ಬಿಸಿ ಬಿಸಿ ಸುದ್ದಿ

ಗ್ರಾಮ ಪಂಚಾಯಿತಿ ಚುನಾಚಣೆ: ಎಡಗೈ ಹೆಬ್ಬೆರೆಳಿಗೆ ಶಾಯಿ ಹಚ್ಚಲಾಗುವುದು

ದಾವಣಗೆರೆ: ಈ ಬಾರಿಯ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮತದಾನ ಮಾಡುವ ಮತದಾರರಿಗೆ ಎಡಗೈ ಹೆಬ್ಬೆರಳಿಗೆ ಶಾಯಿ ಹಚ್ಚಲಾಗುವುದು ಎಂದು ಜಿಲ್ಲಾಧಿಕಾರಿ ಮಹಾತೇಶ ಬೀಳಗಿ ಹೇಳಿದರು.

ಜಿಲ್ಲಾಡಳಿತ ಭವನದಲ್ಲಿ ಸೋಮವಾರದಂದು ನಡೆದ ಗ್ರಾಮಪಂಚಾಯಿತಿ ಚುನಾವಣೆ ಸಿದ್ದತಾ ಸಭೆಯಲ್ಲಿ ಮಾತಾನಾಡಿದ ಅವರು, ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮತದಾನ ಮಾಡುವ ಮತದಾರರಿಗೆ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಎಡಗೈ ಹೆಬ್ಬೆರೆಳಿಗೆ ಶಾಯಿ ಹಾಕಲಾಗುವುದು. ಜಿಲ್ಲಾಡಳಿತ ಎಲ್ಲಾ ಸಿದ್ದತೆ ಮಾಡಿಕೊಂಡಿದ್ದು, ಚುನಾವಣೆ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ತರಬೇತಿ, ಮತಗಟ್ಟೆಗಳ ಮೂಲಭೂತ ಸೌಕರ್ಯ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳ ಗುರುತಿಸುವಿಕೆ, ಸರ್ವಿಸ್ ವೋಟರ್ಸ್ ಪಟ್ಟಿ ತಯಾರಿಕೆ ಸೇರಿದಂತೆ ಎಲ್ಲಾ ಸಿದ್ದತೆಗಳಾಗಿವೆ. ಜಿಲ್ಲೆಯಲ್ಲಿ ಒಟ್ಟಾರೆ 1279 ಮತಗಟ್ಟೆಗಳಿದ್ದು, ಅವುಗಳಲ್ಲಿ 174 ಸೂಕ್ಷ್ಮ 143 ಅತಿಸೂಕ್ಷ್ಮ ಮತ್ತು 962 ಸಾಮಾನ್ಯ ಮತಗಟ್ಟೆಗಳಿವೆ. ಮತದಾರರು ಯಾವುದೇ ಭಯ ಹೆದರಿಕೆ ಅಂಜಿಕೆಗೆ ಒಳಗಾಗದೆ ಮುಕ್ತ, ನ್ಯಾಯ ಸಮ್ಮತ ಮತ್ತು ನಿರ್ಭೀತವಾಗಿ ಮತ ಚಲಾಯಿಸಲು ಅನುವಾಗುವಂತೆ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.

ರಾಜಕೀಯ ಮುಖಂಡರ ಭಾವಚಿತ್ರ ಅಥವಾ ಪಕ್ಷದ ಚಿಹ್ನೆ ನಿಷೇಧ:- ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 7(2)ರಂತೆ ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ಪಕ್ಷದ ಆಧಾರ ರಹಿತವಾಗಿ ನಡೆಸುವುದರಿಂದ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗಿರುತ್ತದೆ. ಎಲ್ಲ ರಾಜಕೀಯ ಪಕ್ಷದ ಮುಖಂಡರುಗಳು ಹಾಗೂ ಸ್ಪರ್ಧಾಳುಗಳು ಕಾನೂನು ಉಲ್ಲಂಘನೆ ಮಾಡದಂತೆ ಚುನಾವಣಾ ನಿಯಮಗಳನ್ನು ಪಾಲನೆ ಮಾಡಬೇಕಿದೆ.

