ಶಹಾಬಾದ:ತಾಲೂಕಿನಲ್ಲಿ ಮಂಗಳವಾರ ನಡೆದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯಕಾರಿ ಸಮಿತಿಯ ಚುನಾವಣೆಯಲ್ಲಿ ಸಾವಿತ್ರಿಬಾಯಿ ಪಾಟೀಲ,ಶಿವಪುತ್ರ ಕರಣಿಕ್, ಸಂತೋಷ ಸಲಗರ್, ಸುಲೋಚನಾ ಜಾಧವ ಅವರು ತಾಲೂಕಾ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯಕಾರಿ ಸಮಿತಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಒಟ್ಟು 198 ಮತದಾರರಲ್ಲಿ, 188 ಮತದಾರರು ತಮ್ಮ ಮತ ಚಲಾಯಿಸುವ ಮೂಲಕ 95.54 ಪ್ರತಿಶತ ಮತ ಚಲಾವಣೆಯಾದವು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯಕಾರಿ ಸಮಿತಿಯ ಚುನಾವಣೆಯ 8 ಅಭ್ಯರ್ಥಿಗಳಲ್ಲಿ ಸಾವಿತ್ರಿಬಾಯಿ ಪಾಟೀಲ – 109 ಮತ, ಶಿವಪುತ್ರ ಕರಣಿಕ್-99, ಸಂತೋಷ ಸಲಗರ್-93, ಸುಲೋಚನಾ ಜಾಧವ -88 ಮತಗಳನ್ನು ಪಡೆದುಕೊಂಡು ಗೆಲುವು ಸಾಧಿಸಿದ್ದಾರೆ. ರಿಹಾನ ಪರವೀನ್-81, ಶಬ್ಬೀರಮೀಯಾ-80,ರುಕ್ಸಾನಾ ಬೇಗಂ-79, ಪ್ರಮೋದಕುಮಾರ-71 ಮತಗಳನ್ನು ಪಡೆದು ಸೋಲನ್ನು ಅನುಭವಿಸಿದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯಕಾರಿ ಸಮಿತಿಗೆ ನಡೆದ ಚುನಾವಣೆಯಲ್ಲಿ, ಮತ ಎಣಿಕೆಯ ನಂತರ ಸಾವಿತ್ರಿಬಾಯಿ ಪಾಟೀಲ,ಶಿವಪುತ್ರ ಕರಣಿಕ್, ಸಂತೋಷ ಸಲಗರ್, ಸುಲೋಚನಾ ಜಾಧವ ಆಯ್ಕೆಯಾಗಿದ್ದಾರೆ ಎಂದು ಚುನಾವಣಾವಧಿಕಾರಿ ರಮೇಶ ಥಳಂಗೆ ಮತ್ತು ಸಹಾಯಕ ಚುನಾವಣಾಧಿಕಾರಿ ಹಾಜಪ್ಪ ತಿಳಿಸಿದರು.
ವಿಜಯೋತ್ಸವ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯಕಾರಿ ಸಮಿತಿಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಾಲ್ಕು ಜನರ ಬೆಂಬಲಿಗರು, ಶಿಕ್ಷಕರು ಹಾಗೂ ಹಿತೈಷಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…