ಸುರಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಯಾದಗಿರಿಯಲ್ಲಿ ಉತ್ತಮ ಉಪನ್ಯಾಸಕ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ನೇತೃತ್ವ ವಹಿಸಿದ್ದರು ಹಾಗು ನಿವೃತ್ತ ಉಪ ನಿರ್ದೇಶಕರಾದ ಗುರುಲಿಂಗಪ್ಪ ಮುಣಜಗಿಯವರ ಉಪಸ್ಥಿತಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅತ್ಯೂತ್ತಮ ಪ್ರಾಂಶುಪಾಲರು ಮತ್ತು ಉಪನ್ಯಾಸಕರನ್ನು ಗುರುತಿಸಿ ಉತ್ತಮ ಉಪನ್ಯಾಸಕ ಪ್ರಶಸ್ತಿಯನ್ನು ನೀಡಲಾಯಿತು.
ಪ್ರತಿ ವರ್ಷ ನೀಡುವ ಈ ಪ್ರಶಸ್ತಿಗೆ ೨೦೧೯-೨೦ನೇ ಸಾಲಿನ ಉತ್ತಮ ಉಪನ್ಯಾಸಕ ಪ್ರಶಸ್ತಿಗೆ ಸುರಪುರ ನಗರದ ರಂಗಂಪೇಟೆಯ ಡಾ: ಬಿ.ಆರ್.ಅಂಬೇಡ್ಕರ್ ವಿದ್ಯಾವರ್ಧಕ ಸಂಸ್ಥೆಯ ಉಪನ್ಯಾಸಕರಾದ ಶರಣಗೌಡ ಪಾಟೀಲ್ ಅವರಿಗೆ ಉತ್ತಮ ಉಪನ್ಯಾಸಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಆಯ್ಕೆ ಸಮಿತಿಯ ಸದಸ್ಯರಾದ ಸಿ.ಕೆ.ಕುಳಗೇರಿ ಮಹಾಂತೇಶ ಕಲಾಲ ಹಾಗು ಗಣಪತಿ ಪೂಜಾರಿ ವೇದಿಕೆ ಮೇಲಿದ್ದರು.
ಶರಣಗೌಡ ಪಾಟೀಲ್ ಅವರಿಗೆ ಉತ್ತಮ ಉಪನ್ಯಾಸಕ ಪ್ರಶಸ್ತಿ ದೊರೆತಿರುವುದಕ್ಕೆ ಡಾ: ಬಾಬಾ ಸಾಹೇಬ್ ಅಂಬೇಡ್ಕರ ವಿದ್ಯಾ ಸಂಸ್ಥೆಯ ಅಧ್ಯಕ್ಷ ಭೀಮಣ್ಣ ಬಿಲ್ಲವ್ ಮಲ್ಲಿಕಾರ್ಜುನ ಬಿಲ್ಲವ್ ಹಾಗು ಸಂಸ್ಥೆಯ ಶಿಕ್ಷಕ ಬಳಗ ಹಾಗು ಕಸಾಪ ಅಧ್ಯಕ್ಷ ಶ್ರೀನಿವಾಸ ಜಾಲವಾದಿ ಸಾಹಿತಿ ಸಿದ್ದರಾಮ ಹೊನ್ಕಲ್ ಹಾಗು ಎಲ್ಲಾ ಉಪನ್ಯಾಸಕರು ಅಭಿನಂದನೆ ಸಲ್ಲಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…