ಶಹಾಪುರ: ಕುಡಿಯುವ ನೀರಿನ ನಳದ ಪೈಪ್ ಲೈನ್ ಒಡೆದು ನೀರು ಪೋಲಾಗುತ್ತಿರುವ ದೃಶ್ಯ ಶಹಾಪುರ ನಗರದ ವಾರ್ಡ್ ನಂಬರ್ 8 ಚರಬಸವೇಶ್ವರ ಕಾಲೊನಿಯಲ್ಲಿ ಕಂಡು ಬಂತು
ಈ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೆ ನಗರಸಭೆ ಅಧಿಕಾರಿಗಳ ಗಮನಕ್ಕೂ ತಂದರೂ ಪ್ರಯೋಜನೆಯಾಗಿಲ್ಲ ಕಳೆದ 5 ತಿಂಗಳ ಹಿಂದೆ ನಗರಸಭೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡಿ ಭಾವಚಿತ್ರ ತೆಗೆದುಕೊಂಡು ಮತ್ತು ವರದಿಯನ್ನು ಮಾಡಿಕೊಂಡು ಹೋದವರು ಇತ್ತ ಕಡೆ ಗಮನ ಹರಿಸಿಲ್ಲ ಎಂದು ಬಡಾವಣೆಯ ನಿವಾಸಿಗಳು ಆರೋಪಿಸಿದರು.
ಬೇಸಿಗೆಯಲ್ಲಿ ಕೆಲವೊಂದು ಕಡೆ ನೀರಿನ ಅಭಾವ ತೋರಿದೆ ಆದರೆ ಇಲ್ಲಿ ನೀರು ಪೋಲಾಗುತ್ತಿರುವುದನ್ನು ಕಣ್ಣಾರೆ ಕಂಡು ನಗರಸಭೆ ಅಧಿಕಾರಿಗಳು ಕಣ್ಣು ಮುಚ್ಚಿಕೊಂಡು ಕುಳಿತಿದ್ದಾರೆ. ಪೋಲಾಗುತ್ತಿರುವ ನೀರು ರಸ್ತೆಯ ಮೇಲೆ ನಿಂತು ಕೆಸರು ಗದ್ದೆಯಂತಾಗಿ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ ನಿವಾಸಿಗಳು ಕಳವಳ ವ್ಯಕ್ತಪಡಿಸಿದ್ದಾರೆ.
ಕೂಡಲೇ ನಗರಸಭೆಯ ಸಿಬ್ಬಂದಿಗಳು ಇತ್ತ ಕಡೆ ಗಮನ ಹರಿಸಿ ಒಡೆದಿರುವ ಪೈಪ್ ಲೈನನ್ನು ದುರಸ್ತಿ ಮಾಡಿ ಪೋಲಾಗುತ್ತಿರುವ ಜೀವಜಲವನ್ನು ಸಂರಕ್ಷಣೆ ಮಾಡಬೇಕೆಂದು ಕಾಲೋನಿಯ ಪ್ರಗತಿಪರ ಚಿಂತಕರು ಈ ಮೂಲಕ ಎಚ್ಚರಿಕೆ ನೀಡಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…