ರಾಜಕೀಯ ಪಕ್ಷಗಳು ಸಭೆ, ಸಮಾರಂಭಗಳನ್ನು ಏರ್ಪಡಿಸಿ, ವೇದಿಕೆಯ ಮೇಲೆ ಪಕ್ಷದ ಬಾವುಟ ಬ್ಯಾನರ್ ಗಳನ್ನು ಬಳಸುವಂತಿಲ್ಲ. ಸ್ಪರ್ಧಿಸುವ ಅಭ್ಯರ್ಥಿಗಳನ್ನು ತಮ್ಮ ಪಕ್ಷದ/ಬೆಂಬಲಿತ ಅಭ್ಯರ್ಥಿ ಎಂದು ಪರಿಚಯಿಸುವುದು ಹಾಗೂ ಅವರ ಪರವಾಗಿ ಮತ ನೀಡಲು ಮತದಾರರನ್ನು ಕೋರುವಂತಿಲ್ಲ. ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು, ರಾಜಕೀಯ ಮುಖಂಡರ ಭಾವಚಿತ್ರ ಪಕ್ಷದ ಚಿಹ್ನೆ ಇರುವ ಕರಪತ್ರಗಳನ್ನು ಮುದ್ರಿಸುವುದು/ಹಂಚುವುದು ಮಾಡುವಂತಿಲ್ಲ. ರಾಜಕೀಯ ಮುಖಂಡರ ಭಾವಚಿತ್ರ ರಾಜಕೀಯ ಪಕ್ಷಗಳ ಚಿಹ್ನೆ ಇರುವ ಕರಪತ್ರಗಳು, ಕಟೌಟ್‍ಗಳು, ಬ್ಯಾನರ್ ಮತ್ತು ಬಂಟಿಂಗ್‍ಗಳ ಮೂಲಕ ಪ್ರಚಾರ ಮಾಡುವಂತಿಲ್ಲ. ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಟಿ.ವಿ ಮಾಧ್ಯಮಗಳು ಪತ್ರಿಕೆಗಳ ಮೂಲಕ ರಾಜಕೀಯ ಮುಖಂಡರ ಭಾವಚಿತ್ರ ಮತ್ತು ಪಕ್ಷಗಳ ಚಿಹ್ನೆಗಳನ್ನು ಬಳಸಿ ಜಾಹೀರಾತು ನೀಡುವಂತಿಲ್ಲ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮಾತಾನಾಡಿ ಗ್ರಾಮಪಂಚಾಯಿತಿ ಚುನಾವಣೆ ಸಂಬಂಧ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಎಲ್ಲಿಯಾದರೂ ಅಭ್ಯರ್ಥಿಗಳ ಹರಾಜು ಪ್ರಕ್ರಿಯೆ ಕಂಡುಬಂದರೆ ಸಂಬಂಧಿಸಿದವರ ವಿರುದ್ದ ಎಫ್‍ಐಆರ್ ಮಾಡಲಾಗುವುದು. ಹಾಗೂ ಚುನಾವಣೆ ಬಹಿಷ್ಕರಿಸುವವರÀ ಮನವೊಲಿಸಲಾಗುವುದು. ಈಗಾಗಲೇ ಪರವಾನಾಗಿ ಪಡೆದಿರುವ ಶಸ್ತ್ರಾಸ್ತ್ರಗಳನ್ನು ಇಲಾಖೆಯಲ್ಲಿ ಡೆಪಾಸಿಟ್ ಮಾಡಲು ತಿಳಿಸಲಾಗಿದೆ ಎಂದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಮಮತ ಹೊಸಗೌಡರ್, ದೂಡಾ ಆಯುಕ್ತ ಬಿ.ಟಿ.ಕುಮಾರಸ್ವಾಮಿ, ಹರಿಹರ-ಕೊಟ್ಟೂರು ರೈಲ್ವೆ ಭೂಸ್ವಾಧಿನಾಧಿಕಾರಿ ರೇಷ್ಮಾ ಹಾನಗಲ್, ಅಬಕಾರಿ ಡಿವೈಎಸ್‍ಪಿ ನಾಗರಾಜ್, ಚುನಾವಣಾ ತಹಶೀಲ್ದಾರ್ ಪ್ರಸಾದ್, ಎಲ್ಲಾ ತಾಲ್ಲೂಕುಗಳ ತಹಶೀಲ್ದಾರ್‍ಗಳು ಪೊಲೀಸ್ ಇಲಾಖೆ ಅಧಿಕಾರಿಗಳು ಉಪಸ್ಥಿತಿರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

3 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

6 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

12 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

12 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

13 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

24 hours ago