ಬಿಬಿಎಂಪಿ ಶಾಲೆಗಳ ಸ್ಥಿತಿ ಗತಿ ಅಧ್ಯಯನಕ್ಕೆ ಆಮ್ ಆದ್ಮಿ ಪಕ್ಷದಿಂದ ಸಮಿತಿ ರಚನೆ

ಬೆಂಗಳೂರು: ಇಡೀ ಶಿಕ್ಷಣ ವ್ಯವಸ್ಥೆಯನ್ನು ಹಾಳುಗೆಡವಿ, ಶಾಲೆಗಳನ್ನು ಭೂತ ಬಂಗಲೆಗಳಾಗಿ ಪರಿವರ್ತಿಸಿರುವ ಸರ್ಕಾರ ಹಾಗೂ ಬಿಬಿಎಂಪಿ ಕಾರ್ಯವೈಖರಿಯನ್ನು ಬಯಲು ಮಾಡಲು ಆಮ್ ಆದ್ಮಿ ಪಕ್ಷದಿಂದ ಸಮಿತಿ ರಚನೆ ಮಾಡಲಾಗಿದೆ, ಈ ಸಮಿತಿಯು ಎಲ್ಲಾ ಶಾಲೆಗಳ ಸ್ಥಿತಿಗತಿಗಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲಿದೆ ಎಂದು ಪಕ್ಷದ ಮುಖ್ಯ ವಕ್ತಾರ ಶರತ್ ಖಾದ್ರಿ ಮಾಹಿತಿ ನೀಡಿದರು.

ಗುರುವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ನಗರ ಯೋಜನಾ ತಜ್ಞ ಅಶ್ವಿನ್ ಮಹೇಶ್ ಅವರ ಮಾರ್ಗದರ್ಶನದಲ್ಲಿ, ಮುಖ್ಯ ವಕ್ತಾರ ಶರತ್ ಖಾದ್ರಿ ಅವರ ನೇತೃತ್ವದಲ್ಲಿ ಸಮಿತಿ ರಚಿಸಿ, ಬಿಬಿಎಂಪಿ ವ್ಯಾಪ್ತಿಯಲ್ಲಿ 91 ಶಿಶುವಿಹಾರ, 15 ಪ್ರಾಥಮಿಕ ಶಾಲೆಗಳು, 32 ಪ್ರೌಡ ಶಾಲೆಗಳು, 4 ಪದವಿ, 2 ಸ್ನಾತಕೋತ್ತರ ಪದವಿ ಸೇರಿ ಒಟ್ಟು 159 ಶಿಕ್ಷಣ ಸಂಸ್ಥೆಗಳು ಇವೆ. ಇವುಗಳನ್ನು ವಿಭಾಗವಾರು ಅಧ್ಯಯನಕ್ಕೆ ಒಳಪಡಿಸಲಾಗುವುದು ಎಂದು ಹೇಳಿದರು.

