ಬಿಸಿ ಬಿಸಿ ಸುದ್ದಿ

ಹರಿದು ಚಿಂದಿಯಾಗಿರುವ ಹೊನಗುಂಟಾ ಗ್ರಾಮದ ರಸ್ತೆ

ಶಹಾಬಾದ:ಹರಿದು ಚಿಂದಿಯಾಗಿರುವ ರಸ್ತೆ, ಎಲ್ಲಿ ನೋಡಿದರಲ್ಲಿ ತಗ್ಗು ಗುಂಡಿಗಳು, ಇಲ್ಲಿನ ಸಂಚರಿಸುವ ಜನರಿಗೆ ಎಲ್ಲಿಲ್ಲದ ಸಂಕಟ.ಇದು ನಗರದ ಸಮೀಪದ ನಿಜಾಮ ಬಜಾರದಿಂದ ಹೊನಗುಂಟಾ ಗ್ರಾಮಕ್ಕೆ ಹೋಗುವ ರಸ್ತೆಯ ದುಸ್ಥಿತಿ.

ಇಲ್ಲಿನ ರಸ್ತೆಯಿಂದ ಹೊರಡುವ ಜನರಿಗೆ ಹದಗೆಟ್ಟ ರಸ್ತೆಗಳ ದರ್ಶನ ಆಗದೇ ಇರಲಾರದು.ಹದಗೆಟ್ಟ ಇಲ್ಲಿನ ರಸ್ತೆಗಳು ವರ್ಷದ ಎಲ್ಲಾ ದಿನಗಳಲ್ಲಿ ಇದೇ ಸ್ಥಿತಿಯಲ್ಲಿರುತ್ತವೆ. ಈ ರಸ್ತೆಯ ದುರಸ್ತಿ ಯಾವಾಗ? ಎಂಬುದೆ ನರಕಯಾತನೇ ಅನುಭವಿಸುತ್ತಿರುವ ಪ್ರಯಾಣಿಕರ ಯಕ್ಷ ಪ್ರಶ್ನೆಯಾಗಿದೆ.

ಜನಸ್ನೇಹಿಯಾಗಿರಬೇಕಾದ ರಸ್ತೆಗಳು ಮಾತ್ರ ಹದಗೆಟ್ಟಿವೆ. ರಸ್ತೆಗಳಿಗಾಗಿ ಸರಕಾರ ಕೊಟ್ಯಾಂತರ ರೂಪಾಯಿಗಳು ಖರ್ಚು ಮಾಡುವ ಹಣ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಾಗಿದೆ. ಈ ರಸ್ತೆಯ ಮೂಲಕ ಪ್ರತಿನಿತ್ಯ ಸಾವಿರಾರು ವಾಹನಗಳು ಚಲಿಸುತ್ತವೆ. ಅದರೊಳಗೆ ಪ್ರಯಾಣಿಸುವ ಪ್ರಯಾಣಿಕರು ಜಟಕಾ ಬಂಡಿಯೊಳಗೆ ಕುಂತ ಅನುಭವ ಆಗದೇ ಇರಲಾರದು. ಜೀವ ಕೈಯಲ್ಲಿ ಹಿಡಿದುಕೊಂಡು ಇಲ್ಲಿನ ಜನರು ಪ್ರಯಾಣ ಬಯಸಬೇಕಾದ ಪರಿಸ್ಥಿತಿ ಬಂದೊದಗಿದೆ ಎಂದರೆ ಇಲ್ಲಿನ ರಸ್ತೆಗಳಲ್ಲಿ ತೆಗ್ಗು ಗುಂಡಿಗಳನ್ನು ಎಣಿಸಲು ಸಾಧ್ಯವಿಲ್ಲಷ್ಟರ ಮಟ್ಟಿಗೆ ಹಾಳಾಗಿದೆ.

