ಇ-ಸ್ಕಾಲರಶಿಫ್ ಸೌಲಭ್ಯ ಪಡೆಯಲು ವಿಕಲಚೇತನ ವಿದ್ಯಾರ್ಥಿಗಳಿಗೆ ಸೂಚನೆ

0
22

ಕಲಬುರಗಿ: ಕೇಂದ್ರ ಸರ್ಕಾರದ 2020-21ನೇ ಸಾಲಿನ ನ್ಯಾಷನಲ್ ಇ-ಸ್ಕಾಲರಶಿಫ್ ಯೋಜನೆಯಡಿ ಉನ್ನತ ವ್ಯಾಸಂಗ ಕೈಗೊಂಡಿರುವ ವಿಕಲಚೇತನರ ವಿದ್ಯಾರ್ಥಿಗಳು ಈ ಯೋಜನೆಯಡಿ ವೆಬ್‍ಸೈಟ್‍ನಲ್ಲಿ ಡಿ.31 ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳು, ಶಿಕ್ಷಣ ಸಂಸ್ಥೆಗಳ ವಿಕಲಚೇತನರು ವಿದ್ಯಾರ್ಥಿ ವೇತನವನ್ನು ಪಡೆಯಲು www.scholarships.gov.in ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here