ಎಸ್ಸಿ ಎಸ್ಟಿ ವಿದ್ಯಾರ್ಥಿಗಳ ಬಾಕಿ ವೇತನ ಬಿಡುಗಡೆ SFI ಒತ್ತಾಯ

0
52

ರಾಯಚೂರು : ಎಸ್ಸಿ ಎಸ್ಟಿ  ವಿದ್ಯಾರ್ಥಿಗಳ ಬಾಕಿ ಇರುವ ವೇತನ ಬಿಡುಗಡೆಗೆ ಒತ್ತಾಯಿಸಿ ಇಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ಎಸ್.ಎಫ್.ಐ ಸಂಘಟನೆ ಕಾರ್ಯಕರ್ತರು ಮನವಿ ಸಲ್ಲಿಸಿ ಅಗ್ರಹಿಸಿದ್ದಾರೆ.

ಕಳೆದ ವರ್ಷದಿಂದ ಬಹುತೇಕ ಜಿಲ್ಲೆಯ  SC ST ವಿದ್ಯಾರ್ಥಿಗಳಿಗೆ ಬಾಕಿ ಇರುವ ವೇತನ ನೀಡಲು  ಪದವಿ, ಸ್ನಾತಕೋತ್ತರ, ವೃತ್ತಿಪರ ಸೇರಿ ಇತರೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳ ಬಹುತೇಕ ವಿದ್ಯಾರ್ಥಿ ವೇತನ ಇಲ್ಲಿಯವರೆಗೂ ಮಂಜೂರಾಗಿಲ್ಲ, ಕೆಲವು ವಿದ್ಯಾರ್ಥಿಗಳಿಗೆ ಮಾತ್ರವೆ ಬಂದಿದೆ. ಇನ್ನೂ ನೂರಾರು ವಿದ್ಯಾರ್ಥಿಗಳಿಗೆ ಬರುವುದು ಬಾಕಿ ಇದೆ‌. ಕೊರೋನಾ ಸಂಕಷ್ಟದ ದಿನಗಳಲ್ಲಿ ಪಾಲಕ ಮತ್ತು ಪೋಷಕರಿಗೆ ಆದಾಯವಿಲ್ಲ ಹಾಗಾಗಿ ವಿದ್ಯಾರ್ಥಿಗಳಿಗೆ ಮುಂದಿನ ತರಗತಿ, ಹೆಚ್ಚಿನ ವಿದ್ಯಾಭ್ಯಾಸಕ್ಕೆ ಹೋಗಲು ಹಣಕಾಸಿನ ತೊಂದರೆ ಉಂಟಾಗುತ್ತಿದೆ. ಬರುವ ವಿದ್ಯಾರ್ಥಿ ವೇತನವು ವಿಳಂಬವಾದ ಕಾರಣ ವಿದ್ಯಾರ್ಥಿಗಳು ಮತ್ತಷ್ಟು ಸಂಕಷ್ಟಕ್ಕೆ ಸಿಲುಕ ಶಿಕ್ಷಣ ವನ್ನು ಮೊಟಕು ಮೊಟಕುಗೊಳಿಸುವ ಹಂತಕ್ಕೆ ತಲುಪಿದ್ದಾರೆ ಎಂದು ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಲಿಂಗರಾಜ ಕಂದಗಲ್ ಮನವಿ ಮೂಲಕ ತಿಳಿಸಿದ್ದಾರೆ.

Contact Your\'s Advertisement; 9902492681

ಕೂಡಲೇ ಬಾಕಿ ಎಲ್ಲಾ ವಿದ್ಯಾರ್ಥಿ ವೇತನ ಮಂಜೂರು ಮಾಡಬೇಕು ಹಾಗೂ ತರಗತಿಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಇಲಾಖೆ ವ್ಯಾಪ್ತಿಗೆ ಬರುವ ಎಲ್ಲಾ ಹಾಸ್ಟೆಲ್ ಹಂತ ಹಂತವಾಗಿ ಆರಂಭಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಅನುಕೂಲ ಒದಗಿಸಿ ಇತರೆ ಶೈಕ್ಷಣಿಕ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಶನ್ SFI ಜಿಲ್ಲಾ ಸಮಿತಿಯು ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಮುಖಂಡ ಬಸವರಾಜ ದೀನ ಸಮುದ್ರ ಸೇರಿ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here