ಬಿಸಿ ಬಿಸಿ ಸುದ್ದಿ

ಇನ್ಪೋಸಿಸ್‌ ಪ್ರತಿಷ್ಠಾನದಿಂದ ಚಲನಚಿತ್ರ ಪೋಷಕ ಕಲಾವಿದರಿಗೆ ಸೇರಿ ಹಲವರಿಗೆ ನೆರವು

ಬೆಂಗಳೂರು: ಕರೋನಾ ಸೊಂಕಿನಿಂದ ನಲುಗಿಹೋಗಿರುವ ಚಲನಚಿತ್ರ ಪೋಷಕ ಕಲಾವಿದರು ಹಾಗೂ ಕಾರ್ಮಿಕರಿಗೆ ಇನ್ಪೋಸಿಸ್‌ ಪ್ರತಿಷ್ಟಾನ ಆಹಾರ ಕಿಟ್‌ಗಳ ವಿತರಣೆ ಮಾಡುವ ಮೂಲಕ ಕಲಾವಿದರ ನೆರವಿಗೆ ಧಾವಿಸಿದೆ. ಇನ್ಪೋಸಿಸ್‌ ಫೌಂಡೇಷನ್‌ ಅಧ್ಯಕ್ಷೆ ಶ್ರೀಮತಿ ಸುಧಾಮೂರ್ತಿ ಅವರು ಕಷ್ಟದಲ್ಲಿರುವವರಿಗೆ ಮನಮಿಡಿಯುವ ರೀತಿ ಹಾಗೂ ಬಡವರ ಬಗ್ಗೆ ಅವರಿಗಿರುವ ಕಾಳಜಿ ಅನುಕರಣೀಯ ಎಂದು ನಟಿ ಪ್ರೇಮ ಹೇಳಿದರು.

ನಗರದ ಸುಚಿತ್ರಾ ಫಿಲಂ ಸೊಸೈಟಿಯ ಆವರಣದಲ್ಲಿ ಚಲನಚಿತ್ರ ಪೋಷಕ ಕಲಾವಿದರು ಮತ್ತು ಕಾರ್ಮಿಕರುಗಳಿಗೆ ಇನ್ಪೋಸಿಸ್‌ ಫೌಂಡೇಶನ್‌ ವತಿಯಿಂದ ಆಯೋಜಿಸಲಾಗಿದ್ದ ಜೀವನಾವ‍್ಯಕ ವಸ್ತುಗಳ ಕಿಟ್‌ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕಷ್ಟಕ್ಕೆ ಮನಮಿಡಿಯುವ ಹಾಗೂ ಅಗತ್ಯವಿರವವರಿಗೆ ವಿಶೇಷ ಕಾಳಜಿ ತೋರಿಸುವ ಸುಧಾಮೂರ್ತಿ ಅಮ್ಮನವರ ಸಂಸ್ಥೆಯಿಂದ ಕೊಡಲಾಗುತ್ತಿರುವ ಜೀವನಾವ‍್ಯಕ ವಸ್ತುಗಳ ಕಿಟ್‌ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಬಹಳ ಹೆಮ್ಮೆಯ ವಿಷಯವಾಗಿದೆ. ಸಿನಿಮಾ ಕಾರ್ಮಿಕರು ಚಿತ್ರೀಕರಣ ನಿಲುಗಡೆಯಾದ ಪರಿಣಾಮ ಬಹಳಷ್ಟು ತೊಂದರೆಗೀಡಾಗಿದ್ದರು. ಇವರಿಗೆ ದಿನನಿತ್ಯದ ಅಗತ್ಯ ಸಾಮಗ್ರಿಗಳನ್ನು ಒಳಗೊಂಡ ಕಿಟ್‌ ವಿತರಿಸಲಾಗುತ್ತಿದ್ದು, ಅವರ ಕುಟುಂಬ ಪೋಷಣೆಗೆ ಇದು ಅಗತ್ಯವಾಗಿದೆ ಎಂದು ಹೇಳಿದರು.