ಸುಮಾರು 25 ರಿಂದ 40 ಟನ್ ಭಾರ ಹೊತ್ತ ಸಿಮೆಂಟ ಹಾಗೂ ಫರ್ಸಿ ಲಾರಿಗಳಿಂದ ರಸ್ತೆ ಸಂಪೂರ್ಣ ಹಾಳಾಗಿ ಹೋಗಿದೆ. ಅಲ್ಲದೆ ಒಬ್ಬರಿಗೊಬ್ಬರೂ ಗುರುತು ಸಿಗದ ಹಾಗೇ ಮುಖ, ಮೈಗೆ ಭಾರಿ ಪ್ರಮಾಣದ ಧೂಳು ಹತ್ತುವುದರಿಂದ ಜನರು ಅನೇಕ ತೊಂದರೆಗಳಿಗೆ ಒಳಗಾಗುತ್ತಿದ್ದಾರೆ. ಕಳಪೆ ಡಾಂಬರೀಕರಣದಿಂದ ರಸ್ತೆ ಕಿತ್ತು ಹೋಗಿ ದೊಡ್ಡ ದೊಡ್ಡ ತಗ್ಗು ದಿನ್ನೆಗಳು ನಿರ್ಮಾಣವಾಗಿದೆ. ಇದರಿಂದ ಜನರು ರಸ್ತೆಗಿಳಿಯಲು ತೊಂದರೆ ಪಡಬೇಕಾಗಿದೆ. ವಾಹನ ಸವಾರರು ಈ ಹದಗೆಟ್ಟ ರಸ್ತೆಯ ಸುಧಾರಣೆಗೆ ಮುಂದಾಗದ ಲೋಕೋಪಯೋಗಿ ಇಲಾಖೆ ಹಾಗೂ ಸಂಬಂಧಿಸಿದ ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.ಸದ್ಯ ಈ ರಸ್ತೆಯಿಂದ ಹೋಗಬೇಕಾದರೆ ಉಯ್ಯಾಲೆ ಆಡಿದಂತಾಗುತ್ತದೆ. ಸುಲಭ ಹೆರಿಗೆಗೆ ಇಲ್ಲಿಗೆ ಬರಬೇಕಷ್ಟೆ ಎಂದು ಇಲ್ಲಿನ ಜನರು ಈ ರಸ್ತೆಯ ಕುರಿತು ವ್ಯಂಗವಾಗಿ ಮಾತನಾಡುತ್ತಾರೆ.
ಇದೇ ರಸ್ತೆಯ ಮೂಲಕ ಹೊನಗುಂಟಾ ಗ್ರಾಮದ ವಿವಿಧ ಪಕ್ಷದ ಮುಖಂಡರು ಅನೇಕ ಬಾರಿ ತಿರುಗಾಡಿದರೂ ಬಹುಶ: ಅವರಿಗೆ ಇದರ ಅನುಭವ ಬಂದಿರಲಕ್ಕಿಲ್ಲ. ಇವರು ಇದ್ದು ಏನು ಪ್ರಯೋಜನವಿಲ್ಲ ಎಂದು ಪ್ರಯಾಣಿಕರ ಅಂಬೋಣವಾಗಿದೆ.

ಇಲ್ಲಿನ ರಸ್ತೆಗಳು ಸಂಪೂರ್ಣ ಹದಗೆಟ್ಟು ಹೋದರೂ ಸಂಬಂಧಿಸಿದ ಅಧಿಕಾರಿಗಳು ಈ ಕಡೆ ಗಮನಹರಿಸುತ್ತಿಲ್ಲ.ಜನರ ಗೋಳು ಕೇಳುತ್ತಿಲ್ಲ. ಈ ರಸ್ತೆಗಳ ಶಾಶ್ವತ ಸುಧಾರಣೆಗೆ ಸಂಬಂಧಿಸಿದ ಇಲಾಖೆ ಹಾಗೂ ಜನಪ್ರತಿನಿಧಿಗಳು ಇತ್ತ ಗಮನ ಹರಿಸಿ ಕ್ರಮ ಕೈಗೊಳ್ಳುವ ಮೂಲಕ ಪ್ರಯಾಣಿಕರ ನರಕಯಾತನೆ ತಪ್ಪಿಸಬೇಕಾಗಿದೆ– ವಿಶ್ವರಾಜ ಫೀರೋಜಬಾದ ಅಧ್ಯಕ್ಷರು ಕರವೇ ಹೊನಗುಂಟಾ, ಸಂಗಣ್ಣ ಇಜೇರಿ ಬಿಜೆಪಿ ಮುಖಂಡರು ಹೊನಗುಂಟಾ.

emedia line

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 hour ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 hour ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 hour ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

18 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

20 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago