ಯಾದಗಿರಿ: ಸುರಪುರ ತಾಲುಕಿನ ವಾಗಣಗೇರಾ ಗ್ರಾಮದ ಹನುಮಾನ ದೇವರ ಕಾರ್ತಿಕೋತ್ಸವದ ಅಂಗವಾಗಿ ದೇವರ ಪಲ್ಲಕ್ಕಿಯನ್ನು ತೆಗೆದುಕೊಂಡು ಗಂಗಾ ಸ್ನಾನಕ್ಕೆಂದು ನದಿಗೆ ಹೋದಾಗ,ನದಿಯಲ್ಲಿ ಈಜಲು ಹೋದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.
ತಾಲೂಕಿನ ಸೆಳ್ಳಗಿ ಗ್ರಾಮದ ಬಳಿಯಲ್ಲಿನ ಕೃಷ್ಣಾ ನದಿಗೆ ಹನುಮಾನ ದೇವರ ಪಲ್ಲಕ್ಕಿಯನ್ನು ತೆಗೆದುಕೊಂಡು ಹೋಗಲಾಗಿತ್ತು,ಈ ಸಂದರ್ಭದಲ್ಲಿ ವಾಗಣಗೇರಾ ಗ್ರಾಮದ ಯುವಕ ಮಹಾಂತೇಶ ಕವಡಿಮಟ್ಟಿ ಎಂಬ ೧೯ ವರ್ಷ ಯುವಕ ನದಿಯಲ್ಲಿ ಈಜಲು ಹೋದಾಗ ಸುಳಿಗೆ ಸುಲುಕಿದ ಪರಿಣಾಮವಾಗಿ ನೀರಲ್ಲಿ ಕೊಚ್ಚಿಕೊಂಡು ಹೋಗಿ ಸ್ವಲ್ಪ ದೂರದಲ್ಲಿ ಯುವಕನ ಶವ ಪತ್ತೆಯಾಗಿದೆ.
ಯುವಕನ ಸಾವಿನ ಸುದ್ದಿ ತಿಳಿದು ಗ್ರಾಮದ ಜನರು ಸೆಳ್ಳಗಿ ನದಿಯ ಬಳಿ ಸೇರಿದ್ದು ಯುವಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯಾಗಿದೆ.
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…