ಕೆಪಿಎಸ್ಸಿ ನೇಮಕಾತಿ ವಿಚಾರ: 124 ಅಭ್ಯರ್ಥಿಗಳ ನೇಮಕಾತಿಗೆ ಶಾಸಕ ಖರ್ಗೆ ಇಲಾಖೆಗೆ ಪತ್ರ

0
67

ಕಲಬುರಗಿ: ನವೆಂಬರ್ 13, 2019 ರಂದು ಕರ್ನಾಟಕ ಲೋಕಸೇವಾ ಆಯೋಗ ಹೊರಡಿಸಿದ ಅಭ್ಯರ್ಥಿಗಳ ಆಯ್ಕೆಪಟ್ಟಿಯಲ್ಲಿ ಹೆಸರಿರುವ ವಿವಿಧ ಇಲಾಖೆಗಳ 661 ಅಭ್ಯರ್ಥಿಗಳ ಪೈಕಿ ನೇಮಕಾತಿ ಆದೇಶ ಕೊಡದ ಸರ್ಕಾರದ ಬೇರೆ ಬೇರೆ ಇಲಾಖೆಗಳ 124 ಅಭ್ಯರ್ಥಿಗಳಿಗೆ ಈ ಕೂಡಲೇ ನೇಮಕಾತಿ ಆದೇಶ ಕೊಡುವಂತೆ ಕೆಪಿಸಿಸಿ ವಕ್ತಾರರು ಹಾಗೂ ಶಾಸಕರಾದ ಪ್ರಿಯಾಂಕ್ ಖರ್ಗೆ ಅವರು ಸರಕಾರವನ್ನು ಆಗ್ರಹಿಸಿದ್ದಾರೆ.

ಈ ಕುರಿತು ಸಿಎಂ ಯಡಿಯೂರಪ್ಪ ನವರಿಗೆ ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಮಾನ್ಯ ವಕ್ತಾರರು ಹಾಗೂ ಶಾಸಕರಾದ ಶ್ರೀ ಪ್ರಿಯಾಂಕ್ ಖರ್ಗೆ ಅವರು, ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿ ( ಅಧಿಸೂಚನೆ ಸಂಖ್ಯೆ : ಆರ್ (3) 45/2016-17) ನಡೆಸಿದ ಶೀಘ್ರ ಲಿಪಿಗಾರರು ಹಾಗೂ ಬೆರಳಚ್ಚುಗಾರರ ಹುದ್ದೆ ನೇಮಕಾತಿಯಲ್ಲಿ ಉತ್ತೀರ್ಣರಾದ 661 ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ದಿನಾಂಕ 13-11-2019 ರಂದು ಪ್ರಕಟಿಸಲಾಗಿತ್ತು.

Contact Your\'s Advertisement; 9902492681

ಆ ನಂತರ ಅಭ್ಯರ್ಥಿಗಳ ಸಿಂಧುತ್ವ ಹಾಗೂ 371   ( J )  ಹಾಗೂ ಇತರೆ ದಾಖಲಾತಿಗಳನ್ನು ಪರಿಶೀಲಿಸಿ ನೇಮಕಾತಿ ಆದೇಶ ನೀಡಲಾಗಿ 537 ಅಭ್ಯರ್ಥಿಗಳು ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಆದರೆ, ಸಾರಿಗೆ, ವಿಕಲಚೇತನ, ಸಹಕಾರ, ಪಶುಸಂಗೋಪನೆ, ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ, ರೇಷ್ಮೆ ಹಾಗೂ ತಾಂತ್ರಿಕ‌ ಶಿಕ್ಷಣ ಇಲಾಖೆಗಳು ಉಳಿದ 124 ಅಭ್ಯರ್ಥಿಗಳಿಗೆ ಇಲ್ಲಿಯವರೆಗೂ ನೇಮಕಾತಿ ಆದೇಶ ನೀಡಿರುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ

ಮುಂದುವರೆದು ಹೇಳಿರುವ ಅವರು, ನೇಮಕಾತಿ ಪ್ರಕ್ರಿಯೆ ನಡೆದು 4 ವರ್ಷ ಕಳೆದಿದ್ದು ಯಾವುದೇ ಉದ್ಯೋಗ ಇಲ್ಲದ ಈ 124 ಅಭ್ಯರ್ಥಿಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಬಡತನದ ಕೌಟುಂಬಿಕ‌ ಹಿನ್ನೆಲೆಯಿಂದ ಬಂದಿರುವ ಅಭ್ಯರ್ಥಿಗಳು ಕಷ್ಟಪಟ್ಟು ಅಭ್ಯಾಸ ಮಾಡಿ ಆಯೋಗ ನಡೆಸುವ ಶೀಘ್ರ ಲಿಪಿಗಾರರು ಹಾಗೂ ಬೆರಳಚ್ಚುಗಾರರರ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಆದರೆ, ನೇಮಕಾತಿ ಆದೇಶದ ವಿಳಂಬದಿಂದಾಗಿ ಕೈಗೆ ಬಂದ ತುತ್ತು ಬಾಯಿಗೆ ಬರದ ಸ್ಥಿತಿ ನಿರ್ಮಾಣವಾಗಿದೆ‌ ಎಂದು ಹೇಳಿದ್ದಾರೆ. ಹಾಗಾಗಿ ಸರಕಾರ ಈ ಕೂಡಲೇ ಆ ಎಲ್ಲ 124 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ದೊರಕಿಸಿಕೊಡುವ ಮೂಲಕ ಬಡಕುಟುಂಬದ ಅಭ್ಯರ್ಥಿಗಳ ಬಾಳಿಗೆ ಬೆಳಕಾಗಬೇಕೆಂದು ಅವರು ಆಗ್ರಹಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here