ಸುರಪುರ: ನಗರದ ಕಾಂಗ್ರೆಸ್ ಕಛೇರಿಯಲ್ಲಿ ಗುಳಬಾಳ ಗ್ರಾಮದ ಹಲವಾರು ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ಪಕ್ಷವನ್ನು ತೊರೆದು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಎಲ್ಲರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕರು, ನಿಮ್ಮ ಎಲ್ಲಾ ಕಷ್ಟಗಳಿಗೆ ಹಗಲಿರಳು ನಿಮ್ಮ ಜೊತೆ ಇದ್ದು ಪರಿಹರಿಸುವ ಪ್ರಯತ್ನ ಮಾಡುವೆ ಹಾಗೂ ಪ್ರಸ್ತುತ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದು ಹೇಳಿದರು ಮತ್ತು ತಾಲ್ಲೂಕಿನ ಹಿರಿಯ ಕಿರಿಯ ಮುಖಂಡರುಗಳು ಪಕ್ಷದ ಕಾರ್ಯಕರ್ತರು ಒಗ್ಗೂಡಿ ಅವಿರತವಾಗಿ ಶ್ರಮಿಸಬೇಕೆಂದು ಕರೆ ನೀಡಿದರು.
ನಂತರ ನಿಂಗಣ್ಣ (ಲೀಡರ್) ಕೋಳಿಹಾಳ ಇವರ ನೇತೃತ್ವದಲ್ಲಿ ಮಲ್ಲನಗೌಡ ಸಾಸನೂರ, ಸಾಹೇಬಗೌಡ ಕೋಳಿಹಾಳ, ಗೋಪಾಲ ಗೌಡಗೇರಿ, ಬಸನಗೌಡ ಮಾರಲಬಾವಿ, ಪ್ರಕಾಶ ಮಾರಲಬಾವಿ, ಪರಮಣ್ಣ ಹುಣಸಗಿ, ರಾಜು ಧನ್ನೂರ, ಶರಣಬಸವ ದೊಡ್ಡಮನಿ, ರಂಗಪ್ಪ ಕಲ್ಯಾಣಿ, ನಾಗೇಶ ದೊಡ್ಡಮನಿ, ರಾಮಲಿಂಗಪ್ಪ ಬುದಿಹಾಳ, ಮಲ್ಲಣ್ಣ ದೊಡ್ಡಮನಿ, ತಿರುಪತಿ ಸುರಪುರ, ರಾಮಲಿಂಗ ಕಕ್ಕೇರಿ, ನಿಂಗಣ್ಣ ಬನ್ನೇಟ್ಟಿ, ರಮೇಶ ದೊಡ್ಡಮನಿ, ತಿಮ್ಮಣ್ಣ ಹುಣಸಗಿ, ವಿರೇಶ ಮಾದರ ಹಾಗೂ ಇನ್ನಿತರರು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ಈ ಸಂದರ್ಭದಲ್ಲಿ ಅನೇಕ ಜನ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…