ಆಮ್ ಆದ್ಮಿ ಪಕ್ಷದ ನಿಯೋಗ ಇಂತಹ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿನ ಮೂಲ ಸೌಕರ್ಯ, ಕಲಿಕಾ ವಾತಾವರಣ, ವಿದ್ಯಾರ್ಥಿಗಳ ಕಲಿಕಾ ಮಟ್ಟ ಹೇಗಿದೆ ಹಾಗೂ ಶಿಕ್ಷಕರ ಭೋದನಾ ಸಾಮರ್ಥ್ಯದ ಬಗ್ಗೆ ಸಮೀಕ್ಷೆ ನಡೆಸಲಿದೆ. ಈ ಶಾಲೆಗಳ ಅಭಿವೃದ್ಧಿಗೆ ಕಳೆದ 10 ವರ್ಷಗಳಲ್ಲಿ ಖರ್ಚು ಮಾಡಿರುವ ಹಣ, ಅನುದಾನ, ದಾನಿಗಳ ನೆರವು ಸೇರಿದಂತೆ ಯಾವ, ಯಾವ ಮೂಲದಿಂದ ಹಣಕಾಸಿನ ಸಹಾಯ ದೊರೆತಿದೆ ಎನ್ನುವುದನ್ನು ಸಹ ಅಧ್ಯಯನ ಮಾಡಲಾಗುವುದು. ಇದೆಲ್ಲದಕ್ಕಿಂತ ಮುಖ್ಯವಾಗಿ ಬಿಬಿಎಂಪಿ ಶಾಲೆಗಳಿಗೆ ಬರುವ ಮಕ್ಕಳ ಮನೆಗಳಿಗೆ ಭೇಟಿ ನೀಡಿ ಪೋಷಕರ ಹಾಗೂ ಮಕ್ಕಳಿಗೆ ಶಾಲೆಯ ಸ್ಥಿತಿಗತಿಗಳ ಬಗ್ಗೆ ಪ್ರಶ್ನೋತ್ತರಗಳನ್ನು ಕೇಳಿ ಪಡೆಯಲಾಗುವುದು ಹಾಗೂ ಶಿಕ್ಷಕರ ಪೋಷಕರ ನಡುವಿನ ಬಾಂಧವ್ಯ, ಕಳೆದ ಹತ್ತು ವರ್ಷಗಳಲ್ಲಿ ಶಾಲೆಯ ಫಲಿತಾಂಶ, ಹಾಜರಾತಿ, ನೂತನ ಕಲಿಕಾ ವಿಧಾನಗಳ ಅಳವಡಿಕೆ ಮಾಡಲಾಗಿದೆಯೇ, ಗ್ರಂಥಾಲಯ, ಆಟದ ಮೈದಾನ, ಪಠ್ಯೇತರ ಚಟುವಟಿಕೆಗಳು, ಕಲಿಕಾ ಸಾಧನಗಳು, ಲ್ಯಾಬ್, ಕಂಪ್ಯೂಟರ್‌ ಶಿಕ್ಷಣ, ಇತರೇ ಕೌಶಲಗಳಿಗೆ ಹೇಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎನ್ನುವುದನ್ನು ಈ ಸಮಿತಿ ಅಧ್ಯಯನ ನಡೆಸಲಿದೆ ಎಂದರು.

ಯಾರ ಒತ್ತಡಕ್ಕೆ ಒಳಗಾಗಿ ಅತ್ಯಂತ ಮೂಲಭೂತ ಅವಶ್ಯಕತೆಯಾದ ಶಿಕ್ಷಣ ವ್ಯವಸ್ಥೆಯನ್ನು ಹಾಳುಗೆಡವಿ ಜನ ಸಾಮಾನ್ಯರಿಗೆ ಸುಲಭವಾಗಿ ಎಟಕುವಂತಹ ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡಲಾಗಿದೆ ಎನ್ನುವುದೇ ನಮ್ಮ ಮುಂದಿರುವ ಪ್ರಶ್ನೆ. ಅತ್ಯುತ್ತಮವಾಗಿದ್ದ ನಮ್ಮ ಕರ್ನಾಟಕದ ಶಿಕ್ಷಣ ವ್ಯವಸ್ಥೆ ರಾಜಧಾನಿಯಲ್ಲೇ ಕೊಳೆಯುತ್ತಾ ಇದೆ. ಬೆಂಗಳೂರಿನ ಅನೇಕ ಶಾಲೆಗಳು ಹಂದಿ ಗೂಡಿಗಿಂತ ಕಡೆಯಾಗಿವೆ. ಕೆಲವು ಶಾಲೆಗಳನ್ನ ಖಾಸಗಿಯವರಿಗೆ ದತ್ತು ಕೊಟ್ಟು ಸರ್ಕಾರ ಹಾಗೂ ಬಿಬಿಎಂಪಿ ತನ್ನ ಜವಾಬ್ದಾರಿಯಿಂದ ನುಣುಚಿಕೊಂಡಿದೆ. ಸರ್ಕಾರಿ ಶಾಲೆಗಳ ಜಾಗಗಳನ್ನು ಕಬಳಿಸಲಾಗಿದೆ, ಬೇಕಂತಲೇ ಹಾಳು ಗೆಡವಲಾಗಿದೆ ಹೀಗೆ ಸಮಸ್ಯೆಗಳ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ ಎಂದು ಕಿಡಿ ಕಾರಿದರು.

ಪತ್ರಿಕಾ ಗೋಷ್ಠಿಯಲ್ಲಿ ಆಮ್ ಆದ್ಮಿ ಪಕ್ಷ ಬೆಂಗಳೂರು ಯುವ ಘಟಕದ ಅಧ್ಯಕ್ಷ ಚಿನ್ಮಯ್ ನಾಡಿಗ್ ಉಪಸ್ಥಿತರಿದ್ದರು.

emedialine

Recent Posts

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

2 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

3 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

5 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

16 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

18 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

19 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420