಯ ಸದಸ್ಯರನ್ನು ಆಯ್ಕೆ ಮಾಡಬೇಕು. ಆಗ ಮಾತ್ರ ಪ್ರತಿಯೊಬ್ಬ ಪ್ರಜೆಯ ಅಮೂಲ್ಯವಾದ ಮತಕ್ಕೆ ಬೆಲೆ ಸಿಕ್ಕಂತಾಗುತ್ತದೆ.
ಮತದಾರರು ಆಮಿಷಕ್ಕೊಳಗಾಗಿ ಮತ ಮತ ಮಾರಿಕೊಂಡರೆ ಆಮೇಲೆ ಕೆಲಸ ಮಾಡದವರನ್ನು ತರಾಟೆಗೆ ತೆಗೆದುಕೊಳ್ಳುವ ಹಕ್ಕು ನಿಮಗಿರುವುದಿಲ್ಲ ಕೂಡಲೇ ಮತದಾರರು ಎಚ್ಚೆತ್ತುಕೊಂಡು ಅಭಿವೃದ್ಧಿ ಮಾಡುವಂತಹ ವ್ಯಕ್ತಿಗೆ ಮತದಾನ ಮಾಡಬೇಕು ಎಂದು ಅವರು ಮನವಿ ಮಾಡಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…