ಕರ್ನಾಟಕ ಚಲನ ಚಿತ್ರ ಕಾರ್ಮಿಕರ ಒಕ್ಕೂಟದ ಉಪಾಧ್ಯಕ್ಷ ರವಿಶಂಕರ್‌ ಮಾತನಾಡಿ, ನನಗೆ ಅಮ್ಮ ಸುಧಾಮೂರ್ತಿ ಅವರ ಸಂಫರ್ಕ ಇರಲಿಲ್ಲ. ಎರಡನೇ ಬಾರಿ ನಾನು ಮಾಡಿದ ಎಸ್‌ ಎಂ ಎಸ್‌ ನೋಡಿ ಸುಧಾಮೂರ್ತಿ ಅವರೇ ಫೋನ್‌ ಮಾಡಿದ್ದರು. ಎಷ್ಟು ಜನರು ಸಂಕಷ್ಟದಲ್ಲಿದ್ದಾರೆ ಹಾಗೂ ಎಷ್ಟು ಕಿಟ್‌ ಗಳ ಅವಶ್ಯಕತೆ ಇದೆ ಎನ್ನುವುದನ್ನ ಸ್ವತಃ ಅವರೇ ವಿಚಾರಿಸಿಕೊಂಡರು.

ಲಾಕ್‌ಡೌನ್‌ ಸಂಧರ್ಬದಲ್ಲಿ 2 ಸಾವಿರಕ್ಕೂ ಹೆಚ್ಚು ಕಲಾವಿದರಿಗೆ, ಕಾರ್ಮಿಕರಿಗೆ ಪ್ರತಿಷ್ಠಾನದ ವತಿಯಿಂದ ಕಿಟ್‌ ವಿತರಿಸಲಾಗಿತ್ತು. ಆ ವೇಳೆ ಅರ್ಹ ಕಲಾವಿದರಿಗೆ ಸಿಕ್ಕಿಲ್ಲ ಎನ್ನುವ ಮನವಿಯ ಹಿನ್ನಲೆಯಲ್ಲಿ ಇಂದು ಮತ್ತೆ ಒಂದು ಸಾವಿರ ಮಂದಿಗೆ ನೆರವು ನೀಡಲಾಗಿದೆ. ಚಲನಚಿತ್ರ ಕಾರ್ಮಿಕರು ಮತ್ತು ಕಲಾವಿದರು 17 ಸಂಘಟನೆಯ ಸದಸ್ಯರಿಗೆ ನೆರವು ನೀಡುವ ಮೂಲಕ ಕರೋನಾದಿಂದ ಕೆಲಸ ಸಿಗದೆ ಕಂಗಾಲಾಗಿರುವ ಕಲಾವಿದರಿಗೆ ಕಿಟ್‌ ವಿತರಿಸಲಾಗಿದೆ.

ಲಾಕ್‌ ಡೌನ್‌ ಬಳಿಕ ಚಿತ್ರಗಳ ಚಿತ್ರೀಕರಣ ಪ್ರಾರಂಭವಾಗಿದ್ದರೂ ಕೆಲವೇ ಕೆಲವು ಕಲಾವಿದರನ್ನು ಚಿತ್ರೀಕರಣದಲ್ಲಿ ಬಳಸಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ಬಹುತೇಕ ಕಲಾವಿದರು. ಕಾರ್ಮಿಕರು ಕೆಲಸವಿಲ್ಲದೆ ದೈನಂದಿನ ಬದುಕು ಸಾಗಿಸಲು ಪರದಾಡುತ್ತಿದ್ದಾರೆ. ಇಂತವರನ್ನು ಗುರುತಿಸಿ ನೆರವು ನೀಡಲು ಇನ್ಪೋಸಿಸ್‌ ಪ್ರತಿಷ್ಠಾನ ಮುಂದಾಗಿದ್ದು ಬಹಳ ಸಂತಸದ ವಿಷಯ ಎಂದು ಹೇಳಿದರು.

ನಿರ್ಮಾಪಕ ರಮೇಶ್‌ ರೆಡ್ಡಿ, ಹಾಸ್ಯ ಕಲಾವಿದ ಡಿಂಗ್ರಿ ನಾಗರಾಜ್‌ ಸೇರಿದಂತೆ ಕಾರ್ಯಕ್ರಮದಲ್ಲಿ ನೂರಾರು ಪೋಷಕ ಕಲಾವಿದರ ಭಾಗವಹಿಸಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

12 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

14 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

21 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

21 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

22 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago