ಸುರಪುರ: ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲಾ ರೌಡಿ ಶೀಟರ್‌ಗಳಿಗೆ ಪೊಲೀಸ್ ಠಾಣೆ ಆವರಣದಲ್ಲಿ ಪರೆಡ್ ನಡೆಸಲಾಯಿತು.
ಈ ಸಂದರ್ಭದಲ್ಲಿ ಎಲ್ಲಾ ರೌಡಿ ಶೀಟರ್‌ಗಳ ಕುರಿತು ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠ ರುಶಿಕೇಶ ಭಗವಾನ್ ಸೋನೆವಾಣೆ ಮಾತನಾಡಿ,ಮುಂಬರುವ ಚುನಾವನೆಯಲ್ಲಿ ಯಾರುಕೂಡ ಬಾಲ ಬಿಚ್ಚುವಂತಿಲ್ಲ,ನಿಮ್ಮ ನಿಮ್ಮ ಕೆಲಸ ಕಾರ್ಯಗಳನ್ನು ಮಾಡಿಕೊಂಡಿರಿ,ಅದು ಬಿಟ್ಟು ಏನಾದರು ಅಹಿತಕರ ಘಟನೆಗಳಿಗೆ ಕಾರಣರಾದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
ಯಾವುದೇ ಗ್ರಾಮದಲ್ಲಿ ತಮ್ಮಿಂದ ಏನಾದರು ಸಮಸ್ಯೆ ಉಂಟಾಗಿದೆ ಎಂದು ಗೊತ್ತಾದಲ್ಲಿ ತಮ್ಮನ್ನು ಬಂಧಿಸಿ ಜಯಲಿಗಟ್ಟಲಾಗುವುದು ಅಲ್ಲದೆ ಚುನಾವಣೆ ಸಂದರ್ಭದಲ್ಲಿ ಏನಾದರು ಅಹಿತಕರ ಘಟನೆಗಳು ನಡೆದರೆ ತಮ್ಮನ್ನು ಹೊಣೆಗಾರರನ್ನಾಗಿ ಮಾಡಿ ಗೂಂಡಾ ಕಾಯ್ದೆಯಡಿ ಗಡಿಪಾರು ಮಾಡಲಾಗುವುದು ಎಂದು ಎಚ್ಚರಿಸಿದರು.
ಚುನಾವಣೆ ಸಂದರ್ಭದಲ್ಲಿ ಎಲ್ಲಿಯೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ತಾವು ಸುಮ್ಮನೆ ಇರಬೇಕು,ಚುನಾವಣೆಗೆ ನಿಂತವರ ಮೇಲೆ ಏನಾದರು ತೊಂದರೆ ಮಾಡುವುದಾಗಲಿ ಅಥವಾ ಇನ್ಯಾರದೊ ಪರವಾಗಿ ಪ್ರಚಾರದಲ್ಲಿ ತೊಡಗಿ ಮತ್ತೊಬ್ಬರಿಗೆ ತೊಂದರೆ ಮಾಡಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಂದಲ್ಲಿ ತಾವು ಕಠಿಣ ಕ್ರಮಕ್ಕೆ ಗುರಿಯಾಗಲಿದ್ದೀರಿ ಎಂದು ಖಡಕ್ ಎಚ್ಚರಿಕೆ ನೀಡಿದರು.
ಈ ಒಂದು ಪರೆಡಲ್ಲಿ ತಾಲೂಕಿನ ವಿವಿಧ ಗ್ರಾಮಗಳ ಒಟ್ಟು ೯೦ ಜನ ರೌಡಿ ಶೀಟರ್‌ಗಳು ಹಾಜರಿದ್ದರು.ಈ ಸಂದರ್ಭದಲ್ಲಿ ಸುರಪುರ ಉಪ ವಿಭಾಗದ ಉಪ ಅಧೀಕ್ಷಕರಾದ ವೆಂಕಟೇಶ ಹುಗಿಬಂಡಿ ಪೊಲೀಸ್ ಇನ್ಸ್ಪೇಕ್ಟರ್ ಎಸ್.ಎಮ್.ಪಾಟೀಲ್,ಪಿಎಸ್‌ಐ ಚಂದ್ರಶೇಖರ ನಾರಾಯಣಪುರ ಸೇರಿದಂತೆ ಎಲ್ಲಾ ಪೊಲೀಸ್ ಪೇದೆಗಳಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…