ಬಿಸಿ ಬಿಸಿ ಸುದ್ದಿ

ರೈತರ ಪ್ರತಿಭಟನೆ ಸರ್ಕಾರದ ಮೇಲಿನ ನಂಬಿಕೆಯ ಕೊರತೆಗೆ: ಡಾ. ಅಜಯ್ ಸಿಂಗ್

ಕಲಬುರಗಿ: ಕೇಂದ್ರದ ಕೃಷಿ ಕಾಯಿದೆ ವಿರೋಧಿಸಿ ಹಾಗೂ ರಾಜ್ಯದ ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳವರು ನಡೆಸುತ್ತಿರುವ ಪ್ರತಿಭಟನೆ ರಾಜ್ಯ, ಕೇಂದ್ರದ ಉಭಯ ಸರ್ಕಾರಗಳ ಮೇಲಿನ ರೈತರ ನಂಬಿಕೆಯ ಕೊರತೆಗೆ ಕನ್ನಡಿ ಎಂದು ವಿಧಾನ ಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ. ಅಜಯ್ ಸಿಂಗ್ ಹೇಳಿದ್ದಾರೆ.

ಈ ಕುರಿತಂತೆ ಹೇಳಿಕೆ ನೀಡಿರುವ ಅವರು ಸರ್ಕಾರದ ಧೋರಣೆ, ಅದರ ನಡೆಯ ಪ್ರತಿಯಾಗಿ ರೈತರಿಗೆ ಇರುವ ಸಂಕೆಗಳೇ (doubts)  ಪ್ರತಿಭಟನೆ ರೂಪ ತಾಳುತ್ತಿವೆ. ಸರ್ಕಾರ ತಾನು ಮಾಡಲು ಹೊರಟಿರುವ, ಜಾರಿಗೆ ತರಲು ಮುಂದಾಗಿರುವ ನೀತಿ, ಕಾಯಿದೆಗಳ ಬಗ್ಗೆ ರೈತರಿಗೆ, ರೈತ ಸಂಘಟನೆಗಳವರಿಗೆ ವಿಶ್ವಾಸಕ್ಕೆ ತೆಗೆದುಕೊಂಡು ಚರ್ಚಿಸಿಲ್ಲ, ಅದರ ಫಲವೆ ಇಂದಿನ ಸರಣಿ ಪ್ರತಿಭಟನೆ ಎಂದು ಡಾ. ಅಜಯ್ ಸಿಂಗ್ ಹೇಳಿದ್ದಾರೆ.

ರೈತರ ತಾಳ್ಮೆ ಪರೀಕ್ಷೆಗೆ ಇದು ಕಾಲವಲ್ಲ, ರೈತರ ಬೇಡಿಕೆಗಳ ಬಗ್ಗೆ ಕೇಂದ್ರ ಸಮಯಕ್ಕೆ ತಕ್ಕಂತೆ ನಿರ್ಧಾರಗಳನ್ನು ಕೈಗೊಳ್ಳಲಿ, ಇಲ್ಲದೆ ಹೋದಲ್ಲಿ ರೈತರ ಹೋರಾಟ ದೇಶವ್ಯಾಪಿ ಆಗೋದರಲ್ಲಿ ಸಂಶಯವೇ ಇಲ್ಲ. ಕೇಂದ್ರ, ರಾಜ್ಯ ಸರಕಾರಗಳು ಇನ್ನಾದರೂ ರೈತರ ಬೇಡಿಕೆಗಳ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಿ, ರೈತರಿದ್ದರೇನೇ ದೇಶ ಇರಲಿದೆ. ರೈತರೇ ದೇಶದ ಬೆನ್ನೆಲಬು, ರೈತ ಸಮುದಾಯದ ಬಲವೃದ್ಧಿಯೇ ದೇಶದ ಬಲವೃದ್ಧಿ, ಇನ್ನಾದರೂ ತಡಮಾಡದೆ ರೈತರ ಜೊತೆ ಚರ್ಚಿಸಿ ಅವರ ಬೇಡಿಕೆಗೆ ಸರ್ಕಾರಗಳು ಸ್ಪಂದಿಸಲಿ ಎಂದು ಎಂದು ಡಾ. ಅಜಯ್ ಸಿಂಗ್ ಆಗ್ರಹಿಸಿದ್ದಾರೆ.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

5 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

5 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

7 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

7 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

8 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

8 hours ago