ಕಲಬುರಗಿ: ವಿವಿಧೆಡೆ ಅಬಕಾರಿ ದಾಳಿ ನಡೆಸಿ ಅಕ್ರಮ ಮದ್ಯ ಜಪ್ತಿ

0
51

ಕಲಬುರಗಿ: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಅಕ್ರಮ ಮದ್ಯ ಮಾರಾಟ ಹಾಗೂ ಸಾಗಾಟವನ್ನು ನಿಷೇಧಿಸಲಾಗಿದೆ. ಅಬಕಾರಿ ಅಧಿಕಾರಿಗಳು ಅಫಜಲಪುರ ತಾಲೂಕಿನಲ್ಲಿ ವಿವಿಧೆಡೆ ದಾಳಿ ನಡೆಸಿ ಒಟ್ಟು 2.5 ಲಕ್ಷ ರೂ.ಗಳ ಮೌಲ್ಯದ ಮದ್ಯ ಹಾಗೂ ವಾಹನಗಳನ್ನು ಜಪ್ತಿಪಡಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಕಲಬುರಗಿ ವಿಭಾಗದ ಅಬಕಾರಿ ಉಪ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಫಜಲಪುರ ತಾಲೂಕಿನ ಚೌಡಾಪುರ-ಇಂಗಳಗಿ ರಸ್ತೆಯಲ್ಲಿ ವಾಹನಗಳನ್ನು ಪರಿಶೀಲಿಸುವ ಸಂದರ್ಭದಲ್ಲಿ ಮಾರುತಿ ಶಿಫ್ಟ್ ಕಾರ್‍ನಲ್ಲಿ ಅಕ್ರಮವಾಗಿ ಮದ್ಯವನ್ನು ಸಾಗಾಟ ಮಾಡುತ್ತಿರುವುದನ್ನು ಪತ್ತೆ ಮಾಡಿ ವಾಹನ ಹಾಗೂ ಅಕ್ರಮ ಮದ್ಯವನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಈ ಕುರಿತು ಅಬಕಾರಿ ಉಪ ಅಧೀಕ್ಷಕ ಮಹ್ಮದ ಇಸ್ಮಾಯಿಲ್ ಇನಾಮದಾರ್ ಅವರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Contact Your\'s Advertisement; 9902492681

ಅದೇ ರೀತಿ ಅಫಜಲಪುರ ತಾಲೂಕಿನ ಉಡಚಣ-ಹಟ್ಟಿ ಕ್ರಾಸ್ ಬಳಿಯಲ್ಲಿ ವಾಹನಗಳನ್ನು ಪರಿಶೀಲಿಸುವ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ ಪತ್ತೆಯಾದ 17-280 ಲೀಟರ್ ಸ್ವದೇಶಿ ಮದ್ಯವನ್ನು ಜಪ್ತಿಪಡಿಸಲಾಗಿದೆ. ಈ ಕುರಿತು ಆಳಂದ ವಲಯದ ಅಬಕಾರಿ ನಿರೀಕ್ಷಕ ಶ್ರೀಶೈಲ ಅವಜಿ ಅವರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಈ ದಾಳಿ ಸಂದರ್ಭದಲ್ಲಿ ಅಬಕಾರಿ ನಿರೀಕ್ಷಕರಾದ ವಿಠ್ಠಲರಾವ ಎಂ.ವಾಲಿ, ಧನರಾಜ, ಅಬಕಾರಿ ಉಪ ನಿರೀಕ್ಷಕ ಸಂತೋಷ ಬಿರಾದಾರ, ಸಿಬ್ಬಂದಿ ಬಸವರಾಜ ಮಾಲಗತ್ತಿ, ರವಿಕುಮಾರ್, ಕಾಶಿನಾಥ್ ಹಾಗೂ ಮಹ್ಮದ ಸಲೀಮೊದ್ದೀನ ಪಾಲ್ಗೊಂಡಿದ್ದರು.

ಕಲಬುರಗಿ ವಿಭಾಗದ (ಜಾರಿ ಮತ್ತು ತನಿಖೆ) ಅಬಕಾರಿ ಜಂಟಿ ಆಯುಕ್ತ ಎಸ್.ಕೆ. ಕುಮಾರ ಹಾಗೂ ಅಬಕಾರಿ ಉಪ ಆಯುಕ್ತರಾದ ಶಶಿಕಲಾ ಎಸ್. ಒಡೆಯರ್ ಅವರ ಆದೇಶ ಹಾಗೂ ಅಬಕಾರಿ ಉಪ ಅಧೀಕ್ಷಕ ಮಹ್ಮದ್ ಇಸ್ಮಾಯಿಲ್ ಇನಾಮದಾರ್ ಅವರ ನೇತೃತ್ವದಲ್ಲಿ ಈ ಅಬಕಾರಿ ದಾಳಿಯನ್ನು ಕೈಗೊಳ್ಳಲಾಗಿದೆ. ಈ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಸನ್ನದದಾರರೊಂದಿಗೆ ಸಭೆ ನಡೆಸಿ ಅಕ್ರಮವಾಗಿ ಮದ್ಯ ಸಾಗಾಟ ಮಾಡಬಾರದೆಂದು ತಿಳಿಸಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here